
ಕೇರಳ(ಮಾ.14): ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇರಳ ಕಾಂಗ್ರೆಸ್‌ನಲ್ಲಿ ತಳಮಳ ಶುರುವಾಗಿದೆ. ಹಿರಿಯ ನಾಯಕ ಪಿಸಿ ಚಾಕೋ, ಕಾಂಗ್ರೆಸ್ ಮುಖ್ಯ ಕಾರ್ಯದರ್ಶಿ ವಿಜಯನ್ ಥಾಮಸ್ ರಾಜೀನಾಮೆ ನೀಡಿ ಪಕ್ಷದಿಂದ ಹೊರಬಂದ ಬೆನ್ನಲ್ಲೇ ಇದೀಗ ಕೇರಳ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲತಿಕಾ ಸುಭಾಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಖಾಲಿ ಖಾಲಿ, ಪಿಸಿ ಚಾಕೋ ಬೆನ್ನಲ್ಲೇ ಪಕ್ಷ ತೊರೆದು ಬಿಜೆಪಿ ಸೇರಿದ ಪ್ರಮುಖ ನಾಯಕ!.
ವಿಧಾಸಭಾ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಕಾರಣಕ್ಕೆ ಲತಿಕಾ ಸುಭಾಶ್ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಳಿಕ ತಲೆ ಬೋಳಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಭಾನುವಾರ(ಮಾ.14) ಕೇರಳ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 86 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಕಾಂಗ್ರೆಸ್ ಪಕ್ಷದಲ್ಲಿನ ಗುಂಪು ರಾಜಕೀಯದಿಂದ ಅರ್ಹರಿಗೆ ಟಿಕೆಟ್ ನಿರಾಕರಿಸಲಾಗುತ್ತಿದೆ. ಎರಡು ಗುಂಪುಗಳ ಗುರುತಿಸಿಕೊಂಡರೆ ಮಾತ್ರ ಟಿಕೆಟ್ ಸಿಗುತ್ತಿದೆ. ಇದರಿಂದ ಬೇಸತ್ತಿರುವ ಲತಿಕಾ ಸುಭಾಶ್ ಇದೀಗ ಕಾಂಗ್ರೆಸ್ ನಡೆ ವಿರುದ್ಧ ಆಕ್ರೋಶಗೊಂಡಿದ್ದಾರೆ.
ಕಾಂಗ್ರೆಸ್‌ನಲ್ಲಿ ಹೆಚ್ಚಾಯಿತು ಬಿರುಕು; ಬಂಗಾಳ ಚುನಾವಣಾ ಪ್ರಚಾರದಿಂದ G23 ನಾಯಕರಿಗೆ ಕೊಕ್!.
ಕೇರಳ ವಿಧಾನಸಭಾ ಚುನಾವಣೆ ಒಂದು ಹಂತದಲ್ಲಿ ನಡೆಯಲಿದೆ. ಎಪ್ರಿಲ್ 6 ರಂದು ಮತದಾನ ನಡೆಯಲಿದೆ. ಇನ್ನು ಮೇ.02ರಂದು ಫಲಿತಾಂಶ ಹೊರಬೀಳಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ