
ನವದೆಹಲಿ: ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಚಿಸಿದ್ದ ಜಂಟಿ ಸಮಿತಿ ನವದೆಹಲಿಯಲ್ಲಿ ವಿಜಯದಶಮಿ ದಿನ ತನ್ನ ಮೊದಲ ಸಭೆ ನಡೆಸಿದ್ದು, ಶೀಘ್ರವೇ ಸಕ್ಕರೆ ವಲಯದ ಹೊಸ ಮಾರ್ಗಸೂಚಿ ರೂಪಿಸಲು ಸನ್ನದ್ಧವಾಗಿದೆ.
ರಮೇಶ್ ಚಂದ್ರ ಅಧ್ಯಕ್ಷತೆಯ ಈ ಜಂಟಿ ಸಮಿತಿ ಬುಧವಾರ ತನ್ನ ಮೊದಲ ಸಭೆ ನಡೆಸಿದ್ದು, ರಾಜ್ಯ ಸರ್ಕಾರಗಳು, ಸಕ್ಕರೆ ಕಾರ್ಖಾನೆಗಳು, ಕಬ್ಬು ಬೆಳೆಗಾರರು ಮತ್ತು ಕೃಷಿ ವಿಜ್ಞಾನಿಗಳೊಂದಿಗೆ ಅಗತ್ಯ ಸಮಾಲೋಚನೆ ನಡೆಸಲು ನಿರ್ಧರಿಸಿದೆ.
ಕಬ್ಬು ಬೆಳೆಗಾರರ ಸಮಸ್ಯೆಗಳು ಸೇರಿದಂತೆ ಸಮಗ್ರ ಸಕ್ಕರೆ ವಲಯದ ಸಾಧಕ-ಬಾಧಕಗಳ ಕುರಿತು ಸಮಾಲೋಚನೆಗೆ ಕಬ್ಬು ಬೆಳೆಗಾರರು, ಸಕ್ಕರೆ ಕಾರ್ಖಾನೆಗಳ ಸಂಘಗಳು, ಒಕ್ಕೂಟಗಳು, ಸಕ್ಕರೆ ಮತ್ತು ಕಬ್ಬು ಕ್ಷೇತ್ರದ ಪ್ರಮುಖ ಸಂಶೋಧನಾ ಸಂಸ್ಥೆಗಳನ್ನು ಸಹ ತೊಡಗಿಸಿಕೊಳ್ಳಲು ಸಮಿತಿ ತೀರ್ಮಾನಿಸಿದೆ.
ಕರ್ನಾಟಕ, ಮಹಾರಾಷ್ಟ್ರ, ಉತ್ತರಪ್ರದೇಶ, ಹರ್ಯಾಣ ಸೇರಿದಂತೆ ಕಬ್ಬು ಬೆಳೆಯುವ ಪ್ರದೇಶಗಳ ವಿಜ್ಞಾನಿಗಳು, ಸಂಶೋಧಕರು ಹಾಗೂ ಕೃಷಿ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳನ್ನೂ ಸಮಾಲೋಚನಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಿದ್ದು, ಶೀಘ್ರದಲ್ಲೇ ಜಂಟಿ ಸಮಿತಿ ಕಾರ್ಯ ಆರಂಭವಾಗಲಿದೆ.
ವೈಜ್ಞಾನಿಕ ಸಲಹೆ-ಸೂಚನೆಗಳನ್ನು ಸ್ವೀಕರಿಸುವ ಜಂಟಿ ಸಮಿತಿ ಸಕ್ಕರೆ ವಲಯದ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿಗೆ ಹೊಸ ಮಾರ್ಗಸೂಚಿ ರೂಪಿಸುವ ಕುರಿತು ತನ್ನ ವರದಿಯಲ್ಲಿ ಉಲ್ಲೇಖಿಸುವ ನಿರೀಕ್ಷೆಯಿದೆ.
ಸುಸ್ಥಿರ ನೀಲನಕ್ಷೆಗೆ ಪ್ಲ್ಯಾನ್
ದೇಶದ ಸಕ್ಕರೆ ವಲಯಕ್ಕೆ ಭದ್ರ ಹಾಗೂ ಸುಸ್ಥಿರವಾದ ನೀಲನಕ್ಷೆಯನ್ನು ರೂಪಿಸಲು ಸಹ ರಮೇಶ ಚಂದ್ರ ಅಧ್ಯಕ್ಷತೆಯ ಜಂತು ಸಮಿತಿ ಗಹನ ಚಿಂತನೆ ನಡೆಸಿದೆ.
ಇದನ್ನೂ ಓದಿ: ಬಾಹ್ಯಾಕಾಶದಲ್ಲಿ ಸಂಘರ್ಷವಲ್ಲ, ಸಹಕಾರ ಅಗತ್ಯ: ವಿಶ್ವಸಂಸ್ಥೆ ಸಭೆಯಲ್ಲಿ ಸುಧಾಮೂರ್ತಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ