ವರದಕ್ಷಿಣೆ ಕಿರುಕುಳ ಪ್ರಕರಣ: ನಟಿ ಅಭಿನಯಾಗೆ ಸುಪ್ರೀಂಕೋರ್ಟ್‌ ಜಾಮೀನು

By Kannadaprabha NewsFirst Published Feb 11, 2023, 3:40 AM IST
Highlights

ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗುವ ಆತಂಕದಲ್ಲಿದ್ದ ಚಿತ್ರನಟಿ ಅಭಿನಯಾ ಮತ್ತವರ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಇತ್ತೀಚೆಗೆ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ನವದೆಹಲಿ (ಫೆ.11): ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗುವ ಆತಂಕದಲ್ಲಿದ್ದ ಚಿತ್ರನಟಿ ಅಭಿನಯಾ ಮತ್ತವರ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಇತ್ತೀಚೆಗೆ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಬಳಿಕ, ತಲೆಮರೆಸಿಕೊಂಡ ಆರೋಪದಡಿ ಅಭಿನಯಾ, ತಾಯಿ ಜಯಮ್ಮ ಹಾಗೂ ಅವರ ಸಹೋದರ ಚೆಲುವರಾಜು ವಿರುದ್ಧ ಬೆಂಗಳೂರಿನ ಚಂದ್ರಾ ಲೇಔಟ್‌ ಪೊಲೀಸರು ಲುಕ್‌ಔಟ್‌ ನೋಟಿಸ್‌ ಹೊರಡಿಸಿದ್ದರು. 

ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಅಭಿನಯಾ ಅವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಸುದಾಂಶು ದುಲಿಯಾ ನೇತೃತ್ವದ ಸುಪ್ರೀಂಕೋರ್ಟ್‌ನ ಪೀಠ, ಇವರಿಗೆ ಜಾಮೀನು ಮಂಜೂರು ಮಾಡಿದೆ. ಮುಂದಿನ 10 ದಿನಗಳ ಮಟ್ಟಿಗೆ ಅವರನ್ನು ಬಂಧಿಸದಂತೆ ಸೂಚನೆ ನೀಡಿದೆ. ಜೊತೆಗೆ, ಬೆಂಗಳೂರು ಪೊಲೀಸರಿಗೆ ನೋಟಿಸ್‌ ಜಾರಿ ಮಾಡಿದ್ದು, ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ.

Latest Videos

ಪೊಲೀಸರ ಕಿರುಕುಳ ಆರೋಪ: ಲೈವ್ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ ಯತ್ನ

ಲುಕ್‌ಔಟ್‌ ನೋಟಿಸ್‌: ವರದಕ್ಷಿಣ ಕಿರಕುಳ ಪ್ರಕರಣದಲ್ಲಿ ಇತ್ತೀಚೆಗೆ ಜೈಲು ಶಿಕ್ಷೆಯ ತೀರ್ಪು ಹೊರಬಿದ್ದ ಬಳಿಕ ತಲೆಮರೆಸಿಕೊಂಡಿರುವ ಅಪರಾಧಿಗಳಾದ ಹಿರಿಯ ಚಿತ್ರನಟಿ ಅಭಿನಯ, ತಾಯಿ ಜಯಮ್ಮ ಹಾಗೂ ಸಹೋದರ ಚೆಲುವರಾಜ್‌ ಪತ್ತೆಗಾಗಿ ಬೆಂಗಳೂರಿನ ಚಂದ್ರಾ ಲೇಔಟ್‌ ಠಾಣೆ ಪೊಲೀಸರು ಲುಕ್‌ ಔಟ್‌ ನೋಟಿಸ್‌ ಹೊರಡಿಸಿದ್ದಾರೆ.

ಅಭಿನಯ ಅಣ್ಣ ಶ್ರೀನಿವಾಸ್‌ 1998ರಲ್ಲಿ ಲಕ್ಷ್ಮೀದೇವಿ ಎಂಬುವರನ್ನು ವಿವಾಹವಾಗಿದ್ದರು. ವರದಕ್ಷಿಣೆ ರೂಪದಲ್ಲಿ 80 ಸಾವಿರ ರು. ನಗದು, 250 ಗ್ರಾಂ ಚಿನ್ನಾಭರಣ ಪಡೆದಿದ್ದರು. ನಂತರವೂ 1 ಲಕ್ಷ ರು.ಗೆ ಬೇಡಿಕೆ ಇರಿಸಿ 20 ಸಾವಿರ ಪಡೆದಿದ್ದರು. ಆದರೂ ಮತ್ತಷ್ಟುಹಣ ತರುವಂತೆ ಲಕ್ಷ್ಮೇದೇವಿಗೆ ಕಿರುಕುಳ ನೀಡಿ ತವರು ಮನೆಗೆ ಕಳುಹಿಸಿದ್ದರು. ಇವರ ಕಿರುಕುಳ ತಾಳಲಾರದೆ ಲಕ್ಷ್ಮೇದೇವಿ ಅವರು 2002ರಲ್ಲಿ ವರದಕ್ಷಿಣ ಕಿರುಕುಳ ಆರೋಪದಡಿ ಪತಿ ಶ್ರೀನಿವಾಸ, ಅತ್ತೆ ಜಯಮ್ಮ, ಮಾವ ರಾಮಕೃಷ್ಣ, ಮೈದುನ ಚೆಲುವರಾಜ್‌, ನಾದಿನಿ ಅಭಿನಯ ವಿರುದ್ಧ ಚಂದ್ರಾಲೇಔಟ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ಅರೋಪ ಪಟ್ಟಿಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಮ್ಯಾಜಿಸ್ಪ್ರೇಟ್‌ ನ್ಯಾಯಾಲಯ ಆರೋಪಿಗಳಿಗೆ ತಲಾ ಎರಡು ವರ್ಷಗಳ ಕಾಲ ಶಿಕ್ಷೆ ವಿಧಿಸಿತ್ತು. ಈ ತೀರ್ಪಿನ ವಿರುದ್ಧ ಆರೋಪಿಗಳು ಮೇಲ್ಮನವಿ ಸಲ್ಲಿಸಿದ್ದರು. ಜಿಲ್ಲಾ ನ್ಯಾಯಾಲಯ ಆರೋಪಿಗಳನ್ನು ಪ್ರಕರಣದಿಂದ ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಲಕ್ಷ್ಮೀದೇವಿ ಹಾಗೂ ಸರ್ಕಾರ ಹೈಕೋರ್ಚ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಚ್‌ ಕಳೆದ ಡಿಸೆಂಬರ್‌ನಲ್ಲಿ ಮ್ಯಾಜಿಸ್ಪ್ರೇಟ್‌ ನ್ಯಾಯಾಲಯದ ಆದೇಶ ಎತ್ತಿ ಹಿಡಿದು ಮೂವರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿ ಆದೇಶಿಸಿತ್ತು.

ಪ್ರಮೋದ್ ಮುತಾಲಿಕ್ ವಿರುದ್ಧ ತಿರುಗಿ ಬಿದ್ದ ಮಂಗಳೂರು ವಿಭಾಗ ಶ್ರೀರಾಮ ಸೇನೆ

ಮೊದಲ ಆರೋಪಿ ಶ್ರೀನಿವಾಸ್‌ ಹಾಗೂ ಎರಡನೇ ಆರೋಪಿ ರಾಮಕೃಷ್ಣ ಸಾವನ್ನಪ್ಪಿದ ಹಿನ್ನಲೆ ಪ್ರಕರಣದಿಂದ ಕೈಬಿಡಲಾಗಿತ್ತು. ಉಳಿದಂತೆ ನಟಿ ಅಭಿನಯಗೆ 2 ವರ್ಷ, ತಾಯಿ ಜಯಮ್ಮಗೆ 5 ವರ್ಷ ಹಾಗೂ ಸಹೋದರ ಚೆಲುವರಾಜ್‌ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿತ್ತು. ಈ ಆದೇಶ ಹೊರಬಿದ್ದ ಬೆನ್ನಲ್ಲೇ ಅಭಿಯನ ಹಾಗೂ ಕುಟುಂಬ ತಲೆಮರೆಸಿಕೊಂಡಿದೆ. ಹೀಗಾಗಿ ಚಂದ್ರಾಲೇಔಟ್‌ ಠಾಣೆ ಪೊಲೀಸರು ಲುಕ್‌ ಔಟ್‌ ನೋಟಿಸ್‌ ಹೊರಡಿಸಿ, ಆರೋಪಿಗಳು ಎಲ್ಲಾದರೂ ಕಂಡು ಬಂದಲ್ಲಿ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.

click me!