ಅಮೂಲ್‌ vs ನಂದಿನಿ ಬಳಿಕ, ಕೇರಳದಲ್ಲಿ ನಂದಿನಿ ಹಾಲು ಮಾರಾಟಕ್ಕೆ ಮಿಲ್ಮಾ ವಿರೋಧ!

Published : Jun 15, 2023, 12:41 PM ISTUpdated : Jun 15, 2023, 01:09 PM IST
ಅಮೂಲ್‌ vs ನಂದಿನಿ ಬಳಿಕ, ಕೇರಳದಲ್ಲಿ ನಂದಿನಿ ಹಾಲು ಮಾರಾಟಕ್ಕೆ ಮಿಲ್ಮಾ ವಿರೋಧ!

ಸಾರಾಂಶ

ರಾಜ್ಯದಲ್ಲಿ ಅಮುಲ್‌ ಉತ್ಪನ್ನಗಳ ಮಾರಾಟಕ್ಕೆ ಭಾರೀ ವಿರೋಧ ವ್ಯಕ್ತವಾದ ರೀತಿಯಲ್ಲಿಯೇ ಕೇರಳದಲ್ಲಿ ಕರ್ನಾಟಕದ ನಂದಿನಿ ಹಾಲು ಮಾರಾಟಕ್ಕೆ ಅವಕಾಶ ನೀಡೋದಿಲ್ಲ ಎಂದು ಮಿಲ್ಮಾ ಎಂದೂ ಕರೆಯಲ್ಪಡುವ ಕೇರಳ ಹಾಲು ಉತ್ಪಾದಕ ಮಹಾಮಂಡಳಿ ಗುರುವಾರ ತಿಳಿಸಿದೆ.  

ಕೊಚ್ಚಿ (ಜೂ.15): ರಾಜ್ಯದಲ್ಲಿ ಗುಜರಾತ್‌ನ ಅಮುಲ್‌ ಉತ್ಪನ್ನಗಳಿಗೆ ಭಾರೀ ವಿರೋಧ ವ್ಯಕ್ತವಾದ ರೀತಿಯಲ್ಲಿಯೇ ಕೇರಳದಲ್ಲಿ ಕರ್ನಾಟಕದ ನಂದಿನಿ ಉತ್ಪನ್ನಗಳಿಗೆ ಭಾರೀ ವಿರೋಧ ವ್ಯಕ್ತವಾಗಿದೆ. ಮಿಲ್ಮಾ ಎಂದೂ ಕರೆಯಲ್ಪಡುವ ಕೇರಳ ಸಹಕಾರಿ ಹಾಲು ಮಾರಾಟ ಒಕ್ಕೂಟವು ಕೇರಳದಲ್ಲಿ ಕರ್ನಾಟಕಸ ಹಾಲು ಒಕ್ಕೂಟದ ನಂದಿನಿ ಡೈರಿ ಉತ್ಪನ್ನಗಳ ಮಾರಾಟವನ್ನು ವಿರೋಧ ಮಾಡಲು ನಿರ್ಧಾರ ಮಾಡಿದೆ.  ಮಿಲ್ಮಾ ಮಲಬಾರ್ ವಲಯ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಎಸ್.ಮಣಿ ಈ ಕುರಿತಾಗಿ ಮಾತನಾಡಿದ್ದು,  ಭಾರತೀಯ ರಾಷ್ಟ್ರೀಯ ಸಹಕಾರಿ ಡೈರಿ ಫೆಡರೇಶನ್‌ನ ಮುಂದಿನ ಆಡಳಿತ ಮಂಡಳಿ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಲಾಗುವುದು ಎಂದಿದ್ದಾರೆ. ದೇಶದಲ್ಲಿರುವ ಹಾಲು ಒಕ್ಕೂಟಗಳು ತಾವು ಇಷ್ಟು ದಿನ ಅನುಸರಿಸಿಕೊಂಡು ಬಂದಿರುವ ಕೆಲವು ಆಚರಣೆಗಳನ್ನು ಮುರಿಯಲು ಬಂದಿರುವುದು ನೈತಿಕವಾಗಿ ಸರಿಯಲ್ಲ ಎಂದು ಕೆ.ಎಸ್.ಮಣಿ ತಿಳಿಸಿದ್ದಾರೆ. ಕರ್ನಾಟಕ ಕಾರ್ಪೊರೇಟ್ ಹಾಲು ಉತ್ಪಾದಕರು ಕೇರಳದಲ್ಲಿ ತನ್ನ ಮಳಿಗೆಗಳನ್ನು ತೆರೆಯುವ ನಿರ್ಧಾರದ ವಿರುದ್ಧ ಪತ್ರವನ್ನು ನೀಡಿದ್ದರೂ ಅವರು ಅದನ್ನು ನಿರ್ಲಕ್ಷಿಸಿದ್ದಾರೆ ಎಂದು ಅವರು ಹೇಳಿದರು.


'ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಚರ್ಚೆಯಾದ ಅಮುಲ್-ನಂದಿನಿ ಸಮಸ್ಯೆಗೂ ಮುನ್ನವೇ ಕರ್ನಾಟಕ ಕಾರ್ಪೊರೇಟ್ ಹಾಲು ಉತ್ಪಾದಕರು ಕೇರಳದಲ್ಲಿ ವ್ಯಾಪಾರ ಮಾಡಲು ನಿರ್ಧರಿಸಿದ್ದರು. ಕರ್ನಾಟಕದಲ್ಲಿ ಉದ್ಯಮ ಆರಂಭಿಸುವ ಅಮುಲ್ ನಿರ್ಧಾರ ತಪ್ಪು ಎನ್ನುತ್ತಾರೆ. ಆದರೆ ಅದನ್ನು ವಿರೋಧಿಸುವ ನೈತಿಕ ಹಕ್ಕು ನಂದಿನಿ ಅವರಿಗೆ ಇಲ್ಲ' ಎಂದು ಮಿಲ್ಮಾ ಮಲಬಾರ್ ಪ್ರದೇಶ ಒಕ್ಕೂಟದ ಅಧ್ಯಕ್ಷರು ಹೇಳಿದ್ದಾರೆ.  "ಹಾಲು ಒಕ್ಕೂಟಗಳು ಕೇವಲ ವಾಣಿಜ್ಯ ಹಿತಾಸಕ್ತಿಗಳಿಗಾಗಿ ಮಾತ್ರವಲ್ಲದೆ ತಮ್ಮ ರಾಜ್ಯದ ಹೈನುಗಾರರ ಕಲ್ಯಾಣಕ್ಕಾಗಿ ಕೆಲಸ ಮಾಡಬೇಕು" ಎಂದು ಕೆಎಸ್ ಮಣಿ ಮಾತನಾಡಿದ್ದಾರೆ.

ಒಂದು ರಾಜ್ಯದ ಸಹಕಾರಿ ಸಂಸ್ಥೆಯು ಮತ್ತೊಂದು ರಾಜ್ಯದ ಸಹಕಾರಿ ಸಂಸ್ಥೆಯ ಮಾರುಕಟ್ಟೆಯಲ್ಲಿ ನೇರವಾಗಿ ಹಸ್ತಕ್ಷೇಪ ಮಾಡುವುದು ಸಹಕಾರದ ತತ್ವಗಳು ಮತ್ತು ಮೂಲಭೂತ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕೇವಲ ಹಬ್ಬದ ಸಮಯಗಳಲ್ಲಿ ಮಾತ್ರವೇ ಮಿಲ್ಮಾ, ಕರ್ನಾಟಕದ ನಂದಿನಿ ಹಾಗೂ ತಮಿಳುನಾಡಿದ ಆವಿನ್‌ ಸಂಸ್ಥೆಗಳ ಮೇಲೆ ಹಾಲಿಗಾಗಿ ಅವಲಂಬಿತವಾಗಿರುತ್ತದೆ. ಆ ಸಮಯಲ್ಲಿ ಮಿಲ್ಮಾದಲ್ಲಿ ಹಾಲಿನ ಉತ್ಪಾದನೆಯೂ ಕಡಿಮೆ ಇರುತ್ತದೆ. ಅದರೆ, ಇದೇ ವಿಚಾರದ ಲಾಭವನ್ನು ತೆಗೆದುಕೊಳ್ಳುವುದು ಸರಿಯಲ್ಲ' ಎಂದು ಮಿಲ್ಮಾ ಅಧ್ಯಕ್ಷ ಹೇಳಿದ್ದಾರೆ. ಕೇರಳದಲ್ಲಿ ನಂದಿನಿ ಉತ್ಪನ್ನಗಳನ್ನು ಬಿಡುಗಡೆ ಮಾಡಿದ್ದರಿಂದ ಮಿಲ್ಮಾ ಮೇಲೆ ಯಾವುದೇ ಪರಿಣಾಮ ಬೀರುತ್ತಿಲ್ಲ ಎಂದರು.

"ಕಳೆದ ಆರು ತಿಂಗಳ ಅಂಕಿ ಅಂಶಗಳ ಪ್ರಕಾರ, ನಮ್ಮ ಉತ್ಪನ್ನ ಮಾರಾಟದಲ್ಲಿ ಗಮನಾರ್ಹ ಬೆಳವಣಿಗೆ ಕಂಡುಬಂದಿದೆ" ಎಂದು ಕೆಎಸ್ ಮಣಿ ಹೇಳಿದರು, ನಂದಿನಿಯ ಆಗಮನವು ಕೇರಳ ಮಾರುಕಟ್ಟೆಯಲ್ಲಿರುವ ಇತರ ಹಾಲಿ ಮಾರಾಟಗಾರರ ಮೇಲೆ ಪರಿಣಾಮ ಬೀರಬಹುದು ಎಂದಿದ್ದಾರೆ. “ದೇಶದ ಹಾಲು ಒಕ್ಕೂಟಗಳ ಮೂಲ ಅಮುಲ್, ಇತರ ರಾಜ್ಯಗಳ ಒಕ್ಕೂಟಗಳು ಮತ್ತು ಹೈನುಗಾರರ ಮೇಲೆ ಪರಿಣಾಮ ಬೀರುವ ರೀತಿಯಲ್ಲಿ ವ್ಯವಹಾರ ನಡೆಸುವುದು ಸರಿಯಲ್ಲ. ಚರ್ಚೆಯ ಮೂಲಕ ಸಮಸ್ಯೆಗಳನ್ನು ಪರಿಹರಿಸಲು ಮಿಲ್ಮಾ ಪ್ರಯತ್ನಿಸುತ್ತಿದೆ ಮತ್ತು ಯಾವುದೇ ಕಾನೂನು ಪ್ರಕ್ರಿಯೆಗೆ ಯೋಜಿಸುತ್ತಿಲ್ಲ ಎಂದಿದ್ದಾರೆ.

ನೆರೆ ರಾಜ್ಯದಲ್ಲಿ ನಂದಿನಿಗೆ ವಿರೋಧ: ಕರ್ನಾಟಕದಲ್ಲಿ ಅಮುಲ್ ಪರ - ವಿರೋಧ ಚರ್ಚೆ ವೇಳೆ ಕೇರಳ ಕ್ಯಾತೆ

ಮಲಪ್ಪುರಂ ಜಿಲ್ಲೆಯ ಮಂಚೇರಿ ಮತ್ತು ತಿರೂರ್ ಮತ್ತು ಎರ್ನಾಕುಲಂ ಜಿಲ್ಲೆಯ ಕೊಚ್ಚಿ ಮತ್ತು ಪತ್ತನಂತಿಟ್ಟ ಜಿಲ್ಲೆಯ ಪಂದಳಂನಲ್ಲಿ ನಂದಿನಿ ತಮ್ಮ ಮಳಿಗೆಗಳನ್ನು ತೆರೆದಿದೆ. ಕೇರಳದ ಪ್ರಮುಖ ನಗರಗಳ ಸೂಪರ್ ಮಾರ್ಕೆಟ್ ಗಳಲ್ಲೂ ನಂದಿನಿ ಉತ್ಪನ್ನಗಳು ದೊರೆಯುತ್ತವೆ.

ಹಾಲು ದರ ಕಡಿತ ಮಾಡದಂತೆ ಕೆಎಂಎಫ್‌ಗೆ ಸಿಎಂ ಸಿದ್ದರಾಮಯ್ಯ ತಾಕೀತು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ