ದೇಶದಲ್ಲಿ ಕೊರೋನಾ ಲಸಿಕೆ ನೀಡುವಿಕೆ ತ್ವರಿತಗತಿಯಲ್ಲಿ ನಡೆಯುತ್ತಿದೆ. ಮಾರ್ಚ್ 1 ರಿಂದ ಆರಂಭಗೊಂಡಿರುವ 3 ನೇ ಹಂತದ ಲಸಿಕೆ ವಿತರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಲಸಿಕೆ ಪಡೆದಿದ್ದಾರೆ. ಇದೀಗ ಮಾರ್ಚ್ 2 ರಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೆ ಲಸಿಕೆ ನೀಡಲಾಗುತ್ತಿದೆ.
ನವದೆಹಲಿ(ಮಾ.01): ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ನಾಳೆಯಿಂದ(ಮಾ.02) ಲಸಿಕೆ ವಿತರಣೆ ನಡೆಯಲಿದೆ. ಕೋರ್ಟ್ ಆವರಣದಲ್ಲೇ ಲಸಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಲಸಿಕೆಗೆ ಅರ್ಹರಾದ ನ್ಯಾಯಾಧೀಶರು, ನಿವೃತ್ತ ನ್ಯಾಯಧೀಶರು, ಹಾಗೂ ಕುಟುಂಬಸ್ಥರ ಲಸಿಕೆ ಪಡೆಯಲು ಅವಕಾಶ ಮಾಡಿಕೊಡಲಾಗಿದೆ.
ದಪ್ಪ ಚರ್ಮದ ರಾಜಕಾರಣಿಗಳಿಗೆ ಯಾವ ಸೂಜಿ? ಆಸ್ಪತ್ರೆಯಲ್ಲಿ ಮೋದಿ ಹಾಸ್ಯಚಟಾಕಿ
undefined
ನ್ಯಾಯಾಧೀಶರು ಹಾಗೂ ಅವರ ಕುಟುಂಬಸ್ಥರು ಸುಪ್ರೀಂ ಕೋರ್ಟ್ ಸಂಕೀರ್ಣದಲ್ಲಿ ಸ್ಥಾಪಿಸಿರುವ ಕೋವಿಡ್ ಲಸಿಕಾ ಕೇಂದ್ರದಲ್ಲಿ ಅಥವಾ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯುವ ಆಯ್ಕೆ ನೀಡಲಾಗಿದೆ. ಕೇಂದ್ರದ ನಿರ್ದೇಶನದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯುವವರು 250 ರೂಪಾಯಿ ಪಾವತಿಸಬೇಕು ಎಂದಿದೆ
ಮಾರ್ಚ್ 1 ರಿಂದ ಭಾರತದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರ ಉಚಿತವಾಗಿ ಲಸಿಕೆ ನೀಡುತ್ತಿದೆ. ದೇಶಾದ್ಯಂತ 60 ವರ್ಷಕ್ಕಿಂತ ಮೇಲ್ಪಟ್ಟ ರಾಜಕಾರಣಿಗಳು, ನಾಗರೀಕರು ಸೇರಿದಂತೆ ಹಲವರು ಲಸಿಕೆ ಪಡೆದಿದ್ದಾರೆ.