
ತಿರುವನಂತಪುರಂ(ಎ.09): ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಕಳೆದ ತಿಂಗಳು ಕೋವಿಡ್ ಲಸಿಕೆಯ ಮೊದಲ ಡೋಸ್ ತೆಗೆದುಕೊಂಡ ಸಿಎಂ ವಿಜಯನ್ ಅವರು ಟ್ವೀಟ್ ನಲ್ಲಿ ತಮಗೆ ಪಾಸಿಟಿವ್ ಬಂದಿರುವುದನ್ನು ದೃಢಪಡಿಸಿದ್ದಾರೆ.
ನಾನು ಕೋವಿಡ್ +ve ಎಂದು ದೃಢವಾಗಿದೆ. ಕೋಝಿಕ್ಕೋಡ್‌ನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಪ್ರಸ್ತುತ ಕಣ್ಣೂರಿನಲ್ಲಿರುವ ಶ್ರೀ ವಿಜಯನ್, ಇತ್ತೀಚಿನ ದಿನಗಳಲ್ಲಿ ತಮ್ಮೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರನ್ನೂ ಸೆಲ್ಫ್ ಕ್ವಾರೆಂಟೈನ್ ಆಗಬೇಕೆಂದು ವಿನಂತಿಸಿದ್ದಾರೆ.
ಸಿಎಂನಲ್ಲಿ ಕೊರೋನಾ ಲಕ್ಷಣಗಳೇನು ಎಲ್ಲ ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ. ಸಿಎಂ ಪುತ್ರಿ ವೀಣಾ ವಿಜಯನ್ ಮತ್ತು ಅಳಿಯ ಪಿ ಎ ಮೊಹಮ್ಮದ್ ರಿಯಾಸ್ ಅವರಿಗೂ ಕೊರೋನಾ ದೃಢಪಟ್ಟಿತ್ತು.
ಕಣ್ಣೂರಿನ ಧರ್ಮದಂನಿಂದ ಸಿಪಿಐ (ಎಂ) ಅಭ್ಯರ್ಥಿಯಾಗಿರುವ ಶ್ರೀ ವಿಜಯನ್ ಅವರು ಏಪ್ರಿಲ್ 6 ರ ವಿಧಾನಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ರಾಜ್ಯಾದ್ಯಂತ ವ್ಯಾಪಕವಾಗಿ ಪ್ರಯಾಣಿಸಿದ್ದರು.
ಕೇರಳ ಸಿಎಂಗೆ ಕೊರೋನಾ ದೃಢಪಟ್ಟ ಸುದ್ದಿ ಹೊರಬಿದ್ದ ಬೆನ್ನಲ್ಲೇ ಅವರ ಹಳೆಯ ಫೋಟೋ ಒಂದು ವೈರಲ್ ಆಗಿದೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಸ್ವಯಂ ಸೇವಕಿ ಸ್ಯಾನಿಟೈಸರ್ ನೀಡುವಾಗ ಸಿಎಂ ಅದನ್ನು ತಳ್ಳಿದ್ದ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಓಡಾಡುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ