
ಮಲಪ್ಪುರಂ (ಮೇ 8, 2023): ಕೇರಳದ ಮಲಪ್ಪುರಂ ಜಿಲ್ಲೆಯ ತೂವಲ್ ತೀರಮ್ ಕಡಲತೀರದಲ್ಲಿ ಭಾನುವಾರ ಸಾಯಂಕಾಲ ಸಂಭವಿಸಿದ ಬೋಟ್ ದುರಂತದಲ್ಲಿ 22 ಮಂದಿ ಮೃತಪಟ್ಟಿದ್ದಾರೆ. ಘಟನೆ ನಡೆದಾಗ ಹೌಸ್‌ಬೋಟ್‌ನಲ್ಲಿ ಸುಮಾರು 40 ರಿಂದ 50 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ಪೈಕಿ ಬಹುತೇಕ ಜನರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗುವ ಆತಂಕ ಕಾಡಿದೆ.
ಸಂಜೆ 5 ಗಂಟೆ ಬಳಿಕ ಇಂಥ ಪ್ರವಾಸಿ ಬೋಟ್‌ಗಳ ಸಂಚಾರಕ್ಕೆ ನಿಷೇಧವಿದ್ದರೂ 2 ಅಂತಸ್ತು ಹೊಂದಿರುವ, ಕೇವಲ 2 ಬಾಗಿಲು ಹೊಂದಿರುವ ಹೌಸ್‌ಬೋಟ್ ಕಾರ್ಯಾಚರಣೆ ನಡೆಸುತ್ತಿತ್ತು. ಬೋಟ್‌ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ತುಂಬಿದ್ದ ಕಾರಣ ಸಂಜೆ 6.30ರ ವೇಳೆಗೆ ಏಕಾಏಕಿ ಬೋಟ್ ಮಗುಚಿಕೊಂಡು ದುರ್ಘಟನೆ ಸಂಭವಿಸಿದೆ.
ಇದನ್ನು ಓದಿ: ಪ್ಲಾಸ್ಟಿಕ್ ಗನ್ ಬಳಸಿ ಚಿನ್ನಾಭರಣಗಳನ್ನು ಲೂಟಿ ಮಾಡಿದ 16 ವರ್ಷದ ಬಾಲಕ!
ತನೂರು ಮತ್ತು ತಿರೂರುನಿಂದ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದ್ದು ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿವೆ. ಈ ದುರಂತದಲ್ಲಿ ಮಡಿದವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕೇಂದ್ರ ವಿಪತ್ತು ನಿರ್ವಹಣಾ ಫಂಡ್‌ನಿಂದ 2 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ.
ಮಲಪ್ಪುರಂ ಬೋಟ್ ಮುಳುಗಿದ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಸೋಮವಾರ 22ಕ್ಕೆ ಏರಿಕೆಯಾಗಿದೆ ಎಂದು ಪ್ರಾದೇಶಿಕ ಅಗ್ನಿಶಾಮಕ ದಳದ ಅಧಿಕಾರಿ ತಿಳಿಸಿದ್ದಾರೆ. "ಇದುವರೆಗೆ ನಾವು 22 ಮೃತದೇಹಗಳನ್ನು ಹೊರತೆಗೆದಿದ್ದೇವೆ, ದೋಣಿಯಲ್ಲಿ ಎಷ್ಟು ಜನರು ಇದ್ದರು ಎಂಬುದು ನಮಗೆ ನಿಖರವಾಗಿ ತಿಳಿದಿಲ್ಲ, ಆದ್ದರಿಂದ ನಾವು ಹೆಚ್ಚು ಜನರು ಕೆಸರಿನಲ್ಲಿ ಸಿಕ್ಕಿಹಾಕಿಕೊಂಡಿದ್ದಾರೋ ಇಲ್ಲವೋ ಎಂದು ಪತ್ತೆಹಚ್ಚಲು ನಾವು ಹುಡುಕಾಟವನ್ನು ಮುಂದುವರೆಸಿದ್ದೇವೆ’’ ಎಂದು ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಪ್ರಾದೇಶಿಕ ಅಗ್ನಿಶಾಮಕ ದಳದ ಅಧಿಕಾರಿ ಶಿಜು ಕೆ.ಕೆ. ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ವೃದ್ಧನ ಮೃತದೇಹ 2 ವರ್ಷ ಫ್ರೀಜರ್‌ನಲ್ಲಿಟ್ಟ: ಪಿಂಚಣಿ ಹಣವನ್ನು ಶಾಪಿಂಗ್‌ಗೆ ಬಳಸ್ತಿದ್ದ ಪಾಪಿ!
ಹಲವಾರು ವಾಹನಗಳು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಈ ಮಧ್ಯೆ, ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಘಟನೆಯ ನಂತರ ಮಧ್ಯರಾತ್ರಿ ರಾಜ್ಯ ಆರೋಗ್ಯ ಇಲಾಖೆಯ ತುರ್ತು ಸಭೆಯನ್ನು ಕರೆದರು ಮತ್ತು ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಹಾಗೂ ಮರಣೋತ್ತರ ಪರೀಕ್ಷೆಯನ್ನು ಚುರುಕುಗೊಳಿಸುವಂತೆ ಆರೋಗ್ಯ ಸಚಿವರು ಸೂಚಿಸಿದ್ದಾರೆ. ಹಾಗೂ, ಸೋಮವಾರ ಬೆಳಗ್ಗೆ 6 ಗಂಟೆಗೆ ಮರಣೋತ್ತರ ಪರೀಕ್ಷೆ ಆರಂಭಿಸುವಂತೆ ಸಚಿವರು ಭಾನುವಾರ ರಾತ್ರಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಹ ಮಲಪ್ಪುರಂ ದೋಣಿ ಮುಳುಗಿದ ಘಟನೆಯಲ್ಲಿ ಜೀವಹಾನಿಗೆ ಭಾನುವಾರ ಸಂತಾಪ ಸೂಚಿಸಿದ್ದಾರೆ ಮತ್ತು ರಕ್ಷಣಾ ಕಾರ್ಯಾಚರಣೆಗಳ ಪರಿಣಾಮಕಾರಿ ಸಮನ್ವಯಕ್ಕೆ ಆದೇಶ ನೀಡಿದ್ದಾರೆ. "ಮಲಪ್ಪುರಂನ ತಾನೂರ್ ದೋಣಿ ಅಪಘಾತದಲ್ಲಿ ಸಂಭವಿಸಿದ ದುರಂತದ ಜೀವಹಾನಿಯಿಂದ ತೀವ್ರ ದುಃಖವಾಗಿದೆ. ರಕ್ಷಣಾ ಕಾರ್ಯಾಚರಣೆಗಳನ್ನು ಪರಿಣಾಮಕಾರಿಯಾಗಿ ಸಂಘಟಿಸಲು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದೆ, ಇದನ್ನು ಸಂಪುಟ ಸಚಿವರು ನೋಡಿಕೊಳ್ಳುತ್ತಿದ್ದಾರೆ. ದುಃಖದಲ್ಲಿರುವ ಕುಟುಂಬಗಳು ಮತ್ತು ಸ್ನೇಹಿತರಿಗೆ ಸಂತಾಪ" ಎಂದು ಸಿಎಂ ಪಿಣರಾಯಿ ವಿಜಯನ್ ಟ್ವೀಟ್‌ನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ಯೂಟ್ಯೂಬ್‌ನಲ್ಲಿ ಲೈಕ್ ಮಾಡಿ ಹಣ ಗಳಿಸ್ಬೋದು ಎಂದು ನಂಬಿ 1.3 ಕೋಟಿ ರೂ ಕಳೆದುಕೊಂಡ ಭೂಪ!
ಪ್ರಧಾನಿ ನರೇಂದ್ರ ಮೋದಿ ಕೂಡ ಘಟನೆಯಲ್ಲಿನ ಪ್ರಾಣಹಾನಿಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಸಂಬಂಧಿಕರಿಗೆ ತಲಾ ₹ 2 ಲಕ್ಷ ಪರಿಹಾರ ಘೋಷಿಸಿದ್ದಾರೆ. "ಕೇರಳದ ಮಲಪ್ಪುರಂನಲ್ಲಿ ಸಂಭವಿಸಿದ ದೋಣಿ ದುರಂತದಿಂದ ಪ್ರಾಣಹಾನಿಯಿಂದ ನೋವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪ. ಮೃತರ ಕುಟುಂಬಕ್ಕೆ PMNRF ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು: ಪ್ರಧಾನಿ ಮೋದಿ, "ಎಂದು ಭಾನುವಾರ ರಾತ್ರಿ ಪ್ರಧಾನಿ ಕಚೇರಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಓದಿರೋದು 12ನೇ ಕ್ಲಾಸ್: ದುಡಿಯೋದು ದಿನಕ್ಕೆ 3 - 5 ಕೋಟಿ ರೂ.; 5 ಸ್ಟಾರ್ ಹೋಟೆಲ್‌ನಲ್ಲಿ ವಾಸ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ