ಕಾಕ್ರೋಚ್‌ಗೆ ಈಗ ಕಾನೂನು ಸಂಕಷ್ಟ, ₹1 ಕೋಟಿ ದೇಣಿಗೆ ನೀಡಿದ ಹಿರಿಯ ವಕೀಲ, ಮಾಜಿ ಕಾಂಗ್ರೆಸ್ಸಿಗ ಕಪಿಲ್ ಸಿಬಲ್!

Published : Jul 27, 2026, 10:36 PM IST
Kapil Sibal

ಸಾರಾಂಶ

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟಿಸಿದ್ದಕ್ಕೆ ಎಫ್‌ಐಆರ್ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಕಾನೂನು ನೆರವು ನೀಡಲು 'ಕಾಕ್ರೋಚ್ ಜನತಾ ಪಾರ್ಟಿ' ಸ್ಥಾಪಿಸಿದ ನಿಧಿಗೆ ಹಿರಿಯ ವಕೀಲ ಕಪಿಲ್ ಸಿಬಲ್ ₹1 ಕೋಟಿ ದೇಣಿಗೆ ನೀಡಿದ್ದಾರೆ.

ನವದೆಹಲಿ (ಜು.27): ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿ, ಪೊಲೀಸರಿಂದ ಬಂಧನಕ್ಕೊಳಗಾದ ಹಾಗೂ ಎಫ್‌ಐಆರ್ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಕಾನೂನು ನೆರವು ನೀಡಲು ಹಿರಿಯ ವಕೀಲ ಕಪಿಲ್ ಸಿಬಲ್ ಅವರು 'ಕಾಕ್ರೋಚ್ ಜನತಾ ಪಾರ್ಟಿ' (CJP) ಸ್ಥಾಪಿಸಿರುವ 'ಕಾನೂನು ನೆರವು ನಿಧಿ'ಗೆ ಬರೋಬ್ಬರಿ ₹1 ಕೋಟಿ ದೇಣಿಗೆ ಘೋಷಿಸಿದ್ದಾರೆ.

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ನಂತರ, ಜುಲೈ 25 ರಂದು ಸಿಜೆಪಿ ತನ್ನ ಪ್ರತಿಭಟನೆಯನ್ನು ಹಿಂಪಡೆದಿತ್ತು. ಇದರ ಬೆನ್ನಲ್ಲೇ ಸರ್ಕಾರದೊಂದಿಗೆ ನಡೆಸಿದ ಮಾತುಕತೆಯ ವೇಳೆ, ಪ್ರತಿಭಟನಾನಿರತ ವಿದ್ಯಾರ್ಥಿಗಳು ಹಾಗೂ ನಾಯಕರ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ಹಿಂಪಡೆಯಬೇಕು ಮತ್ತು ಅವರ ವಿರುದ್ಧ ಯಾವುದೇ ದಂಡನಾತ್ಮಕ ಕ್ರಮ ಕೈಗೊಳ್ಳಬಾರದು ಎಂದು ಆಗ್ರಹಿಸಿರುವುದಾಗಿ ಸಿಜೆಪಿ ವಕ್ತಾರರು ಸ್ಪಷ್ಟಪಡಿಸಿದ್ದರು.

ವಿದ್ಯಾರ್ಥಿಗಳ ಮೇಲೆ ಪ್ರಕರಣ ಭೀತಿ: ಸೌರವ್ ದಾಸ್ ಕಳವಳ

ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಜೆಪಿ ವಕ್ತಾರ ಸೌರವ್ ದಾಸ್, "ಕೇಂದ್ರ ಸರ್ಕಾರವು ಭರವಸೆ ನೀಡಿದ್ದರೂ ಸಹ, ದೇಶಾದ್ಯಂತ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವ ತೀವ್ರ ಭೀತಿ ಎದುರಾಗಿದೆ," ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ತೊಂದರೆಗೆ ಸಿಲುಕಿರುವ ಸಂತ್ರಸ್ತ ವಿದ್ಯಾರ್ಥಿಗಳಿಗೆ ತಕ್ಷಣವೇ ಕಾನೂನು ನೆರವು ಒದಗಿಸುವ ನಿಟ್ಟಿನಲ್ಲಿ ತಾವು ಹಿರಿಯ ವಕೀಲ ಕಪಿಲ್ ಸಿಬಲ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ದಾಸ್ ತಿಳಿಸಿದ್ದಾರೆ.

ವಿಶೇಷ ವೆಬ್‌ಸೈಟ್‌ ರಚನೆ ಹಾಗೂ ಕಪಿಲ್ ಸಿಬಲ್ ಉದಾರ ನೆರವು

ಸಿಜೆಪಿ ಮನವಿಗೆ ಧನಾತ್ಮಕವಾಗಿ ಸ್ಪಂದಿಸಿರುವ ಹಿರಿಯ ವಕೀಲ ಕಪಿಲ್ ಸಿಬಲ್, ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ಸಂಪೂರ್ಣ ಕಾನೂನು ನೆರವು ನೀಡಲು ಒಪ್ಪಿಕೊಂಡಿದ್ದಾರೆ. ಎಫ್‌ಐಆರ್‌ಗಳಿಂದ ತೊಂದರೆಗೊಳಗಾದ ವಿದ್ಯಾರ್ಥಿಗಳ ಸಂಪೂರ್ಣ ವಿವರಗಳನ್ನು ಒಳಗೊಂಡ ವಿಶೇಷ ವೆಬ್‌ಸೈಟ್‌ ಒಂದನ್ನು ಸಿಜೆಪಿ ಶೀಘ್ರದಲ್ಲೇ ಆರಂಭಿಸಲಿದೆ ಎಂದು ಅವರು ತಿಳಿಸಿದ್ದಾರೆ. ಈ ವೆಬ್‌ಸೈಟ್ ಮೂಲಕ ದೇಶದ ಯಾವುದೇ ಭಾಗದ ವಕೀಲರು ಉಚಿತವಾಗಿ ಅಥವಾ ಸೇವಾ ಮನೋಭಾವದಿಂದ ವಿದ್ಯಾರ್ಥಿಗಳಿಗೆ ಕಾನೂನು ನೆರವು ನೀಡಲು ನೋಂದಾಯಿಸಿಕೊಳ್ಳಬಹುದು.

'ಬಿಹಾರ, ಅಸ್ಸಾಂ, ಬಂಗಾಳ ಅಥವಾ ಮಹಾರಾಷ್ಟ್ರ ಸೇರಿದಂತೆ ಭಾರತದ ಯಾವುದೇ ಭಾಗದಲ್ಲಿ ಶಾಂತಿಯುತ ಪ್ರತಿಭಟನೆಗಳು ನಡೆದಿದ್ದು, ಅಲ್ಲಿನ ಸರ್ಕಾರಗಳು ವಿದ್ಯಾರ್ಥಿಗಳು ಅಥವಾ ಪ್ರತಿಭಟನಾಕಾರರನ್ನು ಗುರಿಯಾಗಿಸಿಕೊಂಡಿದ್ದರೆ, ಅವರ ವಿರುದ್ಧದ ಕಾನೂನು ಪ್ರಕರಣಗಳನ್ನು ಟ್ರ್ಯಾಕ್ ಮಾಡಲು ನಾವು ವಿಶೇಷ ವ್ಯವಸ್ಥೆಯನ್ನು ರೂಪಿಸಿದ್ದೇವೆ. ನಮ್ಮ ವಕೀಲರ ತಂಡ ಅವರಿಗೆ ಕಾನೂನು ನೆರವು ನೀಡಲಿದೆ. ವಿದ್ಯಾರ್ಥಿಗಳ ಮೇಲೆ ಯಾವುದೇ ಎಫ್‌ಐಆರ್ ಇರಬಾರದು, ಒಂದು ವೇಳೆ ದಾಖಲಾಗಿದ್ದರೆ ಅವುಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದು ನಾವು ಆಗ್ರಹಿಸುತ್ತೇವೆ' ಎಂದು ಕಪಿಲ್‌ ಸಿಬಲ್‌ ಹೇಳಿದ್ದಾರೆ.

ನನ್ನ ವೈಯಕ್ತಿಕ ಕಡೆಯಿಂದ ನಾನು ಈ ನಿಧಿಗೆ ₹1 ಕೋಟಿ ದೇಣಿಗೆ ನೀಡಿದ್ದೇನೆ. ಸಂಕಷ್ಟದಲ್ಲಿರುವ ಯುವಕರಿಗೆ ನೆರವಾಗಲು ದೇಶಾದ್ಯಂತ ಇರುವ ಎಲ್ಲಾ ವಕೀಲರು ಈ ನಿಧಿಗೆ ತಮ್ಮ ಕೈಲಾದಷ್ಟು ದೇಣಿಗೆ ನೀಡುವಂತೆ ಮನವಿ ಮಾಡುತ್ತೇನೆ. ಕಾನೂನಿನ ದುರುಪಯೋಗದಿಂದ ತೊಂದರೆ ಅನುಭವಿಸುತ್ತಿರುವವರ ಪರವಾಗಿ ನಮ್ಮ ವಕೀಲರು ಗಟ್ಟಿಯಾಗಿ ನಿಲ್ಲಲಿದ್ದಾರೆ," ಎಂದು ಸಿಬಲ್ ಹೇಳಿದ್ದಾರೆ. ಇದೇ ವೇಳೆ, ದೇಶದ ಭವಿಷ್ಯವಾಗಿರುವ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರ ವಿರುದ್ಧ ಸರ್ಕಾರಗಳು ಯಾವುದೇ ರೀತಿಯ ಪೋಲಿಸ್ ಅಥವಾ ಕಾನೂನು ಕ್ರಮಗಳನ್ನು ಕೈಗೊಳ್ಳಬಾರದು ಎಂದು ಸಿಬಲ್ ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹೆದ್ದಾರಿಯಲ್ಲಿ ಸ್ಕಿಡ್‌ ಆಗಿ ಎರಡು ತುಂಡಾದ ಬಸ್‌, ಭೀಕರ ಘಟನೆಯ ವಿಡಿಯೋ ವೈರಲ್‌!
'ಪಿಚ್ಚರ್​ ಅಭೀ ಭೀ ಬಾಕಿ ಹೈ' ಎಂದಿದ್ದ CJP ದೀಪ್ಕೆ ಪಿಚ್ಚರ್​ ಬಿಟ್ಟೋಯ್ತು: ಕೇಳಿದ ಈ ಪ್ರಶ್ನೆಗೆ ಉತ್ತರವಿಲ್ಲದೇ ಸುಸ್ತಾದ್ರು