
ತಿರುವನಂತಪುರಂ(ಜು.28): 3ನೇ ಅಲೆಗೆ ಮುನ್ನುಡಿ ಬರೆಯುತ್ತಿದೆ ಎಂದು ಹೇಳಲಾಗಿರುವ ಕೇರಳ ರಾಜ್ಯದಲ್ಲಿ ಮಂಗಳವಾರ 22,129 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ ಹಾಗೂ 156 ಜನರು ಕೋವಿಡ್‌ಗೆ ಬಲಿಯಾಗಿದ್ದಾರೆ.
ಪಾಸಿಟಿವಿಟಿ ರೇಟ್ ಶೇ.12ಕ್ಕಿಂತಲೂ ಹೆಚ್ಚಾಗಿದೆ. 13,145 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.
5 ಜಿಲ್ಲೆಗಳಲ್ಲಿ ಹೊಸದಾಗಿ 2000ಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಮಲ್ಲಾಪುರಂ(4037), ತ್ರಿಶೂರ್(2623), ಕೋಳಿಕೋಡ್(2397), ಎರ್ನಾಕುಲಂ(2352) ಹಾಗೂ ಕೊಲ್ಲಂ(1914) ಜಿಲ್ಲೆಗಳಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ 1,79,130 ಪರೀಕ್ಷೆಗಳನ್ನು ನಡೆಸಲಾಗಿದ್ದು, ಶೇ.12.35ರಷ್ಟುಪ್ರಕರಣಗಳು ಪಾಸಿಟಿವ್ ಆಗಿವೆ. ರಾಜ್ಯದ 626 ಪ್ರದೇಶಗಳಲ್ಲಿ ಪಾಸಿಟಿವಿಟಿ ರೇಟ್ ಶೇ.10ಕ್ಕಿಂತಲೂ ಅಧಿಕವಾಗಿದೆ.
ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 33,05,245ಕ್ಕೆ ಏರಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 31,43,043ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ