
ನವದೆಹಲಿ (ಮಾ.24): ಅಸಾಮಾನ್ಯ ಕ್ರಮವೊಂದರಲ್ಲಿ ಕೇರಳ ಸರ್ಕಾರವು, ‘ರಾಜ್ಯ ವಿಧಾನಸಭೆ ಅಂಗೀಕರಿಸಿದ 4 ವಿಧೇಯಕಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡದೇ ತಡೆ ಹಿಡಿದಿದ್ದಾರೆ’ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ವಿಶ್ವವಿದ್ಯಾಲಯ ಕಾನೂನುಗಳು (ತಿದ್ದುಪಡಿ) ಮಸೂದೆ- 2021, ಕೇರಳ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ- 2022, ವಿಶ್ವವಿದ್ಯಾಲಯ ಕಾನೂನುಗಳು (ತಿದ್ದುಪಡಿ) ಮಸೂದೆ-2022 ಮತ್ತು ವಿಶ್ವವಿದ್ಯಾನಿಲಯ ಕಾನೂನುಗಳು (ತಿದ್ದುಪಡಿ) ಮಸೂದೆ-2022,- ಇವುಗಳನ್ನು ಯಾವುದೇ ಕಾರಣವಿಲ್ಲದೇ ರಾಷ್ಟ್ರಪತಿ ತಡೆ ಹಿಡಿದಿದ್ದಾರೆ.
ಇದು ಅಸಂವಿಧಾನಿಕ ಎಂದು ಕೇರಳ ಸರ್ಕಾರ ಹೇಳಿದೆ. ಇದಲ್ಲದೆ, ರಾಷ್ಟ್ರಪತಿಗಳ ಒಪ್ಪಿಗೆ ಬಾಕಿ ಇರುವ 4 ವಿಧೇಯಕ ಸೇರಿ 7 ಮಸೂದೆಗಳನ್ನು ರಾಜ್ಯಪಾಲರು ಅನಿರ್ದಿಷ್ಟ ಅವಧಿಗೆ ಬಾಕಿ ಇರಿಸಿಕೊಂಡಿದ್ದನ್ನು ಕಾನೂನುಬಾಹಿರ ಎಂದು ಪರಿಗಣಿಸುವಂತೆಯೂ ಅರ್ಜಿಯಲ್ಲಿ ಸರ್ಕಾರ ಕೋರಿದೆ.
ಕೈಗಾರಿಕೆ ರೀತಿ ಉಗ್ರವಾದಕ್ಕೆ ಪಾಕ್‌ನಿಂದ ಪ್ರೋತ್ಸಾಹ ಇನ್ನು ಇದನ್ನು ಸಹಿಸೋಲ್ಲ: ಜೈಶಂಕರ್
ಅರ್ಜಿಯಲ್ಲಿ ಸಿಪಿಎಂ ನೇತೃತ್ವದ ಎಡರಂಗ ಸರ್ಕಾರವು, ಪ್ರಕರಣದಲ್ಲಿ ಕೇಂದ್ರ ಸರ್ಕಾರ, ಭಾರತದ ರಾಷ್ಟ್ರಪತಿಗಳ ಕಾರ್ಯದರ್ಶಿ, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಅವರ ಹೆಚ್ಚುವರಿ ಕಾರ್ಯದರ್ಶಿಯನ್ನು ಕಕ್ಷಿದಾರರನ್ನಾಗಿ ಮಾಡಿದೆ. ಈ ಹಿಂದೆಯೂ, ವಿಧಾನಸಭೆಯಿಂದ ಅಂಗೀಕರಿಸಲ್ಪಟ್ಟ ಹಲವಾರು ಮಸೂದೆಗಳಿಗೆ ರಾಜ್ಯಪಾಲರು ಒಪ್ಪಿಗೆ ನೀಡಿಲ್ಲ ಎಂದು ಆರೋಪಿಸಿ ಕೇರಳ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು. ಆಗ ರಾಜ್ಯಪಾಲರ ಧೋರಣೆಗೆ ಸುಪ್ರೀಂ ಕೋರ್ಟ್ ಕಿಡಿಕಾರಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ