
ತಿರುವನಂತಪುರ (ನ.21): ಕೇರಳದ ಗೃಹ ಸಚಿವ ರಮೇಶ್ ಚೆನ್ನಿತ್ತಲ(Kerala Home Minister Ramesh Chennithala) ಅವರು ಅಪ್ರಾಪ್ತ ವಯಸ್ಕರಿಂದ ನಡೆಯುತ್ತಿರುವ ಗಂಭೀರ ಅಪರಾಧಗಳನ್ನು ತಡೆಗಟ್ಟಲು 'ಬಾಲಾಪರಾಧ ನ್ಯಾಯ ಕಾಯ್ದೆ, 2015'(Juvenile Justice Act, 2015) ಕ್ಕೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಕಾಯ್ದೆಯಡಿ ಅಪ್ರಾಪ್ತ ವಯಸ್ಕರ ವಯೋಮಿತಿಯನ್ನು 18 ರಿಂದ 16 ವರ್ಷಕ್ಕೆ ಇಳಿಸಬೇಕು ಎಂದು ಅವರು ಪ್ರಸ್ತಾಪಿಸಿದ್ದಾರೆ. ಕೇರಳದಲ್ಲಿ ಅಪ್ರಾಪ್ತರು ಭಾಗಿಯಾಗಿರುವ ಸರಣಿ ಘಟನೆಗಳ ಹಿನ್ನೆಲೆಯಲ್ಲಿ ಈ ಆಗ್ರಹ ಮಾಡಿದ್ದಾರೆ. ಇತ್ತೀಚೆಗೆ ಕೇರಳದಲ್ಲಿ ಜಡ್ಜ್ ಒಬ್ಬರ 17 ವರ್ಷದ ಮಗ ಯರ್ರಾಬಿರ್ರಿ ಕಾರು ಚಲಾಯಿಸಿ ಒಬ್ಬನನ್ನು ಸಾಯಿಸಿದ್ದ. ಆದರೆ ಬಾಲಾರೋಪಿ ಎಂಬ ಕಾರಣಕ್ಕೆ ಆತ ಕಠಿಣ ಕ್ರಮದಿಂದ ಬಚಾವಾಗಿದ್ದಾನೆ.
ಕೇರಳ ಗೃಹ ಸಚಿವ ರಮೇಶ್ ಚೆನ್ನಿತ್ತಲ ಅವರು ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ಅಪ್ರಾಪ್ತ ವಯಸ್ಕರನ್ನು ಒಳಗೊಂಡ ಹಿಂಸಾತ್ಮಕ ಅಪರಾಧಗಳಲ್ಲಿ ಹೆಚ್ಚಳದ ಬಗ್ಗೆ ಉಲ್ಲೇಖಿಸಿ 2015 ರ ಬಾಲ ನ್ಯಾಯ ಕಾಯ್ದೆಯನ್ನು ಪರಿಶೀಲಿಸುವಂತೆ ಕೋರಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದಾರೆ. ವಿಶೇಷವಾಗಿ ಅಪ್ರಾಪ್ತ ವಯಸ್ಕರನ್ನು ಒಳಗೊಂಡ ಗಂಭೀರ ಅಪರಾಧಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಬಾಲಾಪರಾಧಿಗಳ ವಯಸ್ಸನ್ನು 18 ರಿಂದ 16 ವರ್ಷಕ್ಕೆ ಇಳಿಸುವುದು. ಪ್ರಸ್ತಾವಿತ ಬದಲಾವಣೆಗಳಿಗೆ ಸಂಸತ್ತಿನಲ್ಲಿ ತಿದ್ದುಪಡಿಗಳ ಮಾಡುವ ಕುರಿತು ಸಲಹೆ ನೀಡಿದ್ದಾರೆ.
ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಚೆನ್ನಿತ್ತಲ, ರಾಜ್ಯದಲ್ಲಿ ಕೊಲೆಗಳು ಸೇರಿದಂತೆ ಅಪರಾಧ ಚಟುವಟಿಕೆಗಳಲ್ಲಿ ಅಪ್ರಾಪ್ತರು ಭಾಗಿಯಾಗಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಕೇಂದ್ರ ಗೃಹಸಚಿವರಿಗೆ ಬರೆದ ಪತ್ರದಲ್ಲಿ ನಾನು ನೀಡಿರುವ ಒಂದು ಸಲಹೆ ಎಂದರೆ ವಯಸ್ಸನ್ನು 18 ರಿಂದ 16 ಕ್ಕೆ ಇಳಿಸುವುದು ಎಂದು ಹೇಳಿದ್ದಾರೆ. ಏಕೆಂದರೆ ಇದರ ಬಾಲಕರ ರಕ್ಷಣೆಗಳ ಲಾಭ ದುರುಪಯೋಗ ಪಡಿಸಿಕೊಂಡು ಅಪರಾಧ ಚಟುವಟಿಕೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಇದಕ್ಕೆ ಕಡಿವಾಣ ಹಾಕಲು ವಯಸ್ಸಿನ ಮಿತಿ 18 ರಿಂದ 16ಕ್ಕೆ ಇಳಿಸುವ ಅಗತ್ಯವಿದೆ ಎಂದಿದ್ದಾರೆ.
ಮುಂದುವರಿಯುತ್ತದೆ…
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ