ವಂದೇ ಮಾತರಾಂ, ಜೈ ಶ್ರೀರಾಮ್ ಬ್ಯಾನರ್ ಹಾಕಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲು!

Published : Dec 18, 2020, 02:42 PM ISTUpdated : Dec 18, 2020, 03:01 PM IST
ವಂದೇ ಮಾತರಾಂ, ಜೈ ಶ್ರೀರಾಮ್ ಬ್ಯಾನರ್ ಹಾಕಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲು!

ಸಾರಾಂಶ

ಸ್ಥಳೀಯ ಸಂಸ್ಥೆ ಚುನಾವಣೆ ಗೆಲುವಿನ ಸಂಭ್ರಮದಲ್ಲಿ ಪುರಸಭೆ ಕಟ್ಟದಲ್ಲಿ ಜೈ ಶ್ರೀರಾಮ್ ಹಾಗೂ ವಂದೇ ಮಾತರಾಂ ಬ್ಯಾನರ್ ಹಾಕಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲಾಗಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

ಪಾಲಕ್ಕಾಡ್(ಡಿ.18):  ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ ಮುಗಿದರೂ ರಾಜಕೀಯ ಮೇಲಾಟಗಳು ಮುಗಿದಿಲ್ಲ. ಇದೀಗ ಬ್ಯಾನರ್ ವಿಚಾರದಲ್ಲಿ ಕೇರಳ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ದಾಖಲಾಗಿದೆ. ಪುರಸಭೆಯಲ್ಲಿ ಮೇಲುಗೈ ಸಾಧಿಸಿದ ಬಿಜೆಪಿ ಕಾರ್ಯಕರ್ತರು ಪಾಲಕ್ಕಾಡ್ ಪುರಸಭೆ ಕಟ್ಟದ ಮೇಲೆ ವಂದೆ ಮಾತರಾಂ ಹಾಗೂ ಜೈ ಶ್ರೀರಾಮ್ ಬ್ಯಾನರ್ ಹಾಕಿದ್ದಾರೆ. ಇದು ಭಾರಿ ವಿವಾದಕ್ಕೆ ಕಾರಣವಾಗಿದೆ.

ಕೇರಳ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪ್ರಗತಿ; ಜನತೆಗೆ ಧನ್ಯವಾದ ಹೇಳಿದ ಜೆಪಿ ನಡ್ಡಾ!.

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ ಗೆಲವಿನ ವಿಜಯೋತ್ಸವದ ವೇಳೆ ಬಿಜೆಪಿ ಕಾರ್ಯಕರ್ತರು ಪಾಲಕ್ಕಾಡ್ ಪುರಭೆ ಕಟ್ಟಡ ಮೇಲೆ ವಂದೇ ಮಾತರಾಂ ಹಾಗೂ ಜೈ ಶ್ರೀರಾಂ ಬ್ಯಾನರ್ ಹಾಕಿದ್ದಾರೆ.  ಇದರ ಮೇಲೆ ಛತ್ರಪತಿ ಶಿವಾಜಿ ಚಿತ್ರದ ಬೃಹತ್ ಬ್ಯಾನರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಬ್ಯಾನರ್ ಕೂಡ ಹಾಕಲಾಗಿದೆ. ಬಳಿಕ ಬಿಜೆಪಿ ಕಾರ್ಯಕರ್ತರು ಕಟ್ಟದ ಮೇಲೆ ಸಂಭ್ರಮ ಆಚರಿಸಿದ್ದಾರೆ. ಬಿಜೆಪಿ ಧ್ವಜ ಹಿಡಿದು ಸಂಭ್ರಮಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರ ಬ್ಯಾನರ್ ಹಾಗೂ ವಿಜಯೋತ್ವದ ವಿರುದ್ಧ ಪುರಸಭೆ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ ಕೋಮು ಸೌಹಾರ್ಧ ಹಾಳು ಮಾಡಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ. ಈ ಕುರಿತು ತಕ್ಷಣವೇ ಕ್ರಮ ಕೈಗೊಳ್ಳಬೇಕು. ಹಾಗೂ ಪಾಲಕ್ಕಾಡ್‌ನಲ್ಲಿ ಅಶಾಂತಿ ತರುವ ಪ್ರಯತ್ನಕ್ಕೆ ಅವಕಾಶ ನೀಡಬಾರದು ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

ದೂರಿನ ಆಧರಿಸಿ ಪೊಲೀಸರು ಸಿಕ್ಕ ವಿಡಿಯೋ ಸಾಕ್ಷ್ಯ, ಫೋಟೋ ಸಾಕ್ಷ್ಯಗಳೊಂದಿಗೆ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿದ್ದಾರೆ. ಘಟನೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ವರದಿ ನೀಡುವಂತೆ ಕೇರಳ ಪೊಲೀಸ್ ಉಪ ಮಹಾನಿರ್ದೇಶಕರು ಸೂಚಿಸಿದ್ದಾರೆ. ಇದೀಗ ಕೇರಳದಲ್ಲಿ ಬ್ಯಾನರ್ ಭಾರಿ ಸದ್ದು ಮಾಡುತ್ತಿದೆ. ಬಿಜೆಪಿ ಹಾಗೂ ಆಡಳಿತಾರೂಡ LDF ನಡುವೆ  ಸಮರಕ್ಕೆ ನಾಂದಿ ಹಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತಿರುಪತಿ ತಿಮ್ಮಪ್ಪನಿಗೆ ಅಂಗವಸ್ತ್ರದ ಮೋಸ, ಪ್ಲಾಸ್ಟಿಕ್‌ ಸಿಲ್ಕ್‌ ಕೊಟ್ಟು 55 ಕೋಟಿ ಯಾಮಾರಿಸಿದ ಕಂಪನಿ!
ರಾಷ್ಟ್ರಪತಿಗಳು ಪದಕ ನೀಡುತ್ತಿದ್ದಂತೆ ಕೊರಳಿನಿಂದ ಕಿತ್ತೆಸೆದ ಬಾಲಕ! ವೈರಲ್ ವಿಡಿಯೋ ಹಿಂದಿನ ಸತ್ಯವೇನು?