
ರಾಂಬನ್/ ಜಮ್ಮು (ಏ.21): ಜಮ್ಮು-ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಮೇಘಸ್ಫೋಟದ ಪರಿಣಾಮ ಭಾನುವಾರ ಸುರಿದ ಭಾರೀ ಮಳೆಯಿಂದ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಣಾಮವಾಗಿ 3 ಜನ ಸಾವನ್ನಪ್ಪಿದ್ದು, 100ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ.
ಶನಿವಾರವೂ ಸಿಡಿಲು ಬಡಿದು ಓರ್ವ ಮಹಿಳೆ ಸೇರಿ 2 ಸಾವನ್ನಪ್ಪಿದ್ದು, ಕಳೆದೆರಡು ದಿನದಲ್ಲಿ ಜಮ್ಮುವಿನಲ್ಲಿ ಮಳೆಯಿಂದಾಗಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ: ಉಡುಪಿ ಜಿಲ್ಲೆಯಲ್ಲಿ ಮೇಘಸ್ಫೋಟ?: ದಿಢೀರ್ ಉಕ್ಕೇರಿದ ನದಿ, 10 ಮನೆಗಳು ಮುಳುಗಡೆ
ಮೇಘಸ್ಫೋಟದೊಂದಿಗೆ ವೇಗವಾಗಿ ಬೀಸುವ ಗಾಳಿ, ಭೂಕುಸಿತ, ಆಲಿಕಲ್ಲು ಮಳೆಯೂ ಸಂಭವಿಸಿದ್ದು, ಧರಂ ಕುಂಡ್ ಗ್ರಾಮದಲ್ಲಿ 10 ಮನೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿದೆ. 40ಕ್ಕೂ ಅಧಿಕ ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಹಲವು ವಾಹನಗಳೂ ಕೊಚ್ಚಿಕೊಂಡು ಹೋಗಿವೆ. ಸುರಿಯುತ್ತಿದ್ದ ಧಾರಾಕಾರ ಮಳೆಯ ನಡುವೆಯೂ ಪೊಲೀಸರು ರಕ್ಷಣಾ ಕಾರ್ಯ ಕೈಗೊಂಡಿದ್ದು, 100ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ. ಹೆದ್ದಾರಿ ಬಂದ್:
ಅತ್ತ ಜಮ್ಮು-ಶ್ರೀನಗರ ನಡುವಿನ 250 ಕಿ.ಮೀ ಉದ್ದದ ಸರ್ವಋತು ರಾಷ್ಟ್ರೀಯ ಹೆದ್ದಾರಿಯ ಬಳಿ ಹಲವು ಕಡೆಗಳಲ್ಲಿ ಭೂಕುಸಿತ ಮಣ್ಣು ಕುಸಿತ ಸಂಭವಿಸಿದ್ದು, ಭಾರೀ ಬಂಡೆಗಳು ಉರುಳುತ್ತಿವೆ. ಆದಕಾರಣ, ಪರಿಸ್ಥಿತಿ ಸುಧಾರಿಸುವ ತನಕ ಆ ಮಾರ್ಗದಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ