
ಬೆಂಗಳೂರು(ಮೇ 27) ಮೇಕೆದಾಟು ಯೋಜನೆ ವಿವಾದಕ್ಕೆ ಸಂಬಂಧಿಸಿ ಕಾನೂನು ಹೋರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಮೇಕೆದಾಟು ಯೋಜನೆಯಲ್ಲಿ ಪರಿಸರ ನಾಶ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ಸಮೀತಿ ರಚನೆ ಮಾಡಿರುವ ರಾಷ್ಟ್ರೀಯ ಹಸಿರು ಪೀಠದ ಆದೇಶವನ್ನು ಪ್ರಶ್ನಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಏನಿದು ಮೇಕೆದಾಟು ಯೋಜನೆ? ಯಾರಿಗೆ ಲಾಭ?
ಈ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಕಾನೂನು ತಜ್ಞರ ಸಭೆ ನಡೆಸಲಾಗಿದೆ. ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಭಾಗವಹಿಸಿದ್ದರು.
ಮೇಕೆದಾಟು ವಿಚಾರಣೆಗೆ ಜಂಟಿ ಸಮಿತಿ ರಚನೆ
ಮೇಕೆದಾಟು ಯೋಜನೆ ಪ್ರದೇಶ ವ್ಯಾಪ್ತಿಯ ಕಚ್ಚಾ ರಸ್ತೆಯ ಕುರಿತಂತೆ ತಮಿಳುನಾಡಿನ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿದೆ. ಅದನ್ನು ಮುಂದಿಟ್ಟುಕೊಂಡು ರಾಷ್ಟ್ರೀಯ ಹಸಿರು ಪೀಠ ಸಮಿತಿಯೊಂದನ್ನು ರಚನೆ ಮಾಡಿದೆ. ಅದು ಸಮಂಜಸವಾದ ಕ್ರಮ ಅಲ್ಲ. ಹೀಗಾಗಿ ಈ ಆದೇಶವನ್ನು ಹಸಿರು ಪೀಠದ ಮುಂದೆಯೇ ಪ್ರಶ್ನಿಸಲು ನಿರ್ಧಾರ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ