
ಬೆಂಗಳೂರು: ವಯನಾಡ್ ಮೇಪ್ಪಾಡಿಯ ಮುಂಡೈಕ, ಚೂರಲ್‌ಮಲ ಭೂಕುಸಿತ ಸಂತ್ರಸ್ತರಿಗೆ ಮನೆ ಕಟ್ಟಿಕೊಡುವ ಕರ್ನಾಟಕ ಸರ್ಕಾರದ ಭರವಸೆಗೆ ಕೇರಳ ಸರ್ಕಾರದಿಂದ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಗೆ ಪತ್ರ ಬರೆದಿದ್ದಾರೆ. ವಯನಾಡ್ ಪುನರ್ವಸತಿ ಯೋಜನೆಯ ಭಾಗವಾಗಿ 100 ಮನೆಗಳನ್ನು ಕಟ್ಟಿಕೊಡುವುದಾಗಿ ಕರ್ನಾಟಕ ಸರ್ಕಾರ ತಿಳಿಸಿತ್ತು ಎಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.
ಕೇರಳದ ಮುಖ್ಯ ಕಾರ್ಯದರ್ಶಿ ಮಟ್ಟದಲ್ಲೂ ಈ ವಿಷಯ ಚರ್ಚಿಸಲಾಗಿತ್ತು. ಭರವಸೆಯನ್ನು ಈಡೇರಿಸಲು ಇನ್ನೂ ಸಿದ್ಧರಿದ್ದೇವೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ. ಸರ್ಕಾರ ನೀಡಿದ ಭರವಸೆಗೆ ಇಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಯೋಜನೆ ಜಾರಿಗೊಳಿಸಲು ಸಾಧ್ಯವಾಗುತ್ತಿಲ್ಲ. ಮನೆ ಕಟ್ಟಲು ಜಾಗ ಖರೀದಿಸಲು ಹಾಗೂ ನಿರ್ಮಾಣ ಮಾಡಲು ಕರ್ನಾಟಕ ಸರ್ಕಾರ ಸಿದ್ಧವಿದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಕನ್ನಡದ ಪ್ರಖ್ಯಾತ ನಟಿಯನ್ನು ಮದುವೆಯಾಗುವ ಪ್ರಪೋಸಲ್ ಎಸ್‌ಎಂ ಕೃಷ್ಣಗೆ ಇತ್ತು, ಮುಂದಾಗಿದ್ದೇನು?
ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಯೋಜನೆಗಳನ್ನು ಮಾಡಲು ರಾಜ್ಯ ಸರ್ಕಾರ ಪರದಾಡುತ್ತಿದೆ. ಇನ್ನು ಸರ್ಕಾರಿ ಯೋಜನೆಗಳಿಗಾಗಿ ಹಣ ಹೊಂದಿಸಲು ಒಂದೊಂದೇ ದರಗಳನ್ನು ಹೆಚ್ಚಳ ಮಾಡುತ್ತಲೇ ಹೋಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ರಸ್ತೆ ಗುಂಡಿಗಳನ್ನೂ ಮುಚ್ಚಲು ಸಾಧ್ಯವಾಗದ ಕೈ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇರಳದ ವಯನಾಡು ಭೂಕುಸಿತದಲ್ಲಿ ಸಂತ್ರಸ್ತರಾದವರಿಗೆ 100 ಮನೆ ನಿರ್ಮಿಸಿಕೊಡಲು ಸಿದ್ಧರಿದ್ದು, ಇದಕ್ಕಾಗಿ ನಿಮ್ಮ ಅನುಮತಿಗೆ ಕಾಯುತ್ತಿದ್ದೇವೆ ಎಂದು ಪತ್ರ ಬರೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ