ಪಂದ್ಯದ ವೇಳೆ ಕಬಡ್ಡಿ ಪಟು ಹತ್ಯೆ ಪ್ರಕರಣ, ಆರೋಪಿಯನ್ನು ಎನ್‌ಕೌಂಟರ್ ಮಾಡಿ ಮುಗಿಸಿದ ಪೊಲೀಸ್

Published : Dec 17, 2025, 08:22 PM IST
 rana balachauria kanwar digvijay singh kabaddi player shot dead mohali

ಸಾರಾಂಶ

ಪಂದ್ಯದ ವೇಳೆ ಕಬಡ್ಡಿ ಪಟು ಹತ್ಯೆ ಪ್ರಕರಣ, ಆರೋಪಿಯನ್ನು ಎನ್‌ಕೌಂಟರ್ ಮಾಡಿ ಮುಗಿಸಿದ ಪೊಲೀಸ್, ಎರಡೇ ದಿನದಲ್ಲಿ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು ಮಾತ್ರವಲ್ಲ, ಎನ್‌ಕೌಂಟರ್ ಮೂಲಕ ಕತೆ ಮುಗಿಸಿದ್ದಾರೆ.

ಮೊಹಾಲಿ (ಡಿ.17) ಕಬಡ್ಡಿ ಪಂದ್ಯದ ಟಾಸ್ ಮುಗಿಸಿ ಇನ್ನೇನು ಪಂದ್ಯ ಆರಂಭಗೊಳ್ಳಬೇಕು ಅನ್ನುವಷ್ಟರಲ್ಲೇ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಖ್ಯಾತ ಕಬಡ್ಡಿ ಪಟು ರಾಣಾ ಬಾಲಚೌರಿಯಾ ಸ್ಥಳದಲ್ಲೇ ಮೃತಟ್ಟಿದ್ದರು.ಪಂಜಾಬ್‌ನ ಮೊಹಾಲಿಯಲ್ಲಿ ನಡೆದ ಈ ಹತ್ಯೆ ಪ್ರಕರಣ ದೇಶದಲ್ಲೇ ಆತಂಕ ಹೆಚ್ಚಿಸಿತ್ತು. ಪಂದ್ಯ ವೀಕ್ಷಿಸಲು ಆಗಮಿಸಿದ್ದ ಕ್ರೀಡಾಭಿಮಾನಿಗಳು ದಿಕ್ಕಾಪಾಲಾಗಿ ಓಡಿದ್ದಾರೆ. ಇತ್ತ ಸಹ ಆಟಗಾರರು ಆತಂಕಕ್ಕೊಳಗಾಗಿದ ಘಟನೆ ನಡೆದಿತ್ತು. ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಮೊಹಾಲಿ ಪೊಲೀಸರು ಎರಡೇ ದಿನದಲ್ಲಿ ಪತ್ತೆ ಹಚ್ಚಿದ್ದಾರೆ. ವಶಕ್ಕೆ ಪಡೆಯಲು ಹೋದಾಗ ನಡೆಸಿದ ಗುಂಡಿನ ಚಕಮಕಿಯಲ್ಲಿ ಆರೋಪಿ ಮಿದ್ದುನ ಹತ್ಯೆ ಮಾಡಲಾಗಿದೆ.

ಪೊಲೀಸ್ ಎನ್‌ಕೌಂಟರ್

ಹರ್ಪಿಂದರ್ ಅಲಿಯಾಸ್ ಮಿದ್ದು ಕಬಡ್ಡಿ ಪಟು ರಾಣಾ ಮೇಲೆ ಗುಂಡಿನ ದಾಳಿ ನಡೆಸಿದ್ದರು. ವಾಹನ ಮೂಲಕ ಕಬಡ್ಡಿ ಟೂರ್ನಿ ಆಯೋಜನೆ ಬಳಿ ಬಂದ ಹರ್ಪಿಂದರ್ ಅಲಿಯಾಸ್ ಮಿದ್ದು ಹಾಗೂ ಸಹಚರರು ಏಕಾಏಕಿ ತೀರಾ ಹತ್ತಿರದಿಂದಲೇ ರಾಣಾ ಮೇಲೆ ಹಲವು ಸುತ್ತು ಗುಂಡಿನ ದಾಳಿ ನಡೆಸಿದ್ದರು. ಹೀಗಾಗಿ ರಣಾ ಸ್ಥಳದಲ್ಲೇ ಮೃತಪಟ್ಟಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಿಸಿಟಿವಿ ದೃಶ್ಯ, ಮೊಬೈಲ್ ಮೂಲಕ ದಾಖಲಾಗಿರುವ ದೃಶ್ಯ, ಕಬಡ್ಡಿ ನೇರ ಪ್ರಸಾದ ದೃಶ್ಯಗಳನ್ನು ಕಲೆ ಹಾಕಿದ್ದರು. ಬಳಿಕ ತನಿಖೆ ತೀವ್ರಗೊಂಡಿತ್ತು. ಇಂದು ಮೊಹಾಲಿಯ ಹೊರವಲಯದ ತರ್ನ ತರಾನ್ ಪ್ರದೇಶದಲ್ಲಿ ಪೊಲೀಸರು ಕಾರ್ಯಚರಣೆ ತೀವ್ರಗೊಳಿಸಿದ್ದರು. ಈ ವೇಳೆ ಪೊಲೀಸರ ಕೈಗೆ ಸಿಕ್ಕಿಬೀಳದಂತೆ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಹೀಗಾಗಿ ಪೊಲೀಸರು ಪ್ರತಿಯಾಗಿ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಆರೋಪಿ ಮಿದ್ದು ಹತ್ಯೆಯಾಗಿದ್ದಾನೆ. ಆರೋಪಿ ಮಿದ್ದು ಗುಂಡಿನ ಚಕಮಕಿಯಲ್ಲಿ ಹತ್ಯೆಯಾಗಿರುವುದಾಗಿ ಮೊಹಾಲಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ಹರ್ಪಿಂದರ್ ಅಲಿಯಾಸ್ ಮಿದ್ದುನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬದುಕುಳಿಯಲಿಲ್ಲ. ಆರೋಪಿ ಹರ್ಪಿಂದರ್ ಹಲವು ಅಪರಾಧಗಳಲ್ಲಿ ಭಾಗಿಯಾಗಿದ್ದ. ಪೊಲೀಸ್ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿದ್ದ. ಕಬಡ್ಡಿ ಪಟುವಿನ ಹತ್ಯೆಗೆ ಕಾರಣವೇನು ಅನ್ನೋದು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಸೋಮವಾರ ನಡೆದ ಹತ್ಯೆ

ರಾಣಾ ಬಾಲಚೌರಿಯಾ ಮೊಹಾಲಿಯ ಖ್ಯಾತ ಕಬಡ್ಡಿ ಪಟು ಹಾಗೂ ಕಬಡ್ಡಿ ಆಯೋಜಕನಾಗಿ ಗುರುತಿಸಿಕೊಂಡಿದ್ದ. ಸೋಮವಾರ ಮೊಹಾಲಿಯಲ್ಲಿ ಕಬಡ್ಡಿ ಟೂರ್ನಮೆಂಟ್ ಆಯೋಜಿಸಿದ್ದ ರಾಣಾ ಸ್ವತಃ ಕಬಡ್ಡಿ ಪಟುವಾಗಿ ಅಂಗಣಕ್ಕಿಳಿದಿದ್ದ. ತಂಡದ ನಾಯಕನಾಗಿದ್ದ ರಾಣಾ ಟಾಸ್ ಪ್ರಕ್ರಿಯೆ ಮುಗಿಸಿ ವಾರ್ಮ್ ಅಪ್‌ನಲ್ಲಿ ತೊಡಗಿಸಿಕೊಂಡಿದ್ದ. ಇನ್ನೇನು ಕೆಲವೇ ಕ್ಷಣಗಳಲ್ಲಿ ಪಂದ್ಯ ಆರಂಭಗೊಳ್ಳಬೇಕಿತ್ತು. ಉಭಯ ತಂಡದ ಸದಸ್ಯರು ವಾರ್ಮ್ ಅಪ್‌ನಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ಅಪರಿಚಿತರಾಗಿ ಬಂದ ಹರ್ಪಿಂದರ್ ಹಾಗೂ ಆತನ ಸಹಚರರು ರಾಣಾ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಹಲವು ಸುತ್ತು ಗುಂಡು ಹಾರಿಸಿದ್ದಾರೆ. ಹೀಗಾಗಿ ರಾಣ ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ತಕ್ಷಣವೇ ಆಸ್ಪತ್ರೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬುರ್ಖಾ ಹಾಕದೆ ಹೊರಗೆ ಹೋಗಿದ್ದಕ್ಕೆ ಪತ್ನಿ, ಇಬ್ಬರು ಹೆಣ್ಮಕ್ಕಳ ಕೊಂದ ಪಾಪಿ, ಮನೆಯ ಅಂಗಳದಲ್ಲಿ ಹೂತುಹಾಕಿದ!
ಡಿ.19ರ ರಾಜಕೀಯ ಭೂಕಂಪಕ್ಕೆ ಮೋದಿ ಸರ್ಕಾರ ಪತನ, ಭವಿಷ್ಯ ನುಡಿದ ಸಂಜಯ್ ರಾವತ್