ಕೇರಳ ಬಾಂಬ್ ಸ್ಫೋಟದಲ್ಲಿ ಮೃತರ ಸಂಖ್ಯೆ 2ಕ್ಕೆ ಏರಿಕೆ, ಐವರ ಸ್ಥಿತಿ ಚಿಂತಾಜನಕ!

By Suvarna News  |  First Published Oct 29, 2023, 11:48 PM IST

ಕೇರಳ ಕಳಮಶೇರಿಯ ಕನ್ವೇಶನ್ ಹಾಲ್‌ನಲ್ಲಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ 2ಕ್ಕೆ ಏರಿಕೆಯಾಗಿದೆ. ಐವರ ಸ್ಥಿತಿ ಚಿಂತಾಜನಕವಾಗಿದೆ. ಇನ್ನು ಸಣ್ಣ ಪುಟ್ಟ ಗಾಯಗೊಂಡ ನಾಲ್ವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
 


ಎರ್ನಾಕುಲಂ(ಅ.29): ಕೇರಳದಲ್ಲಿನ ಬಾಂಬ್ ಸ್ಫೋಟದ ತನಿಖೆ ಆರಂಭಗೊಂಡಿದೆ. ಕೇಂದ್ರದ ತನಿಖಾ ಸಂಸ್ಥೆ ತಂಡ ಕೇರಳಕ್ಕೆ ಧಾವಿಸಿದ್ದು ತನಿಖೆ ಆರಂಭಿಸಿದೆ. ಕಳಮಶೇರಿಯ ಕನ್ವೆಶನ್ ಹಾಲ್‌ನಲ್ಲಿ ನಡೆದ ಸ್ಫೋಟದಲ್ಲಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದರು. ಹಲವು ಸ್ಥಿತಿ ಗಂಭೀರವಾಗಿತ್ತು. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 

ಸ್ಪೋಟದಲ್ಲಿ ಗಾಯಗೊಂಡ 41 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಐವರು ಸೇರಿದಂತೆ ಒಟ್ಟ 18 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 12 ವರ್ಷದ ಬಾಲಕಿ ಹಾಗೂ 53 ವರ್ಷದ ಮಹಿಳೆ ಶೇಕಡಾ 95 ರಷ್ಟು ಸುಟ್ಟ ಗಾಯಗಳಿಂದ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದೆ.

Tap to resize

Latest Videos

ಕೇರಳ ಸ್ಫೋಟದ ಹೊಣೆಹೊತ್ತು ಪೊಲೀಸರಿಗೆ ಶರಣಾದ ಶಂಕಿತ, ಪ್ರಕರಣಕ್ಕೆ ಟ್ವಿಸ್ಟ್!

ಸಹನೆಯನ್ನು ಗಳಿಸಿಕೊಳ್ಳುವುದರ ಕುರಿತಾಗಿ ಕೇರಳದಲ್ಲಿ ನಡೆಯುತ್ತಿದ್ದ ಸಮಾವೇಶದಲ್ಲಿಯೇ ಬಾಂಬ್‌ ಸ್ಫೋಟ ಸಂಭವಿಸಿತ್ತು. ಸಹನೆಯ ಕುರಿಯಾಗಿ ತರಬೇತಿ ನೀಡಲು ಕಲಮಶ್ಶೇರಿಯಲ್ಲಿ 3 ದಿನಗಳ ಅಂತಾರಾಷ್ಟ್ರೀಯ ಕ್ರಿಶ್ಚಿಯನ್‌ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು. ಮೊದಲ ದಿನ ಎಲ್ಲರೂ ಪ್ರಾರ್ಥನೆ ನಡೆಸುತ್ತಿದ್ದ ಸಮಯದಲ್ಲೇ ಸ್ಪೋಟ ಸಂಭವಿಸಿದೆ. ಈ ವಿಚಾರ ಸಂಕಿರಣವನ್ನು ಪ್ರಮುಖವಾಗಿ ಜಗತ್ತಿನಲ್ಲಿ ಸಹನೆ ಕಡಿಮೆಯಾಗುತ್ತಿರುವ ಕಾರಣ ಹಲವು ವಿಧ್ವಂಸಕ ಕೃತ್ಯಗಳು ನಡೆಯುತ್ತಿದ್ದು ಇದನ್ನು ತಡೆಗಟ್ಟುವ ಉದ್ದೇಶದಿಂದ ಸಹನೆಯನ್ನು ಬೆಳೆಸುವ ಸಲುವಾಗಿ ಏರ್ಪಡಿಸಲಾಗಿ್ತು.

ಕೇರಳದಲ್ಲಿ ಭಾನುವಾರ ಸಂಭವಿಸಿದ ಸ್ಫೋಟದ ಬಳಿಕ ಟ್ವೀಟ್‌ ಮಾಡಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್‌, ಕಾಂಗ್ರೆಸ್‌ ಮತ್ತು ಸಿಪಿಎಂನ ಅತಿಯಾದ ಓಲೈಕೆ ರಾಜಕಾರಣಕ್ಕೆ ಇತರ ಮುಗ್ಧ ಜನರು ಬೆಲೆ ತೆರಬೇಕಾಗುತ್ತದೆ ಎಂದು ಹೇಳಿದ್ದಾರೆ.

ಬಾಂಬ್ ಸ್ಫೋಟದಿಂದ ಅಲ್ಲ, ಬೆಂಕಿಯಿಂದ ಮಹಿಳೆ ಸಾವು: ಸಣ್ಣ ಘಟನೆ ಎಂದು ಬಿಂಬಿಸಲು ಹೊರಟಿತಾ ಕೇರಳ?

‘ಇದರ ಬಗ್ಗೆ ಇತಿಹಾಸ ನಮಗೆ ತಿಳಿಹೇಳಿದೆ. ಕೇರಳವನ್ನು ಲವ್ ಜಿಹಾದ್ ನ ನಾಡನ್ನಾಗಿಸಲು ಹಾಗೂ ದ್ವೇಷವನ್ನು ಹಬ್ಬಿಸಲು ಭಯೋತ್ಪಾದಕ ಹಮಾಸ್ ಸಂಘಟನೆಯನ್ನು ಬೆಂಬಲಿಸುತ್ತಿರುವ ಕಾಂಗ್ರೆಸ್/ಸಿಪಿಎಂ/ಯು.ಪಿ.ಎ ಮೈತ್ರಿಕೂಟದ ಲಜ್ಜೆಗೆಟ್ಟ ತುಷ್ಟೀಕರಣದ ರಾಜಕಾರಣಕ್ಕೆ ನಾಚಿಕೆಯಾಗಬೇಕು. ಇದು ಬೇಜವಾಬ್ದಾರಿ ಹುಚ್ಚು ರಾಜಕಾರಣದ ಪರಮಾವಧಿ, ಇದನ್ನು ಸಾಕು ಮಾಡಿ’ ಎಂದು ಅವರು ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

click me!