
ಜೆಮ್‌ಶೆಡ್‌ಪುರ (ಸೆ.24) ನಿಲ್ಲಿಸಿದ್ದ ಟ್ರಕ್ ಹಾಗೂ ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಚಿವರ ಪುತ್ರಿ ಸೇರಿದಂತೆ ನಾಲ್ವರು ಮೃತಪಟ್ಟ ಘಟನೆ ಜಾರ್ಖಂಡ್‌ನ ಜೆಮ್‌ಶೆಡ್‌ಪುರದಲ್ಲಿ ನಡೆದಿದೆ. ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ದೀಪಿಕಾ ಪಾಂಡೆ ಸಿಂಗ್ ಪುತ್ರಿ ತ್ರಿಷಾ ಸಿಂಗ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ತೃಷಾ ಸಿಂಗ್ ಸೇರಿದಂತೆ ನಾಲ್ವರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರೂ ಮೃತಪಟ್ಟಿದ್ದಾರೆ.
ಸೋನಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಮರಿನ್ ಡ್ರೈವ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ರಸ್ತೆ ಪಕ್ಕಕ್ಕೆ ಟ್ರಕ್ ನಿಲ್ಲಿಸಲಾಗಿತ್ತು. ದೀಪಿಕಾ ಪಾಂಡೆ ಸಿಂಗ್ ಪುತ್ರಿ ತೃಷಾ ಸಿಂಗ್ ಸೇರಿದಂತೆ ನಾಲ್ವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬೆಳಗಿನ ಜಾವ ಕಾರು ವೇಗವಾಗಿ ಸಾಗುತ್ತಿದ್ದ ವೇಳೆ ಕಾರು ಅಪಘಾತಕ್ಕೀಡಾಗಿದೆ. ಬೆಳಗಿನ ಜಾವ ಕಾರ್ಯಕ್ರಮ ನಿಮಿತ್ತ ಸಚಿವೆ ದೀಪಿಕಾ ಪಾಂಡೆ ಸಿಂಗ್ ಪುತ್ರಿ ಸೇರಿದಂತೆ ನಾಲ್ವರು ಕಾರಿನಲ್ಲಿ ತೆರಳುತ್ತಿದ್ದರು. ಬೆಳಗಿನ ಜಾವವಾಗಿದ್ದ ಕಾರಣ ಟ್ರಕ್ ಗಮನಿಸಿಲ್ಲ. ವೇಗವಾಗಿ ಬಂದ ಕಾರು ಟ್ರಕ್‌ಗೆ ಡಿಕ್ಕಿಯಾಗಿದೆ. ಅಪಘಾತ ತೀವ್ರವಾಗಿದ್ದ ಕಾರಣ ಗಾಯದ ಪ್ರಮಾಣಗಳು ಹೆಚ್ಚಾಗಿದೆ.
ಕಾರು ಅಪಘಾತ ಕುರಿತು ಆಘಾತ ವ್ಯಕ್ತಪಡಿಸಿದ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್, ದೀಪಿಕಾ ಪಾಂಡೆ ಸಿಂಗ್ ಪುತ್ರಿ ಸೇರಿದಂತೆ ನಾಲ್ವರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಘಟನೆ ತೀವ್ರ ನೋವುಂಟು ಮಾಡಿದೆ. ಅಪಘಾತದಲ್ಲಿ ಸರ್ಕಾರದ ಸಚಿವರ ಪುತ್ರಿ ಹಾಗೂ ಇತರ ಮೂವರು ಮೃತಪಟ್ಟಿದ್ದಾರೆ. ನಾಲ್ವರನ್ನು ಜಾರ್ಖಂಡ್ ಕಳೆದುಕೊಂಡಿದೆ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕುಟುಂಬಕ್ಕೆ ನೀಡಲಿ ಎಂದು ಹೇಮಂತ್ ಸೊರೆನ್ ಹೇಳಿದ್ದಾರೆ.
ಪೋಷಕರ ಅತ್ಯಂತ ನೋವಿನ ಹಾಗೂ ದುಃಖದ ವಿಚಾರ ಮಕ್ಕಳನ್ನು ಕಳೆದುಕೊಳ್ಳುವುದು. ಇಲ್ಲಿ ನಾಲ್ವರು ಮಕ್ಕಳ ಅಪಘಾತದಲ್ಲಿ ಬಲಿಯಾಗಿದ್ದಾರೆ ಎಂದು ಹೇಮಂತ್ ಸೊರೆನ್ ಹೇಳಿದ್ದಾರೆ. ಇತ್ತ ಘಟನೆ ಕುರಿತು ಜಾರ್ಖಂಡ್ ಸಂಪುಟದ ಇತರ ಸಚಿವರು ಸಂತಾಪ ಸೂಚಿಸಿದ್ದಾರೆ. ಇತ್ತ ಸೋಶಿಯಲ್ ಮೀಡಿಯಾ ಸೇರಿದಂತೆ ಎಲ್ಲೆಡೆ ತೀವ್ರ ಸಂತಾಪ ಸೂಚಿಸಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ