
ಕೇರಳ(ಡಿ.17): ಮೂರು ಹಂತದಲ್ಲಿ ನಡೆದ ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಆಡಳಿತಾರೋಢ LDF ಮೈತ್ರಿಕೂಟ ಅಧಿಕಾರದ ಚುಕ್ಕಾಣಿ ಹಿಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಗ್ರಾಮಪಂಚಾಯಿತು ಹಾಗೂ ಪುರಸಬೆ ಸೇರಿ ಒಟ್ಟು 26 ಸ್ಥಾನ ಗೆದ್ದುಕೊಂಡು 3ನೇ ಸ್ಥಾನದಲ್ಲಿದೆ. ಈ ಬಾರಿಯ ಚುನಾವಣೆಯಲ್ಲಿ ಕೇರಳ ಜನತೆ ಬಿಜೆಪಿಗೆ ಪ್ರಗತಿ ನೀಡಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.
ಶಬರಿಮಲೆಯಲ್ಲಿ ಕೇಸರಿ ಕಮಾಲ್, ಎನ್‌ಡಿಎಗೆ ಬಹುಮತ
ಕೇರಳ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಪ್ರಗತಿ ನೀಡಿದ ಕೇರಳ ಜನತೆಗೆ ನನ್ನ ಧನ್ಯವಾದ. ಕೇರಳ ಬಿಜೆಪಿ, ಕೇರಳ ಬಿಜೆಪಿ ಅಧ್ಯಕ್ಷ ಸುರೇಂದ್ರನ್, ಕಾರ್ಯಕರ್ತರು ನಿರಂತರವಾಗಿ ದುಡಿದಿದ್ದಾರೆ. ಈ ಪ್ರಗತಿಯೊಂದಿಗೆ ಬಿಜೆಪಿ, ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕೋಮುವಾದ ಹಾಗೂ LDF, UDF ರಾಜಕೀಯ ಕುತಂತ್ರಗಳನ್ನು ಬಹಿರಂಗ ಮಾಡುತ್ತೇವೆ ಎಂದು ಜಪಿ ನಡ್ಡಾ ಟ್ವೀಟ್ ಮಾಡಿದ್ದಾರೆ.
ಕೇರಳ 1,200 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿತ್ತು. ಡಿಸೆಂಬರ್ 8, 10 ಹಾಗೂ 14 ರಂದು ಮೂರು ಹಂತದಲ್ಲಿ ಚುನಾವಣೆ ನಡೆದಿತ್ತು. LDF ಮೈತ್ರಿಕೂಟ ಗೆಲುವಿನ ನಗೆ ಬೀರಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ