
ಕೊಚ್ಚಿ[ಜ.30]: ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ಭಾರತಕ್ಕೂ ಕಾಲಿಟ್ಟಿದೆ. ವುಹಾನ್ ನಲ್ಲಿ ವ್ಯಾಸಂಗ ನಡೆಸುತ್ತಿದ್ದ, ಸದ್ಯ ತವರುನಾಡು ಕೇರಳಕ್ಕೆ ಮರಳಿರುವ ವಿದ್ಯಾರ್ಥಿಯಲ್ಲಿ ಸೋಂಕು ಪತ್ತೆಯಾಗಿದೆ.
"
ವೈದ್ಯರು ಹಾಗೂ ಸರ್ಕಾರಿ ಅಧಿಕಾರಿಗಳು ಇದನ್ನು ಖಚಿತಪಡಿಸಿದ್ದಾರೆ. ಈ ವಿದ್ಯಾರ್ಥಿ ಕೇರಳದ ಯಾವ ಪ್ರದೇಶದ ನಿವಾಸಿ ಎಂಬ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
ಕೊರೋನಾ ಸಾವು 132ಕ್ಕೇರಿಕೆ, ಚೀನಾದಲ್ಲಿ ಮರಣ ಮೃದಂಗ!
ವುಹಾನ್ ನ ವಿಶ್ವವಿದ್ಯಾನಿಲಯದಲ್ಲಿ ವ್ಯಾಸಂಗ ನಡೆಸುತ್ತಿದ್ದ ಕೇರಳದ ಈ ವಿದ್ಯಾರ್ಥಿ, ಇತ್ತೀಚೆಗಷ್ಟೇ ಮರಳಿ ಊರಿಗೆ ಬಂದಿದ್ದ. ಕೊರೋನಾ ವೈರಸ್ ಸೋಂಕು ತಗುಲಿರುವ ಶಂಕೆಯ ಮೇರೆಗೆ ಈತನ ರಸ್ತದ ಸ್ಯಾಂಪಲ್ ತೆಗೆದುಕೊಳ್ಳಲಾಗಿದ್ದು, ಪಾಸಿಟಿವ್ ರಿಸಲ್ಟ್ ಬಂದಿದೆ. ಸದ್ಯ ವೈಕ್ಯಕೀಯ ಚಿಕಿತ್ಸೆಯಲ್ಲಿರುವ ಈ ಯುವಕನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.
ಇನ್ನು ಚೀನಾದ ವುಹಾನ್ ಪ್ರಾಂತ್ಯದಲ್ಲಿ ಕೊರೋನಾ ವೈರಸ್ ಹುಟ್ಟಿಕೊಂಡಿದ್ದು, ಇಲ್ಲಿನ ಅನೇಕ ಮಂದಿ ಈ ಸೋಂಕಿಗೀಡಾಗಿದ್ದಾರೆ. ಅಲ್ಲದೇ ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಈ ನಗರವನ್ನೇ ಬಂದ್ ಮಾಡಲಾಗಿದೆ.
ಹೀಗಿದೆ ಕೊರೋನಾ ಬಿಟ್ಕೊಂಡ ವುಹಾನ್ ನಗರ: ಮೂಲೆ ಮೂಲೆಯೂ ವೈರಸ್ ಆಗರ!
ಜನವರಿ 30ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ