ಮತ್ತೆ ಬಿಜೆಪಿ ವಿರುದ್ಧ ಪಕ್ಷ ಸಂಘಟನೆಗೆ ಸಜ್ಜು : ಜೆಡಿಎಸ್‌ ನಾಯಕರಿಗೆ ಬುಲಾವ್‌

Kannadaprabha News   | Asianet News
Published : Nov 20, 2020, 09:36 AM IST
ಮತ್ತೆ ಬಿಜೆಪಿ ವಿರುದ್ಧ  ಪಕ್ಷ ಸಂಘಟನೆಗೆ ಸಜ್ಜು : ಜೆಡಿಎಸ್‌ ನಾಯಕರಿಗೆ ಬುಲಾವ್‌

ಸಾರಾಂಶ

ಬಿಜೆಪಿ ವಿರುದ್ಧ ಪ್ರಾದೇಶಿಕ ಪಕ್ಷಗಳ ಮೈತ್ರಿಕೂಟ ಕಟ್ಟುವ ಯತ್ನವನ್ನು ಮತ್ತೊಮ್ಮೆ ಆರಂಭಿಸಲಾಗಿದೆ. ಇದೀಗ ಜೆಡಿಎಸ್‌ಗು ಬುಲಾವ್ ನಿಡಲಾಗಿದೆ. 

ಹೈದರಾಬಾದ್‌ (ನ.20): ಬಿಜೆಪಿ ವಿರುದ್ಧ ಪ್ರಾದೇಶಿಕ ಪಕ್ಷಗಳ ಮೈತ್ರಿಕೂಟ ಕಟ್ಟುವ ಯತ್ನವನ್ನು ಮತ್ತೊಮ್ಮೆ ಆರಂಭಿಸಿರುವ ತೆಲಂಗಾಣ ಸಿಎಂ ಮತ್ತು ಟಿಆರ್‌ಎಸ್‌ ನಾಯಕ ಚಂದ್ರಶೇಖರ್‌ ರಾವ್‌, ಈ ನಿಟ್ಟಿನಲ್ಲಿ ಮುಂದಿನ ತಿಂಗಳು ಸಭೆಯೊಂದನ್ನು ಆಯೋಜಿಸಿದ್ದಾರೆ.

ಈಗಾಗಲೇ ಸಭೆ ಸಂಬಂಧ ಪ್ರಾದೇಶಿಕ ಪಕ್ಷಗಳ ಮುಖಂಡರಿಗೆ ಆಹ್ವಾನವನ್ನೂ ರವಾನಿಸಲಾಗಿದೆ. ಆಹ್ವಾನ ತಲುಪಿರುವ ನಾಯಕರ ಪಟ್ಟಿಯಲ್ಲಿ ಕರ್ನಾಟಕದ ಜೆಡಿಎಸ್‌ ನಾಯಕ ಎಚ್‌.ಡಿ ಕುಮಾರಸ್ವಾಮಿ, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌, ಟಿಎಂಸಿಯ ಮಮತಾ ಬ್ಯಾನರ್ಜಿ, ಬಿಎಸ್‌ಪಿಯ ಮಾಯಾವತಿ, ಎಸ್‌ಪಿಯ ಅಖಿಲೇಶ್‌ ಯಾದವ್‌, ಬಿಜೆಡಿಯ ನವೀನ್‌ ಪಟ್ನಾಯಕ್‌, ಡಿಎಂಕೆಯ ಸ್ಟ್ಯಾಲಿನ್‌ ಮತ್ತು ಕೃಷಿ ಕಾಯ್ದೆಗಳ ವಿಚಾರವಾಗಿ ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಇತ್ತೀಚೆಗಷ್ಟೇ ಹೊರಬಂದಿರುವ ಶಿರೋಮಣಿ ಅಕಾಲಿದಳದ ಪ್ರಕಾಶ್‌ ಸಿಂಗ್‌ ಬಾದಲ್‌ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಮಿಳುನಾಡಲ್ಲಿ ಕೇಸರಿ ಪತಾಕೆ ಹಾರಿಸಲು ಮೋದಿ- ಶಾ ಮಾಡಿದ ಮಾಸ್ಟರ್ ಪ್ಲಾನ್ ಇದು! ..

ಈ ಪ್ರಸ್ತಾಪಿತ ವಿಪಕ್ಷಗಳ ನಾಯಕರ ಸಭೆಯಲ್ಲಿ ಬಿಜೆಪಿ ವಿರುದ್ಧದ ಹೋರಾಟಕ್ಕೆ ಏನೆಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದರ ಕುರಿತಾಗಿ ಚರ್ಚೆ ನಡೆಯುವ ಸಾಧ್ಯತೆಯಿದೆ. ಆದರೆ, ಈ ಸಭೆಗೆ ದೇಶದ ಪ್ರಮುಖ ವಿಪಕ್ಷವಾಗಿರುವ ಕಾಂಗ್ರೆಸ್‌ಗೆ ಆಹ್ವಾನ ನೀಡಲಾಗಿದೆಯೇ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಈ ಹಿಂದೆ ಕರ್ನಾಟಕದಲ್ಲಿ ಕಾಂಗ್ರೆಸ್‌- ಜೆಡಿಎಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಲೂ ಈ ಎಲ್ಲಾ ಪ್ರಾದೇಶಿಕ ಪಕ್ಷಗಳ ನಾಯಕರು ಸೇರಿ, ಬಿಜೆಪಿಗೆ ಪರ್ಯಾಯ ಮೈತ್ರಿಕೂಟ ರಚನೆಯ ಮಾತುಗಳನ್ನು ಆಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಆತಂಕದ ವಿಷಯ: ಬೆಂಗಳೂರಿನಲ್ಲಿ 11 ವರ್ಷದ ಮಕ್ಕಳಿಗೂ ಡ್ರಗ್ಸ್‌ ಚಟ!
ದೆಹಲಿ ರಕ್ಷಣೆಗೆ ಸ್ವದೇಶಿ ಕ್ಷಿಪಣಿ ವ್ಯವಸ್ಥೆ