
ಬೆಂಗಳೂರು(ಆ.30): ಕರ್ನಾಟಕದಲ್ಲಿ 3ನೇ ಕೊರೋನಾ ಅಲೆ ನಿಯಂತ್ರಣ ಸೇರಿದಂತೆ ಹಲವು ಕೋವಿಡ್ ಸಂಬಂಧಿತ ಕಾರಣದಿಂದ ಇಂದು ಮಹತ್ವದ ಸಭೆ ನಡೆಸಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಲೆ ಆರಂಭ, ಗಣೇಶೋತ್ಸವಕ್ಕೆ ಅನುಮತಿ, ಕೇರಳದಿಂದ ರಾಜ್ಯಕ್ಕೆ ಆಗಮಿಸುವರಿಗೆ ಕಠಿಣ ನಿಯಮ ಸೇರಿದಂತೆ ಹಲವು ನಿರ್ಧಾರ ತೆಗೆದುಕೊಳ್ಳಲಾಗಿದೆ.
6ರಿಂದ 8ನೇ ತರಗತಿಗಳನ್ನೂ ಪ್ರಾರಂಭಿಸಲು ಸಿಕ್ತು ಸರ್ಕಾರ ಗ್ರೀನ್ ಸಿಗ್ನಲ್: ಎಂದಿನಿಂದ?
ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ. ಕೇರಳದಲ್ಲಿ ಕೊರೋನಾ ಪ್ರಕರಣ ಗಣನೀಯವಾಗಿ ಹೆಚ್ಚಳವಾಗಿದೆ. ಇದರಿಂದ ಕೇರಳಕ್ಕೆ ಗಡಿ ಹಂಚಿಕೊಂಡಿರುವ ಕರ್ನಾಟಕ ಜಿಲ್ಲೆಗಳಲ್ಲಿ ಈಗಾಗಲೇ ಕಠಿಣ ನಿಯಮ ಜಾರಿಗೆ ತರಲಾಗಿದೆ. ಇದರೊಂದಿಗೆ ಕೇರಳದಿಂದ ಕರ್ನಾಟಕಕ್ಕೆ ಆಗಮಿಸವವರಿಗೆ 7 ದಿನದ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ.
ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಎಲ್ಲರೂ ಒಂದು ವಾರದ ಕ್ವಾರಂಟೈನ್ ಕಡ್ಡಾಯವಾಗಿದೆ. 8ನೇ ದಿನ ಕೊರೋನಾ ಪರೀಕ್ಷೆ ಮಾಡಿಸಿ ನೆಗಟೀವ್ ವರದಿ ಇದ್ದರೆ ಮಾತ್ರ ತಮ್ಮ ಕಲಸ ಕಾರ್ಯಗಳಿಗೆ ಅವಕಾಶ ನೀಡಲಾಗುತ್ತದೆ. ಒಂದು ವೇಳೆ ವರದಿ ಪಾಸಿಟಿವ್ ಇದ್ದರೆ ಹೋಮ್ ಐಸೋಲೇಶನ್, ಕೊರೋನಾ ಕೇಂದ್ರದಲ್ಲಿ ಐಸೋಲೇಶನ್ ಹಾಗೂ ಚಿಕಿತ್ಸೆ ಪಡೆಯಬೇಕಾಗಿದೆ.
ಸಿಎಂ ನೇತೃತ್ವದ ಸಭೆ ಅಂತ್ಯ: ಇನ್ನೂ ಗೊಂದಲದಲ್ಲಿ ಗಣೇಶೋತ್ಸವ
ವೀಕೆಂಡ್ ಕರ್ಫ್ಯೂ:
ಕೊರೋನಾ ಕಾರಣ ಕೆಲ ಜಿಲ್ಲೆಗಳಿಗೆ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ಕೊಡಗು, ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲೆಗಳಲ್ಲಿ ಮುಂದುವರಿಸಲಾಗಿದ್ದು, ಇತರ ಜಿಲ್ಲೆಗಳಿಗೆ ಮುಕ್ತಿ ನೀಡಲಾಗಿದೆ. ಈ ಮೂರು ಜಿಲ್ಲೆಗಳಲ್ಲಿ ಕೊರೋನಾ ಆತಂಕೆ ಹೆಚ್ಚಿರುವ ಕಾರಣ ವೀಕೆಂಡ್ ಕರ್ಪ್ಯೂ ಮುಂದುವರಿಸಲಾಗಿದೆ.
ಸೆಪ್ಟೆಂಬರ್ ತಿಂಗಳಿನಿಂದ 6ರಿಂದ 8ನೇ ತರಗತಿ ವರೆಗಿನ ಶಾಲೆ ಆರಂಭಿಸಲು ಇಂದಿನ ಸಭೆಯಲ್ಲಿ ಅನುಮತಿ ನೀಡಲಾಗಿದೆ. ಇನ್ನು ಗಣೇಶೋತ್ಸವಕ್ಕೆ ಅನುಮತಿ ನೀಡುವ ಕುರಿತು ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ