ದಿಢೀರ್ ಕೋವಿಡ್ ಏರಿಕೆ; ಕೇರಳದಲ್ಲಿ ದೇಶದ ಶೇ.90 ರಷ್ಟು ಪ್ರಕರಣ ದಾಖಲು, 2 ಸಾವು!

By Suvarna News  |  First Published Dec 15, 2023, 3:39 PM IST

ಸಿಂಗಾಪುರ, ಮಲೇಷ್ಯಾ, ಇಂಡೋನೇಷ್ಯಾ ಸೇರಿದಂತೆ ಏಷ್ಯಾದ ಕೆಲ ದೇಶಗಳಲ್ಲಿ ಕೋವಿಡ್ ಪ್ರಕರಣ ದಿಢೀರ್ ಏರಿಕೆಯಾಗಿದೆ. ಇದೀಗ ಭಾರತದಲ್ಲೂ ಕೋವಿಡ್ ಪ್ರಕರಣ ಹೆಚ್ಚಾಗಿದೆ. ದೇಶದ ಶೇಕಡಾ 90 ರಷ್ಟು ಪ್ರಕರಣ ಕೇರಳದಲ್ಲಿ ದಾಖಲಾಗಿದೆ. ಈ ತಿಂಗಳಲ್ಲಿ ಇಬ್ಬರು ಕೋವಿಡ್‌ಗೆ ಬಲಿಯಾಗಿದ್ದಾರೆ.
 


ತಿರುವನಂತಪುರಂ(ಡಿ.15) ಏಷ್ಯಾ ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣ ದಿಢೀರ್ ಏರಿಕೆಯಾಗಿದೆ. ಪ್ರಮುಖವಾಗಿ ಸಿಂಗಾಪುರ, ಮಲೇಷ್ಯಾ, ಇಂಡೋನೇಷ್ಯಾದಲ್ಲಿ ಕೋವಿಡ್ ಗಣನೀಯ ಏರಿಕೆಯಾಗಿದ್ದು, ಮಾಸ್ಕ್ ಸೇರಿದಂತೆ ಇತರ ಮಾರ್ಗಸೂಚಿಗಳು ಜಾರಿಯಾಗಿದೆ. ಇದೀಗ ಭಾರತದಲ್ಲೂ ಕೋವಿಡ್ ಪ್ರಕರಣ ಏರಿಕೆಯಾಗಿದೆ. ಪ್ರಮುಖವಾಗಿ ಕೇರಳದಲ್ಲಿ ಶೇಕಡಾ 90 ರಷ್ಟು ಪ್ರಕರಣ ದಾಖಲಾಗಿದೆ. ನವೆಂಬರ್ ತಿಂಗಳಲ್ಲಿ ಕೇರಳದಲ್ಲಿ 450 ಕೋವಿಡ್ ಪ್ರಕರಣ ದಾಖಲಾಗಿತ್ತು. ಆದರೆ ಡಿಸೆಂಬರ್ ತಿಂಗಳ 15ರವರೆಗೆ 825 ಕೋವಿಡ್ ಪ್ರಕರಣ ದಾಖಲಾಗಿದೆ. ಇಷ್ಟೇ ಅಲ್ಲ ಈ ತಿಂಗಳಲ್ಲಿ ಕೋವಿಡ್‌ಗೆ ಇಬ್ಬರು ಬಲಿಯಾಗಿದ್ದಾರೆ.

ಬಹುತೇಕ ಕೋವಿಡ್ ಪ್ರಕರಣಗಳು ಆಸ್ಪತ್ರೆ ದಾಖಲಾಗಿರುವ ರೋಗಿಗಳಲ್ಲಿ ಪತ್ತೆಯಾಗಿದೆ. ಉಸಿರಾಟದ ಸಮಸ್ಸೆಯಿಂದ ಆಸ್ಪತ್ರೆ ದಾಖಲಾಗುವ ರೋಗಿಗಳನ್ನು H1N1 ಹಾಗೂ ಕೋವಿಡ್ ಪರೀಕ್ಷೆ ಮಾಡಲಾಗುತ್ತದೆ. ಈ ಪೈಕಿ ಬಹುತೇಕ ರೋಗಿಗಳ H1N1 ನೆಗಟೀವ್ ವರದಿ ಬಂದಿದ್ದರೆ, ಕೋವಿಡ್ ಪಾಸಿಟೀವ್ ಆಗಿದೆ. ಕೋವಿಡ್  ಮೂರು ಅಲೆಗಳ ಬಳಿಕವೂ ಭಾರತದಲ್ಲಿ ಹವಾಮಾನ ಬದಲಾದಂತೆ ಕೋವಿಡ್ ಕಾಣಿಸಿಕೊಂಡಿದೆ. ಈ ಬಾರಿ ಡಿಸೆಂಬರ್ ತಿಂಗಳ ಆರಂಭದಲ್ಲೇ ಕೇರಳದಲ್ಲಿ 2 ಸಾವು ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ.

Tap to resize

Latest Videos

 

ವಿದೇಶದಲ್ಲಿ ಮತ್ತೆ ಕೋವಿಡ್ ಅಬ್ಬರ, ಮಾಸ್ಕ್‌ ಕಡ್ಡಾಯ; ಭಾರತಕ್ಕೂ ವಕ್ಕರಿಸುತ್ತಾ ಮಹಾಮಾರಿ?

ಈ ಕುರಿತು ವೈದ್ಯರು ಮಹತ್ವದ ಹೇಳಿಕೆ ನೀಡಿದ್ದಾರೆ. ಸದ್ಯ ಕಾಣಿಸಿಕೊಂಡಿರುವ ಕೋವಿಡ್ ವೈರಸ್ ಮೈಲ್ಡ್ ಆಗಿವೆ. ಹರಡುವಿಕೆ ಹಾಗೂ ಆಪಾಯದ ತೀವ್ರತ ಕಡಿಮೆ. ಇನ್ನು ಎರಡು ಸಾವು ಪ್ರಕರಣಗಳು ಸೂಕ್ತ ಚಿಕಿತ್ಸೆ ನೀಡದೆ ನಿರ್ಲಕ್ಷ್ಯವಹಿಸಿದ ಕಾರಣದಿಂದ ಸವಾಗಿದೆ. ಹಲವು ರೋಗಿಗಳಿಗೆ ಕೋವಿಡ್ ಕಾಣಿಸಿಕೊಂಡು ಒಂದು ತಿಂಗಳ ಬಳಿಕ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ರೀತಿಯ ನಿರ್ಲಕ್ಷ್ಯಗಳಿಂದ ಸಾವು ಸಂಭವಿಸುತ್ತದೆ ಎಂದು ವೈದ್ಯರು ಹೇಳಿದ್ದಾರೆ.

ಚಳಿಗಾಲ ಆರಂಭವಾದ ಬೆನ್ನಲ್ಲೇ ಭಾರತದಲ್ಲೂ ಕೋವಿಡ್‌ ಪ್ರಕರಣಗಳಲ್ಲಿ ಗಣನೀಯ ಏರಿಕೆ ದಾಖಲಾಗಿದೆ. ಸತತ 2ನೇ ದಿನವಾದ ಗುರುವಾರ ದೇಶದಲ್ಲಿ 237 ಹೊಸ ಕೋವಿಡ್‌ ಪ್ರಕರಣ ಪತ್ತೆಯಾಗಿದೆ. ಬುಧವಾರ ಕೂಡಾ 252 ಪ್ರಕರಣಗಳು ಪತ್ತೆಯಾಗಿತ್ತು. ಇದರೊಂದಿಗೆ ಸಂಕ್ರಿಯ ಪ್ರಕರಣಗಳ ಸಂಖ್ಯೆ 1185ಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಈ ನಡುವೆ ಜನರು ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಜಾಗರೂಕರಾಗಿರಬೇಕು ಎಂದು ತಿಳಿಸಿದೆ.ಜೂನ್‌ ನಂತರ ದಾಖಲಾದ ಗರಿಷ್ಠ ಸಂಖ್ಯೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ ಭಾರತದಲ್ಲಿ 4.5 ಕೋಟಿ ದಾಟಿದೆ ಎಂದೂ ಸಹ ಪ್ರಕಟಣೆ ಉಲ್ಲೇಖಿಸಿದೆ.

Health and Pandemic: ಈಗಿರೋ ನಾಲ್ಕು ವೈರಸ್ಸೇ ಭವಿಷ್ಯದ ದೊಡ್ಡ ಸಾಂಕ್ರಾಮಿಕ!

click me!