
ನವದೆಹಲಿ(ಮಾ.08): ಹಳೆಯ ಕಾರನ್ನು ಗುಜರಿಗೆ ಹಾಕಿ ಹೊಸ ಕಾರು ಖರೀದಿಸುವ ಗ್ರಾಹಕರಿಗೆ ನೂತನ ವಾಹನ ಖರೀದಿ ನೀತಿಯಡಿ, ಶೇ.5ರಷ್ಟುರಿಯಾಯ್ತಿ ಸಿಗಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಈ ಬಗ್ಗೆ ಭಾನುವಾರ ಪಿಟಿಐ ಸುದ್ದಿ ಸಂಸ್ಥೆ ಜೊತೆ ಮಾತನಾಡಿದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಗಡ್ಕರಿ ಅವರು, ‘2021-22ನೇ ಬಜೆಟ್ನಲ್ಲಿ ಘೋಷಿಸಲಾದಂತೆ ಹಳೇ ವಾಹನಗಳನ್ನು ಗುಜರಿಗೆ ಹಾಕಿ ಹೊಸ ಕಾರು ಖರೀದಿಸುವ ಗ್ರಾಹಕರಿಗೆ ವಾಹನ ಉತ್ಪಾದಕ ಕಂಪನಿಗಳು ಶೇ.5ರಷ್ಟುರಿಯಾಯಿತಿ ನೀಡಲಿವೆ’ ಎಂದು ಹೇಳಿದರು.
20 ವರ್ಷದ ಹಳೆಯದಾದ ವೈಯಕ್ತಿಕ ವಾಹನಗಳು ಮತ್ತು 15 ವರ್ಷ ಪೂರೈಸಿದ ಸರಕು-ಸಾಗಣೆ ವಾಹನಗಳನ್ನು ಗುಜರಿಗೆ ಹಾಕುವವರಿಗೆ ರಿಯಾಯ್ತಿ ನೀಡುವ ನೀತಿಯೊಂದನ್ನು 2021-22ರ ಬಜೆಟ್ನಲ್ಲಿ ಘೋಷಿಸಲಾಗಿದೆ. ಆದರೆ ಆರಂಭದಲ್ಲಿ ಈ ನೀತಿಯನ್ನು ಸರ್ಕಾರಿ ವಾಹನಗಳಿಗೆ ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ. ನಂತರದಲ್ಲಿ ಇದನ್ನು ಜನಸಾಮನ್ಯರಿಗೂ ವಿಸ್ತರಣೆ ಮಾಡಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ