ಸೆ.27ರ ಭಾರತ್ ಬಂದ್‌ಗೆ ಕರ್ನಾಟಕ ರೈತ ಸಂಘಟನೆಗಳ ಬೆಂಬಲ!

By Suvarna NewsFirst Published Sep 11, 2021, 10:04 PM IST
Highlights
  • ಕೇಂದ್ರ ಕೃಷಿ ಮಸೂದೆ ವಿರೋಧಿ ರೈತ ಸಂಘಟನೆಗಳಿಂದ ಪ್ರತಿಭಟನೆ
  • ಸೆಪ್ಟೆಂಬರ್ 27ಕ್ಕೆ ಭಾರತ್ ಬಂದ್‌ಗೆ ಕರೆ ನೀಡಿದ ರೈತ ಸಂಘಟನೆ
  • ಭಾರತ್ ಬಂದ್ ಕರೆಗೆ ಕರ್ನಾಟಕ ರೈತ ಸಂಘಟನೆಗಳ ಬೆಂಬಲ

ಬೆಂಗಳೂರು(ಸೆ.11):  ಕೇಂದ್ರದ ಕೃಷಿ ಮಸೂದೆ ವಿರುದ್ಧ ರೈತ ಸಂಘಟನೆಗಳು ನಡೆಸುತ್ತಿರುವ ಹೋರಾಟ ಸರಿಸುಮಾರು 9 ತಿಂಗಳು ಕಳೆದಿದೆ. ಕೊರೋನಾ 2ನೇ ಅಲೆ ಕಾರಣ ಬೃಹತ್ ಪ್ರತಿಭಟಾನ ರ್ಯಾಲಿ ಹಮ್ಮಿಕೊಳ್ಳಲು ಸಾಧ್ಯವಾಗಿರಲಿಲ್ಲ. ಇದೀಗ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಂಯುಕ್ತ ಕಿಸಾನ್ ಮೋರ್ಚಾ ಸೆಪ್ಟೆಂಬರ್ 27ಕ್ಕೆ ಭಾರತ್ ಬಂದ್‌ಗೆ ಕರೆ ನೀಡಿದೆ. ಈ ಕರೆಗೆ ಕರ್ನಾಟಕ ರೈತ ಸಂಘಟನೆಗಳು ಬೆಂಬಲ ಸೂಚಿಸಿದೆ.

ಸೆಪ್ಟೆಂಬರ್ 27ಕ್ಕೆ ಭಾರತ್ ಬಂದ್; ಸಂಪೂರ್ಣ ಬೆಂಬಲ ಘೋಷಿಸಿದ ಕಾಂಗ್ರೆಸ್!

ಕರ್ನಾಟಕ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ​​ಸಂಘ ಭಾರತ್ ಬಂದ್‌ಗೆ ಬೆಂಬಲ ನೀಡಿದೆ. ಭಾರತ್ ಬಂದ್ ಕರ್ನಾಟಕದಲ್ಲಿ ಯಶಸ್ವಿಗೊಳಿಸಲು ಕರ್ನಾಟಕ ರೈತ ಸಂಘಟನೆಗಳ ಒಕ್ಕೂಟ ಎಲ್ಲಾ ನೆರವು ಹಾಗೂ ಬೆಂಬಲ ನೀಡಲಿದೆ. ಕೇಂದ್ರದ ಕೃಷಿ ಮಸೂದೆ ವಿರೋಧಿಸುತ್ತಿರುವ ರಾಜಕೀಯ ಪಕ್ಷಗಳು ಭಾರತ್ ಬಂದ್‌ಗೆ ಬೆಂಬಲ ನೀಡಬೇಕು ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.

ರೈತ ಪ್ರತಿಭಟನೆ ಹೆಸರಲ್ಲಿ ಹಳೇ ಫೋಟೋ ಶೇರ್ ಮಾಡಿ ಪೇಚಿಗೆ ಸಿಲುಕಿದ ರಾಹುಲ್!

ಸೆಪ್ಟೆಂಬರ್ 27ರ ಭಾರತ್ ಬಂದ್ ದಿನ, ಕರ್ನಾಟಕದ ಜಿಲ್ಲೆ, ತಾಲೂಕು, ಗ್ರಾಮಗಳಲ್ಲಿ ರೈತ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಲಿದ್ದಾರೆ. ಇದೇ ವೇಳೆ ನರೇಂದ್ರ ಮೋದಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಶಾಂತಕುಮಾರ್ ಹರಿಹಾಯ್ದರು. 9 ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಮೋದಿ ರೈತರ ಸಮಸ್ಯೆ ಆಲಿಸಿಲ್ಲ ಎಂದು ಶಾಂತಕುಮಾರ್ ಹೇಳಿದ್ದಾರೆ.

ಇದೇ ವೇಳೆ ಕೇಂದ್ರದ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧವೂ ಹರಿಹಾಯ್ದಿದ್ದಾರೆ. ಸಚಿವೆಯಾದ ಬಳಿಕ ಕರಂದ್ಲಾಜೆ ರೈತರತ್ತ ತಿರುಗಿ ನೋಡಿಲ್ಲ. ಹೀಗಾಗಿ ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.

click me!