ಗ್ಯಾನವಾಪಿ ಮಸೀದಿ ಸಮೀಕ್ಷೆಗೆ ಮತ್ತೆ ಅಡ್ಡಿ

By Precilla Olivia DiasFirst Published May 8, 2022, 4:59 AM IST
Highlights

* ಮುಸ್ಲಿಂ ಸಮುದಾಯದವರ ತೀವ್ರ ವಿರೋಧ

* ಗ್ಯಾನವಾಪಿ ಮಸೀದಿ ಸಮೀಕ್ಷೆಗೆ ಮತ್ತೆ ಅಡ್ಡಿ

ವಾರಾಣಸಿ: ಕಾಶಿ ವಿಶ್ವನಾಥ ಮಂದಿರದ ಪಕ್ಕದಲ್ಲಿರುವ ಗ್ಯಾನವಾಪಿ ಮಸೀದಿಗೆ ಕೋರ್ಚ್‌ ಕಮಿಷನರ್‌ ತಂಡದ ಸದಸ್ಯರು ಶನಿವಾರ ಭೇಟಿಕೊಟ್ಟಿದ್ದರು. ಆದರೆ ಮುಸ್ಲಿಂ ಸಮುದಾಯದವರ ತೀವ್ರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸುಮಾರು 2 ಗಂಟೆಗಳ ಕಾಲ ದೇವಾಲಯದಲ್ಲೇ ಕಾದ ಅಧಿಕಾರಿಗಳು ವಿಡಿಯೋ ಚಿತ್ರೀಕರಣ ಹಾಗೂ ಸಮೀಕ್ಷೆಗೆ ನಡೆಸಲಾಗದೇ ಮರಳಿದ್ದಾರೆ.

ಗ್ಯಾನವಾಪಿ ಮಸೀದಿ ಆವರಣದಲ್ಲಿ ಶೃಂಗಾರ ಗೌರಿ, ಗಣೇಶ ಹಾಗೂ ನಂದಿ ವಿಗ್ರಹಗಳು ಇದ್ದು, ಇವುಗಳ ಪೂಜೆಗೆ ಅವಕಾಶ ನೀಡಬೇಕೆಂದು ವಾರಾಣಸಿ ಸ್ಥಳೀಯ ನ್ಯಾಯಾಲಯದಲ್ಲಿ ಸುಮಾರು 2 ವರ್ಷಗಳ ಹಿಂದೆ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕೋರ್ಚ್‌ ಸ್ಥಳದ ವಿಡಿಯೋ ಚಿತ್ರೀಕರಣ ಹಾಗೂ ಸಮೀಕ್ಷೆಗೆ ಆದೇಶಿಸಿತ್ತು.

ಪ್ರಸ್ತುತ ಕೋರ್ಚ್‌ ಕಮಿಷನರ್‌ ಆಗಿರುವ ಅಜಯ ಕುಮಾರ್‌ ಮಿಶ್ರಾ ಅವರ ಬದಲಾಗಿ ಬೇರೊಬ್ಬ ಅಧಿಕಾರಿಯನ್ನು ನೇಮಿಸುವಂತೆ ಗ್ಯಾನವಾಪಿ ಮಸೀದಿ ನಿರ್ವಹಣಾ ಸಮಿತಿಯ ಸದಸ್ಯರು ಸೇರಿದಂತೆ ಮುಸ್ಲಿಂ ಸಮುದಾಯವರು ವಾರಾಣಸಿಯ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣವನ್ನು ಆಲಿಸಿದ ನ್ಯಾಯಾಧೀಶ ರವಿಕುಮಾರ್‌ ದಿವಾಕರ್‌ ಅವರು ಆದೇಶವನ್ನು ಮೇ 9 ರವರೆಗೆ ಕಾಯ್ದಿರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೋರ್ಚ್‌ ಮಿಶ್ರಾ ಅವರೊಂದಿಗೆ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ವಕೀಲರ ತಂಡವನ್ನು ನೇಮಕ ಮಾಡಿತ್ತು. ಆದರೆ ಮುಸ್ಲಿಂ ಸಮುದಾಯದವರ ಪ್ರತಿಭಟನೆಯ ಹಿನ್ನೆಲೆಯಲ್ಲಿ ದೇವಾಲಯ ಪ್ರವೇಶಿಸಿದ ಅಧಿಕಾರಿಗಳಿಗೆ ವಿಡಿಯೋ ಚಿತ್ರೀಕರಿಸಲು ಸಾಧ್ಯವಾಗಲಿಲ್ಲ.

click me!