
ನವದೆಹಲಿ: ಉಗ್ರವಾದದ ವಿರುದ್ಧದ ಹೋರಾಟದಲ್ಲಿ ಭಾರತ ಮತ್ತು ರಷ್ಯಾ ಒಟ್ಟಿಗೆ ಹೆಜ್ಜೆ ಹಾಕುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಉಗ್ರವಾದದ ವಿರುದ್ಧದ ಹೋರಾಟದಲ್ಲಿ ಭಾರತ ಮತ್ತು ರಷ್ಯಾ ಬಹಳ ಹಿಂದಿನಿಂದಲೂ ಹೆಗಲಿಗೆ ಹೆಗಲು ಕೊಟ್ಟು ನಿಂತಿವೆ.
ಅದು ಪಹಲ್ಗಾಂ ದಾಳಿಯಾಗಿರಲಿ ಅಥವಾ ಕ್ರೋಕಸ್ ಸಿಟಿ ಹಾಲ್ ಮೇಲಿನ ದಾಳಿಯಾಗಿರಲಿ - ಈ ಎಲ್ಲಾ ಘಟನೆಗಳ ಮೂಲ ಒಂದೇ. ಉಗ್ರವಾದವು ಮಾನವೀಯತೆಯ ಮೇಲಿನ ನೇರ ದಾಳಿ ಎಂಬುದು ಭಾರತದ ಅಚಲವಾದ ನಂಬಿಕೆ. ಭಾರತ ಮತ್ತು ರಷ್ಯಾ ಉಗ್ರವಾದದ ವಿರುದ್ಧ ಒಟ್ಟಿಗೆ ಹೆಜ್ಜೆ ಹಾಕುತ್ತವೆ’ ಎಂದರು. ಈ ಹಿಂದೆ ಪಹಲ್ಗಾಂ ದಾಳಿಯನ್ನು ರಷ್ಯಾ ಖಂಡಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ