ಅರಣ್ಯ ಭೂಮಿ ಒತ್ತುವರಿಯಲ್ಲಿ ದೇಶದಲ್ಲೇ ಕರ್ನಾಟಕ ನಂ.3!

Published : Apr 02, 2025, 09:27 AM ISTUpdated : Apr 02, 2025, 09:38 AM IST
ಅರಣ್ಯ ಭೂಮಿ ಒತ್ತುವರಿಯಲ್ಲಿ ದೇಶದಲ್ಲೇ ಕರ್ನಾಟಕ ನಂ.3!

ಸಾರಾಂಶ

ದೇಶದ 25 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುಮಾರು 13000 ಚದರ ಕಿಲೋಮೀಟರ್‌ನಷ್ಟು ಅರಣ್ಯ ಭೂಮಿ ಒತ್ತುವರಿ ಆಗಿದೆ. ಹೀಗೆ ಒತ್ತುವರಿಯಾದ ಪ್ರದೇಶವು ದೆಹಲಿ, ಸಿಕ್ಕಿಂ ಮತ್ತು ಗೋವಾ ರಾಜ್ಯಗಳ ಒಟ್ಟು ವಿಸ್ತೀರ್ಣಕ್ಕಿಂತಲೂ ಹೆಚ್ಚು. ಅರಣ್ಯ ಭೂ ಅತಿಕ್ರಮಣದಲ್ಲಿ ಮಧ್ಯಪ್ರದೇಶ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಮೂರನೇ ಸ್ಥಾನದಲ್ಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ನವದೆಹಲಿ (ಏ.2): ದೇಶದ 25 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುಮಾರು 13000 ಚದರ ಕಿಲೋಮೀಟರ್‌ನಷ್ಟು ಅರಣ್ಯ ಭೂಮಿ ಒತ್ತುವರಿ ಆಗಿದೆ. ಹೀಗೆ ಒತ್ತುವರಿಯಾದ ಪ್ರದೇಶವು ದೆಹಲಿ, ಸಿಕ್ಕಿಂ ಮತ್ತು ಗೋವಾ ರಾಜ್ಯಗಳ ಒಟ್ಟು ವಿಸ್ತೀರ್ಣಕ್ಕಿಂತಲೂ ಹೆಚ್ಚು. ಅರಣ್ಯ ಭೂ ಅತಿಕ್ರಮಣದಲ್ಲಿ ಮಧ್ಯಪ್ರದೇಶ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಮೂರನೇ ಸ್ಥಾನದಲ್ಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದೇಶದ 25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತನಗೆ ಸಲ್ಲಿಸಿದ ಮಾಹಿತಿಯನ್ನು ಕೇಂದ್ರ ಸರ್ಕಾರವು ಇತ್ತೀಚೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣಕ್ಕೆ ಸಲ್ಲಿಸಿದೆ. ಅದರನ್ವಯ 25 ರಾಜ್ಯಗಳಲ್ಲಿ ಒಟ್ಟು 13056 ಚ.ಕಿ.ಮೀ ನಷ್ಟು ಅರಣ್ಯ ಒತ್ತುವರಿಯಾಗಿದೆ. ಇನ್ನೂ 10 ರಾಜ್ಯಗಳು ಅರಣ್ಯ ಭೂಮಿ ಒತ್ತುವರಿ ಮಾಹಿತಿ ಸಲ್ಲಿಸಬೇಕಿದೆ ಎಂದು ಹೇಳಿದೆ.

ಇದನ್ನೂ ಓದಿ: ಮಾರ್ಚ್‌ನಲ್ಲಿ 1.96 ಲಕ್ಷ ಕೋಟಿ ಜಿಎಸ್ಟಿ ಸಂಗ್ರಹ ದಾಖಲೆ, ಕರ್ನಾಟಕಕ್ಕೆ 2ನೇ ಸ್ಥಾನ!

2024ರ ಮಾರ್ಚ್‌ವರೆಗಿನ ಅಂಕಿ ಅಂಶಗಳ ಪ್ರಕಾರ 5460.9 ಕಿ.ಮೀ ಅರಣ್ಯ ಭೂಮಿ ಒತ್ತುವರಿಯೊಂದಿಗೆ ಮಧ್ಯಪ್ರದೇಶ ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಅಸ್ಸಾಂ ರಾಜ್ಯವಿದ್ದು, 3620.9 ಕಿ.ಮೀ ಅರಣ್ಯಭೂಮಿ ಒತ್ತುವರಿಯಾಗಿದೆ, ಇನ್ನು ಕರ್ನಾಟಕ ಮೂರನೇಯ ಸ್ಥಾನದಲ್ಲಿದ್ದು ಇಲ್ಲಿ 863. 08 ಕಿ.ಮೀ ಪ್ರದೇಶ ಒತ್ತುವರಿಯಾಗಿದೆ ಎಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
ಸಿಎಂ ಕುರ್ಚಿಗೆ 500 ಕೋಟಿ, ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು