
ನವದೆಹಲಿ(ಡಿ.25): ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆಯನ್ನು 5000ಕ್ಕೆ ಹೆಚ್ಚಿಸುವಂತೆ ಸೂಚಿಸಿ ಇತ್ತೀಚೆಗೆ ಕೇರಳ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಕೇರಳ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಈಗಾಗಲೇ ದೇವಾಲಯಕ್ಕೆ ಭೇಟಿ ನೀಡುವ ಭಕ್ತರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಒಂದು ವೇಳೆ ಭಕ್ತರ ಸಂಖ್ಯೆಯನ್ನು ಹೆಚ್ಚಿಸಿದರೆ ಪೊಲೀಸ್ ಸಿಬ್ಬಂದಿ ಮತ್ತು ಆರೋಗ್ಯ ಅಧಿಕಾರಿಗಳ ಮೇಲೆ ತೀವ್ರ ಹೊರೆ ಬೀಳುತ್ತದೆ. ಈಗಾಗಲೇ ಹಲವಾರು ಸಿಬ್ಬಂದಿಗಳಿಗೆ ಕೊರೋನಾ ಸೋಂಕು ತಗುಲಿದೆ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ಪ್ರವೇಶಕ್ಕೆ 2000 ಭಕ್ತಾದಿಗಳ ಪ್ರವೇಶಕ್ಕೆ ಕೇರಳ ಸರ್ಕಾರ ಅನುವು ಮಾಡಿಕೊಟ್ಟಿದ್ದು, ವಾರಾಂತ್ಯದಲ್ಲಿ 3000 ಮಂದಿ ಭಕ್ತರ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟಿದೆ.
ಬ್ರಿಟನ್ ವೈರಸ್ ರಾಜ್ಯಕ್ಕೆ ಬಂತಾ..? ಸೀಕ್ವೆನ್ಸ್ ವರದಿ ಪ್ರಕಟ
ಕಳೆದ ವರ್ಷ ಎರಡು ತಿಂಗಳ ಅವಧಿಯಲ್ಲಿ ಲಕ್ಷಕ್ಕೂ ಅಧಿಕ ಭಕ್ತರು ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು. ಆದರೆ ಈ ಬಾರಿ ಕೋವಿಡ್ 19 ಭೀತಿ ಇರುವುದರಿಂದ ಸರಿಸುಮಾರು 85 ಸಾವಿರ ಭಕ್ತರಿಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಅವಕಾಶ ಮಾಡಿಕೊಡಲು ಕೇರಳ ಸರ್ಕಾರ ತೀರ್ಮಾನಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ