
ರಾಂಚಿ (ಜೂ.18): ಇಲ್ಲಿನ ಆರ್‌ಎಸ್‌ಎಸ್ ಕಚೇರಿ(RSS office) ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್(Petrol bomb) ಎಸೆದು ಸ್ಫೋಟಿಸುವ ಯತ್ನ ಮಾಡಿದ್ದಾರೆ. ಮಂಗಳವಾರ ನಡುರಾತ್ರಿ 12.30ಕ್ಕೆ ಇಬ್ಬರು ಆಗಂತುಕರು ಪೆಟ್ರೋಲ್ ಸ್ಫೋಟಕ ಎಸೆದು ಪರಾರಿಯಾಗಿದ್ದಾರೆ.
ದಾಳಿ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಜೆಎಂಎಂ-ಕಾಂಗ್ರೆಸ್ ಆಡಳಿತ(JMM-Congress govt)ವಿರುವ ರಾಜ್ಯದಲ್ಲಿನ ಕಾನೂನು ವ್ಯವಸ್ಥೆಯ ದುಃಸ್ಥಿತಿಯನ್ನು ಈ ಘಟನೆ ತೋರಿಸುತ್ತದೆ ಎಂದು ಕಿಡಿ ಕಾರಿದೆ.
ಘಟನೆ ಬಗ್ಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಮಾತನಾಡಿದ್ದು, ‘ಇದು ದೊಡ್ಡ ಸಂಚಿನ ಭಾಗದಂತಿದೆ. ಕೂಲಂಕಷ ತನಿಖೆ ಮಾಡಿ, ಇದರ ಹಿಂದಿರುವವರು ಮತ್ತು ಅವರ ಉದ್ದೇಶವನ್ನು ಬಯಲು ಮಾಡಬೇಕು’ ಎಂದು ಆಗ್ರಹಿಸಿದ್ದಾರೆ. ಅದರ ಬೆನ್ನಲ್ಲೇ ದಾಳಿ ತನಿಖೆಗೆ ಸರ್ಕಾರ ವಿಶೇಷ ತಂಡ ರಚಿಸಿದೆ. ಮತ್ತೊಂದೆಡೆ ಎನ್‌ಐಎ ಹಾಗೂ ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ