
ನವದೆಹಲಿ(ಏ.24): ಭಾರತದ ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿಯಾಗಿ ಎನ್. ವಿ. ರಮಣ ಇಂದು, ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ನೂತನ ಸಿಜೆಐ ರಮಣರಿಗೆ ಪ್ರಮಾಣವಚನ ಬೋಧಿಸಿದ್ದಾರೆ. ಎನ್. ವಿ.ರಮಣ ಸಿಜೆಐ ಆಗಿ 2022ರ ಆಗಸ್ಟ್ 26ರವರೆಗೆ ಮುಂದುವರೆಯಲಿದ್ದಾರೆ.
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಭಾರತದ 48ನೇ ಮುಖ್ಯ ನ್ಯಾಯಮೂರ್ತಿಯಾಗಿ ಎನ್. ವಿ. ರಮಣ ಅಧಿಕಾರ ಸ್ವೀಕರಿಸಿದ್ದಾರೆ. ಸುಪ್ರೀಂ ಕೋರ್ಟ್ ಈ ಹಿಂದಿನ ಮುಖ್ಯನ್ಯಾಯಮೂರ್ತಿ ಎಸ್. ಎ. ಬೊಬ್ಡೆ ಶುಕ್ರವಾರ ನಿವೃತ್ತಿಗೊಂಡ ಬಳಿಕ ಈ ಸ್ಥಾನವನ್ನು 63 ವರ್ಷದ ನ್ಯಾಯಮೂರ್ತಿ ರಮಣ ತುಂಬಿದ್ದಾರೆ.
ಎನ್.ವಿ.ರಮಣ 1957ರ ಆಗಸ್ಟ್ 27ರಂದು ಆಂಧ್ರಪ್ರದೇಶದ ಪೊನ್ನಾವರಂ ಗ್ರಾಮದಲ್ಲಿ ಜನಿಸಿದ್ದಾರೆ. 1983ರ ಫೆಬ್ರವರಿ 10ರಿಂದ ವಕೀಲಿ ವೃತ್ತಿ ಪ್ರಾರಂಭಿಸಿದ ರಮಣರವರು 2000ರ ಜೂನ್ 27ರಂದು ಆಂಧ್ರಪ್ರದೇಶ ಹೈಕೋರ್ಟ್ನ ಮುಖ್ಯನ್ಯಾಯಾಧೀಶರಾಗಿ ನೇಮಕಗೊಂಡರು.
2014ರ ಫೆಬ್ರವರಿ 17ರಂದು ಸುಪ್ರಿಂಕೋರ್ಟ್ ಜಡ್ಜ್ ಆಗಿ ನೇಮಕಗೊಂಡಿದ್ದಾರೆ. ಕಳೆದ ವರ್ಷ ಅಕ್ಟೋಬರ್ನಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಮತ್ತು ಎನ್.ವಿ.ರಮಣ ಮಧ್ಯೆ ವಿವಾದವೊಂದು ಎದ್ದಿತ್ತು. ಜಗನ್ ಮೋಹನ್ ರೆಡ್ಡಿಯವರು ರಮಣ ವಿರುದ್ಧ ಗಂಭೀರ ಆರೋಪ ಮಾಡಿ, ಸಿಜೆಐ ಬೋಬ್ಡೆಯವರಿಗೆ ಪತ್ರ ಬರೆದಿದ್ದರು. ಇತ್ತೀಚೆಗಷ್ಟೇ ಈ ಆರೋಪದಿಂದ ಇವರಿಗೆ ಕ್ಲೀನ್ಚಿಟ್ ಪಡೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ