
ನವದೆಹಲಿ (ಡಿಸೆಂಬರ್ 27, 2023): ಸಾಮಾಜಿಕ ಜಾಲತಾಣದ ಪೋಸ್ಟ್‌ವೊಂದಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ವಿದ್ಯಾರ್ಥಿಯೊಬ್ಬನನ್ನು ಬುಧವಾರ ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ. ಜಾರ್ಖಂಡ್ ಮೂಲದ ವಿದ್ಯಾರ್ಥಿ, 'ಶೀಘ್ರದಲ್ಲೇ ಪುಲ್ವಾಮಾ ರೀತಿಯ ದಾಳಿ ನಡೆಯಲಿದೆ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ ಎಂದು ವಿವರಗಳು ಹೇಳುತ್ತಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಕೂಡ ದಾಖಲಾಗಿದ್ದು, ಆರೋಪಿ ವಿದ್ಯಾರ್ಥಿಯೊಂದಿಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಉತ್ತರ ಪ್ರದೇಶದ ಸಹರಾನ್‌ಪುರ ಪೊಲೀಸರು ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ ಮತ್ತು ತಂಡವು ವಿಚಾರಣೆಯಲ್ಲಿ ತೊಡಗಿಸಿಕೊಂಡಿದೆ ಎಂದು ಎಕ್ಸ್ ಪೋಸ್ಟ್ ( ಈ ಹಿಂದಿನ ಟ್ವಿಟ್ಟರ್) ನಲ್ಲಿ ಖಚಿತಪಡಿಸಲಾಗಿದೆ.
ಇದನ್ನು ಓದಿ: ಜಮ್ಮು - ಕಾಶ್ಮೀರದಲ್ಲಿ ಸೇನೆ ಮೇಲೆ ದಾಳಿ: ಚೀನಾ ನಿರ್ಮಿತ ಶಸ್ತ್ರಾಸ್ತ್ರ ಬಳಸ್ತಿರೋ ಭಯೋತ್ಪಾದಕರು
ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ಮೂವರನ್ನು ಬಂಧಿಸಿ ಆರೋಪಿಗಳಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಶಂಕಿತರನ್ನು ಸೇನೆ ಮತ್ತು ಪೊಲೀಸರು ಜಂಟಿಯಾಗಿ ವಿಚಾರಣೆ ನಡೆಸುತ್ತಿದ್ದಾರೆ ಎಂದೂ ತಿಳಿದುಬಂದಿದೆ.
2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ 40 ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್‌ಪಿಎಫ್) ಸಿಬ್ಬಂದಿ ಹುತಾತ್ಮರಾಗಿದ್ದರು. ಫೆಬ್ರವರಿ 14 ರಂದು ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಾಹನಗಳ ಬೆಂಗಾವಲು ವಾಹನದ ಮೇಲೆ ಲೆಥಾಪೋರಾದಲ್ಲಿ ಆತ್ಮಹತ್ಯಾ ಬಾಂಬರ್ ದಾಳಿ ನಡೆಸಿದಾಗ ಈ ಘಟನೆ ಸಂಭವಿಸಿತ್ತು.
ಇದನ್ನು ಓದಿ: ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ನಿವೃತ್ತ ಪೊಲೀಸ್ ಅಧಿಕಾರಿ: ಮತ್ತೆ ಭಯೋತ್ಪಾದಕರ ಅಟ್ಟಹಾಸ!
ನಂತರ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. ಆದರೂ, 2019 ರಲ್ಲಿ ನಡೆದ ಲೋಕಸಭೆ ಚುನಾವಣೆ ವೇಳೆ ಬಿಜೆಪಿ ಈ ಘಟನೆಯನ್ನು ಚುನಾವಣಾ ಅಸ್ತ್ರವನ್ನಾಗಿ ಮಾಡಿಕೊಂಡಿತು. ಹಾಗೆ, ಇದರಿಂದ ಬಿಜೆಪಿಗೆ ಮರಳಿ ಅಧಿಕಾರಕ್ಕೆ ಬರಲು ಲಾಭವಾಯಿತು ಎಂದೂ ಹಲವರು ಆರೋಪಿಸಿದ್ದರು.
ಇದನ್ನು ಓದಿ: ಕಾಶ್ಮೀರಿ ಉಗ್ರರ ಜೊತೆ ಸೇರಿ ಪನ್ನು ಹೊಸ ಉಗ್ರ ಸಂಘಟನೆ! ಕಾಶ್ಮೀರ್ - ಖಲಿಸ್ತಾನ್ ರೆಫರೆಂಡಮ್ ಫ್ರಂಟ್ ಘೋಷಣೆ
ಉಗ್ರರ ಗುಂಡೇಟಿನಿಂದಾಗಿ 8 ವರ್ಷ ಕೋಮಾದಲ್ಲಿದ್ದ ಯೋಧ ಕರಣ್‌ಬೀರ್ ಸಾವು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ