
ನವದೆಹಲಿ: ಸರ್ವೋಚ್ಚ ನ್ಯಾಯಾಲಯದ ನೂತನ ನ್ಯಾಯಮೂರ್ತಿಗಳಾಗಿ ಕನ್ನಡಿಗ ನ್ಯಾಯಮೂರ್ತಿ ಅರವಿಂದ್ ಕುಮಾರ್ (Arvind Kumar) ಹಾಗೂ ರಾಜೇಶ್ ಬಿಂದಾಲ್ (Rajesh Bindal) ಪ್ರಮಾಣ ವಚನ ಸ್ವೀಕರಿಸಿದರು. ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರು ಗುಜರಾತ್ ಹೈಕೋರ್ಟ್‌ನ (Gujarat High Court)ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು. ಹಾಗೆಯೇ ರಾಜೇಶ್ ಬಿಂದಾಲ್ ಅವರು ಪಂಜಾಬ್ ಹರ್ಯಾಣ ಮೂಲದವರಾಗಿದ್ದು, ಅಲಹಾಬಾದ್ ಹೈಕೋರ್ಟ್‌ನ (Allahabad High Court)ಸಿಜೆ ಆಗಿದ್ದರು. ಇವರಿಬ್ಬರಿಗೂ ಸುಪ್ರೀಂಕೋರ್ಟ್ ಸಿಜೆಐ ಡಿವೈ ಚಂದ್ರಚೂಡ್ ಪ್ರಮಾಣ ವಚನ ಭೋದಿಸಿದರು. ಇವರಿಬ್ಬರ ನೇಮಕಕ್ಕೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಅನ್ವಯ ಕೇಂದ್ರ ಸರ್ಕಾರ ಅಸ್ತು ಎಂದಿತ್ತು. ಈ ಮೂಲಕ ಸುಪ್ರೀಂಕೋರ್ಟ್ ನ(Supreme Court) ನ್ಯಾಯಾಧೀಶರ ಸಂಖ್ಯೆ 34 ಕ್ಕೆ ಏರಿಕೆ ಆಗಿದ್ದಲ್ಲದೇ ಸುಪ್ರೀಂಕೋರ್ಟ್‌ನಲ್ಲಿದೆ ಎಲ್ಲ ಸ್ಥಾನಗಳು ಭರ್ತಿ ಆಗಿವೆ.
ಗುಜರಾತ್, ಅಸ್ಸಾಂ ಸೇರಿ 4 ಹೈಕೋರ್ಟ್‌ಗೆ ಸಿಜೆ ನೇಮಕ
ಗುಜರಾತ್, ಅಸ್ಸಾಂ( Assam), ತ್ರಿಪುರ (Tripura) ಹಾಗೂ ಜಮ್ಮು ಮತ್ತು ಕಾಶ್ಮೀರದ ಹೈಕೋರ್ಟ್‌ಗಳಿಗೆ ಭಾನುವಾರ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಿಸಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ. ಈ ಪೈಕಿ ಗುಜರಾತ್ (Gujarat)ಹಾಗೂ ತ್ರಿಪುರದ ನೂತನ ಮುಖ್ಯ ನ್ಯಾಯಮೂರ್ತಿಗಳು ಈ ತಿಂಗಳಲ್ಲೇ ನಿವೃತ್ತಿ ಹೊಂದಲಿದ್ದಾರೆ.
ಗುಜರಾತ್ ಹೈಕೋರ್ಟ್‌ಗೆ ಅದೇ ಹೈಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರ್ತಿ ಸೋನಿಯಾ ಗಿರಿಧರ್ ಗೋಕಾನಿ (Sonia Giridhar Gokani) ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ. ಅವರು ಈಗ ದೇಶದ 25 ಹೈಕೋರ್ಟ್‌ಗಳ ಪೈಕಿ ಏಕೈಕ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ನ್ಯಾ.ಸೋನಿಯಾ ಫೆ.25ರಂದು ನಿವೃತ್ತಿಯಾಗಲಿದ್ದಾರೆ. ಗುಜರಾತ್ ಹೈಕೋರ್ಟ್‌ಗೆ ಈವರೆಗೆ ಮುಖ್ಯ ನ್ಯಾಯಮೂರ್ತಿಯಾಗಿದ್ದ ಕರ್ನಾಟಕ ಮೂಲದ ನ್ಯಾ.ಅರವಿಂದ್ ಕುಮಾರ್ ಸುಪ್ರೀಂಕೋರ್ಟ್‌ಗೆ ಬಡ್ತಿ ಪಡೆದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಸೋನಿಯಾ ನೇಮಕವಾಗಿದ್ದಾರೆ. ಅದೇ ರೀತಿ, ಒಡಿಶಾ ಹೈಕೋರ್ಟ್‌ನ ನ್ಯಾ.ಜಸ್ವಂತ್ ಸಿಂಗ್ ಅವರನ್ನು ತ್ರಿಪುರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ಅವರು ಫೆ.22ಕ್ಕೆ ನಿವೃತ್ತಿಯಾಗಲಿದ್ದಾರೆ.
ಇಂದು ಸುಪ್ರೀಂಕೋರ್ಟ್ ಜಡ್ಜ್ ಆಗಿ ಕನ್ನಡಿಗ ಅರವಿಂದ ಕುಮಾರ್ ಪ್ರಮಾಣವಚನ
ರಾಜಸ್ಥಾನ ಹೈಕೋರ್ಟ್‌ನ ನ್ಯಾ.ಸಂದೀಪ್ ಮೆಹ್ತಾ (Justice Sandeep Mehta) ಅವರನ್ನು ಅಸ್ಸಾಂನ ಗುವಾಹಟಿ ಹೈಕೋರ್ಟ್‌ಗೆ (Guwahati High Court) ಹಾಗೂ ಗುವಾಹಟಿ ಹೈಕೋರ್ಟ್‌ನ ನ್ಯಾ.ಎನ್.ಕೋಟೀಶ್ವರ್ ಸಿಂಗ್ ಅವರನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಹೈಕೋರ್ಟ್‌ಗೆ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ಈ ನಾಲ್ಕೂ ಜಡ್ಜ್‌ಗಳ ಹೆಸರನ್ನು ಸುಪ್ರೀಂಕೋರ್ಟ್‌ನ ಕೊಲಿಜಿಯಂ ಶಿಫಾರಸು ಮಾಡಿತ್ತು. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು 65 ವರ್ಷಕ್ಕೂ, ಹೈಕೋರ್ಟ್ ನ್ಯಾಯಮೂರ್ತಿಗಳು 62 ವರ್ಷಕ್ಕೂ ನಿವೃತ್ತಿ ಹೊಂದುತ್ತಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ