
ಮುಂಬೈ(ಜೂ.21): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಶಿವಸೇನಾ ಶಾಸಕ ಪ್ರತಾಪ್ ಸರ್ ನಾಯಕ್, ಬಿಜೆಪಿಯ ಜೊತೆ ರಾಜಿ ಮಾಡಿಕೊಳ್ಳುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದಾರೆ.
ಬಿಜೆಪಿಯ ಜೊತೆ ಮೈತ್ರಿ ಕಡಿದುಕೊಂಡಿದ್ದರೂ ಬಿಜೆಪಿ ಹಾಗೂ ಶಿವಸೇನೆ ಮುಖಂಡರ ನಡುವಿನ ವೈಯಕ್ತಿಕ ಸಾಮರಸ್ಯಕ್ಕೆ ಧಕ್ಕೆ ಬಂದಿಲ್ಲ. ತಡವಾಗುವ ಮುನ್ನ ಬಿಜೆಪಿಯ ಜೊತೆ ಸಖ್ಯ ಬೆಳೆಸುವುದು ಉತ್ತಮ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ಸರ್ಕಾರದಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂಬ ವದಂತಿಗಳ ಬೆನ್ನಲ್ಲೇ ಇಂಥದ್ದೊಂದು ಪ್ರಸ್ತಾವನೆ ಇಟ್ಟಿರುವುದು ಕುತೂಹಲಕ್ಕೆ ಕಾರಣವಾಗಿದೆ.
‘ಕಳೆದ ಏಳು ತಿಂಗಳಿನಿಂದ ನಾನು ಏಕಾಂಗಿಯಾಗಿ ಹೋರಾಟ ನಡೆಸುತ್ತಿದ್ದೇನೆ. ನಮ್ಮ ನಾಯಕರಿಂದಾಗಲೀ ಅಥವಾ ಸರ್ಕಾರದಿಂದಾಗಲಿ ಯಾವುದೇ ಸಹಾಯ ದೊರೆತಿಲ್ಲ. ಮಹಾಭಾರತದ ಅಭಿಮನ್ಯು ಅಥವಾ ಕರ್ಣನ ರೀತಿ ಶರಣಾಗತನಾಗುವ ಬದಲು ಅರ್ಜುನನ ರೀತಿ ಹೋರಾಟದಲ್ಲಿ ನಾನು ನಂಬಿಕೆ ಇಟ್ಟಿದ್ದೇನೆ. ಸದ್ಯದಲ್ಲೇ ಮುಂಬೈ ಸೇರಿದಂತೆ ಹಲವು ನಗರಗಳಲ್ಲಿ ನಗರ ಪಾಲಿಕೆ ಚುನಾವಣೆ ಎದುರಾಗಲಿದೆ. ಕಾಂಗ್ರೆಸ್ ಮತ್ತು ಎನ್ಸಿಪಿ ಶಿವಸೇನೆಯನ್ನು ಒಡೆಯಲು ಯತ್ನಿಸುತ್ತಿವೆ. ಹೀಗಾಗಿ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಕೈಜೋಡಿಸಿದರೆ ಪಕ್ಷವನ್ನು ಉಳಿಸಬಹುದಾಗಿದೆ ಎಂದು ನನ್ನಂತಹ ಹಲವು ಕಾರ್ಯಕರ್ತರ ಅಭಿಪ್ರಾಯವಾಗಿದೆ’ ಎಂದು ಸರ್ ನಾಯಕ್ ಹೇಳಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಲಾಯ ಕಳೆದ ನವೆಂಬರ್ನಲ್ಲಿ ಸರ್ ನಾಯಕ್ ಅವರ ಮನೆಯ ಮೇಲೆ ದಾಳಿ ನಡೆಸಿತ್ತು. ಆದರೆ, ಇದನ್ನು ರಾಜಕೀಯ ಷಡ್ಯಂತ್ರ ಎಂದು ಶಿವಸೇನೆ ಆರೋಪಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ