
ನವದೆಹಲಿ(ಮಾ. 19) ಕರ್ನಾಟಕದಲ್ಲಿ ನಡೆಯುತ್ತಿದ್ದ ಮೀಸಲು ಹೋರಾಟ ಇದೀಗ ನವದೆಹಲಿ ಸಂಸತ್ ಅಂಗಳವನ್ನು ತಲುಪಿದೆ ಕುರುಬ ಮತ್ತು ಕೋಲಿ ಸಮಾಜವನ್ನು ಎಸ್ ಟಿಗೆ ಸೇರಿಸುವಂತೆ ಸಂಸದ ಉಮೇಶ್ ಜಾಧವ್ ಆಗ್ರಹ ಮಾಡಿದ್ದಾರೆ.
ಲೋಕಸಭೆಯಲ್ಲಿ ಸಂಸದ ಉಮೇಶ್ ಜಾಧವ್ ವಿಷಯ ಪ್ರಸ್ತಾಪ ಮಾಡಿದರು. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಮಂಡಿಸಿದ್ದ ವಿಧೇಯಕದ ಪರವಾಗಿ ಉಮೇಶ್ ಜಾಧವ್ ಮಾತನಾಡಿದರು. ಕುರುಬ ಮತ್ತು ಕೋಲಿ ಸಮಾಜವನ್ನು ಎಸ್ ಟಿಗೆ ಸೇರಿಸಲು ಒತ್ತಾಯ ಮಾಡಿದರು.
ಜಾತಿವಾರು ಮೀಸಲು ತೆಗೆಯಲು ಕೇಂದ್ರದ ಆಲೋಚನೆ
ಈ ಕುರಿತು ಹಲವಾರು ದಾಖಲೆಗಳನ್ನು ಬುಡಕಟ್ಟು ಕಲ್ಯಾಣ ಸಚಿವಾಲಯಕ್ಕೆ ಕಳಿಸಲಾಗಿದೆ. ಅತೀ ಶೀಘ್ರದಲ್ಲೇ ದಾಖಲೆಗಳನ್ನು ಪರಿಶೀಲಿಸಿ ಎಸ್ ಟಿಗೆ ಸೇರಿಸಬೇಕು ಎಂದು ವಿಧೇಯಕದ ಚರ್ಚೆ ಸಮಯದಲ್ಲಿ ಕೇಂದ್ರ ಸರ್ಕಾರಕ್ಕೆ ಕಲಬುರಗಿ ಸಂಸದರು ಆಗ್ರಹ ಮಾಡಿದರು.
ಕರ್ನಾಟಕದಲ್ಲಿ ಪಂಚಮಸಾಲಿ, ಒಕ್ಕಲಿಗ ಮತ್ತು ಕುರುಬ ಸಮುದಾಯಕ್ಕೆ ಮೀಸಲು ನೀಡಬೇಕು ಎಂದು ಬಹುದಿನಗಳಿಂದ ಹೋರಾಟ ನಡೆಯುತ್ತಿದೆ. ಪ್ರತಿಭಟನೆಗಳು ನಡೆದಿದ್ದು ಹಲವು ಸಂದರ್ಭ ಕರ್ನಾಟಕ ರಾಜ್ಯ ಸರ್ಕಾರವೇ ಇಕ್ಕಟ್ಟಿಗೆ ಸಿಲುಕಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ