
ನವದೆಹಲಿ: ರಾಜ್ಯಸಭೆ ಸಚಿವಾಲಯದ ನೂತನ ಕಾರ್ಯದರ್ಶಿಯಾಗಿ ಕೋಲಾರ ಮೂಲದ ಡಾ। ಕೆ.ಎಸ್.ಸೋಮಶೇಖರ್ ಅವರನ್ನು ನೇಮಕ ಮಾಡಿ ರಾಜ್ಯಸಭೆಯ ಸಭಾಧ್ಯಕ್ಷ, ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಕರ್ನಾಟಕ ಸರ್ಕಾರದಲ್ಲಿ ವಿವಿಧ ಹುದ್ದೆ ಮತ್ತು ಕಳೆದ 3 ದಶಕಗಳಿಂದ ವಿವಿಧ ಸಂಸದೀಯ ಹುದ್ದೆ ನಿರ್ವಹಿಸಿದ್ದ ಹಿರಿಯ ಅಧಿಕಾರಿಗೆ ಮತ್ತೊಂದು ಮಹತ್ವದ ಹುದ್ದೆ ಸಿಕ್ಕಂತಾಗಿದೆ.
ಹಿನ್ನೆಲೆ: ಕರ್ನಾಟಕದ ಕೋಲಾರ ಮೂಲದ ಡಾ। ಕೆ.ಎಸ್.ಸೋಮಶೇಖರ್, ಕರ್ನಾಟಕ ಸರ್ಕಾರದಲ್ಲಿ ವಿವಿಧ ಹುದ್ದೆ ನಿರ್ವಹಿಸಿ ಬಳಿಕ ಕೇಂದ್ರ ಸೇವೆಗೆ ನಿಯೋಜನೆಗೊಂಡಿದ್ದರು. 1993ರಲ್ಲಿ ರಾಜ್ಯಸಭೆಯ ಸಚಿವಾಲಯಕ್ಕೆ ನೇಮಕಗೊಂಡಿದ್ದ ಸೋಮಶೇಖರ್ ನಂತರದ 33 ವರ್ಷಗಳಲ್ಲಿ ಸಂಸದೀಯ ನಡವಳಿಕೆಗಳು, ಶಾಸಕಾಂಗದ ಆಡಳಿತ, ಸಮಿತಿ ನಿರ್ವಹಣೆ, ಭಾಷಾಂತರ ಸೇವೆ ಸೇರಿದ ವಿವಿಧ ವಿಷಯಗಳಲ್ಲಿ ಅತ್ಯಂತ ಪರಿಣಿತ ಸೇವೆ ನೀಡಿದ ಅಪಾರ ಅನುಭವ ಹೊಂದಿದ್ದಾರೆ.
ರಾಜ್ಯಸಭೆಯಲ್ಲಿ ಭಾಷಾಂತರಕಾರರಾಗಿ ಸೇವೆ ಆರಂಭಿಸಿದ್ದ ಡಾ. ಸೋಮಶೇಖರ್ ನಂತರ 33 ವರ್ಷಗಳಲ್ಲಿ ಹೆಚ್ಚುವರಿ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ, ನಿರ್ದೇಶಕ, ಜಂಟಿ ನಿರ್ದೇಶಕರಾಗಿ, ವಿಜ್ಞಾನ, ತಂತ್ರಜ್ಞಾನ, ಆರೋಗ್ಯ ಕುರಿತ ಸಂಸದೀಯ ಸಮಿತಿ ಸದಸ್ಯರಾಗಿ, ವಿವಿಧ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾರತದ ಪ್ರತಿನಿಧಿಯಾಗಿ ಭಾಗವಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ