ವಿದೇಶಕ್ಕೆ ತೆರಳಲು ಮುಂದಾಗಿದ್ದ ತಾಯಿ: ಶಾಲಾ ಕಟ್ಟಡದಿಂದ ಹಾರಿದ್ದ ವಿದ್ಯಾರ್ಥಿನಿ ಸಾವು

Published : Jan 15, 2026, 03:35 PM ISTUpdated : Jan 15, 2026, 03:36 PM IST
student died in kerala

ಸಾರಾಂಶ

ಕೇರಳದಲ್ಲಿ ಶಾಲಾ ಕಟ್ಟಡದಿಂದ ಹಾರಿ ಆತ್ಮ*ಹತ್ಯೆಗೆ ಯತ್ನಿಸಿದ್ದ 16 ವರ್ಷದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಮಿದುಳು ನಿಷ್ಕ್ರಿಯಗೊಂಡ ನಂತರ, ಆಕೆಯ ಪೋಷಕರು ಮಗಳ ಅಂಗಾಂಗಗಳನ್ನು ದಾನ ಮಾಡಿ ಹಲವರಿಗೆ ಹೊಸ ಜೀವನ ನೀಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಶಾಲಾ ಕಟ್ಟಡದಿಂದ ಕೆಳಗೆ ಹಾರಿ ಆತ್ಮ*ಹತ್ಯೆಗೆ ಯತ್ನಿಸಿದ್ದ 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಕೇರಳದ ಪಯ್ಯವೂರ್‌ನಲ್ಲಿ ನಡೆದಿದೆ. ಪಿಯುಸಿ ಓದುತ್ತಿದ್ದ ಅಯೋನಾ ಮಾನ್ಸನ್ ಮೃತ ವಿದ್ಯಾರ್ಥಿನಿ. ಈಕೆ ಕಳೆದ ಸೋಮವಾರ ಪಯ್ಯವೂರ್‌ನ ಎರುಡ್‌ನಲ್ಲಿರುವ ಸೇಕ್ರೆಡ್ ಹಾರ್ಟ್ ಹೈಯರ್ ಸೆಕೆಂಡರಿ ಶಾಲೆಯ ಮೂರನೇ ಮಹಡಿಯಿಂದ ಕೆಳಗೆ ಹಾರಿದ್ದಳು. ಗಂಭೀರ ಗಾಯಗೊಂಡಿದ್ದ ಆಕೆಯನ್ನು ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆಕೆ ಇಂದು ಸಾವನ್ನಪ್ಪಿದ್ದಾಳೆ.

ಅಯೋನಾ ಮಾನ್ಸನ್‌ಳ ತಾಯಿ ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗಲು ಯೋಜನೆ ರೂಪಿಸಿದ್ದರು, ಇದಕ್ಕಾಗಿ ಎಲ್ಲಾ ಸಿದ್ಧತೆಗಳು ನಡೆದಿತ್ತು. ಆದರೆ ಅಮ್ಮ ವಿದೇಶಕ್ಕೆ ಹೋಗುವ ವಿಚಾರದಿಂದ ಅಯೋನಾ ಬಹಳ ದುಃಖಿತಳಾಗಿದ್ದಳು ಎಂದು ತಿಳಿದು ಬಂದಿದೆ. ಸೋಮವಾರ ಬೆಳಗ್ಗೆ ಶಾಲೆಗೆ ಬಂದಿದ್ದ ಅಯೋನಾ ಸ್ವಲ್ಪ ಹೊತ್ತಿನಲ್ಲೇ ಶಾಲಾ ಕಟ್ಟಡದ 3ನೇ ಮಹಡಿಯಿಂದ ಕೆಳಗೆ ಹಾರಿದ್ದಾಳೆ. ಬಾಸ್ಕೆಟ್‌ಬಾಲ್ ಅಂಗಣಕ್ಕೆ ಬಿದ್ದ ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆಕೆ ಸಾವನ್ನಪ್ಪಿದ್ದಾಳೆ.

ಇದನ್ನೂ ಓದಿ: ಜೈಲೂಟ ತಿಂದರೂ ಬಿಡದ ಹಳೇ ಚಾಳಿ: 2 ತಿಂಗಳ ಹಿಂದಷ್ಟೇ ಬಿಡುಗಡೆ ಮತ್ತೆ ಡ್ರಗ್‌ ದಂಧೆಗಿಳಿದ ಶಿಲ್ಪಾ ಬಂಧನ

ಅಯೋನಾಗೆ ಕೆಲ ದಿನಗಳಲ್ಲಿ ಲ್ಯಾಬ್ ಪರೀಕ್ಷೆ ನಡೆಯುವುದರಲ್ಲಿತ್ತು. ಅಷ್ಟರಲ್ಲಿ ಅಯೋನಾ ಬದುಕನ್ನೇ ಕೊನೆಗೊಳಿಸಿದ್ದು, ಆಕೆಯ ಸಾವಿಗೆ ನಿಖರವಾದ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಘಟನೆಯ ಕುರಿತು ಪಯ್ಯವೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ನಂತರ, ಶವವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ.

ಅಯೋನಾಳ ಅಂಗಾಗ ದಾನ ಮಾಡಿದ ಪೋಷಕರು

ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಅಯೋನಾಳಿಗೆ ಚಿಕಿತ್ಸೆಯ ವೇಳೆ ನಿನ್ನೆ ರಾತ್ರಿ ಮಿದುಳು ನಿಷ್ಕ್ರಿಯಗೊಂಡಿತ್ತು. ಹೀಗಾಗಿ ಅಯೋನಾಳ ಪೋಷಕರು ಮಗಳ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆಯಲು ಮುಂದಾದರು. ತಲಶ್ಶೇರಿ, ಕೋಯಿಕ್ಕೋಡ್, ತಿರುವನಂತಪುರನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳಿಗೆ ಅಯೋನಾಳ ಅಂಗಾಂಗವನ್ನು ದಾನ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಅಯೋನಾಳ ಎರಡು ಮೂತ್ರಪಿಂಡ, ಲಿವರ್ ಹಾಗೂ ಕಣ್ಣುಗಳನ್ನು ದಾನ ಮಾಡಲಾಗಿದೆ. ಅಯೋನಾಳ ಒಂದು ಮೂತ್ರಪಿಂಡವನ್ನು ಇಂಡಿಗೋ ವಿಮಾನದ ಮೂಲಕ ತಿರುವನಂತಪುರದ ಆಸ್ಪತ್ರೆಗೆ ಸಾಗಿಸಲಾಗಿದೆ. ಹಾಗೆಯೇ ಮತ್ತೊಂದು ಮೂತ್ರಪಿಂಡವನ್ನು ಕೋಯಿಕ್ಕೋಡ್‌ನ ಆಸ್ಟರ್ ಮೀಮ್ಸ್ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ಹಾಗೆಯೇ ಲಿವರ್‌ನ್ನು ಕೋಯಿಕ್ಕೋಡ್‌ನ ಮೈತ್ರಾ ಆಸ್ಪತ್ರೆಗೆ ಕಣ್ಣುಗಳನ್ನು ಕಣ್ಣೂರು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಅಯೋನಾಳ ಸಾವನ್ನಪ್ಪಿದ್ದರೂ ಅಂಗಾಂಗ ದಾನದ ಮೂಲಕ ಹಲವರ ಬದುಕಿಗೆ ಬೆಳಕಾಗಿದ್ದಾಳೆ.

ಇದನ್ನೂ ಓದಿ: ಹಬೀಬುಲ್ಲಾ ಹಬೀಬಿ ಅಂತ ಹೇಳ್ಕೊಂಡು ಗಂಗಾ ಘಾಟ್‌ನಲ್ಲಿ ಸುತ್ತಾಡ್ತಿದ್ದ ಇಬ್ಬರು ದುಬೈ ಶೇಕ್‌ಗಳ ಬಂಧನ..! 

ವಿಶೇಷ ಮನವಿ:

ಆತ್ಮ8ತ್ಯೆ ಮಾಡಿಕೊಳ್ಳುವ ಮುನ್ನ ಒಮ್ಮೆ ಯೋಚಿಸಿ... ಆತ್ಮ8ತ್ಯೆ ಮಾಡಿಕೊಂಡ ನಂತ್ರ ಮುಂದೇನು? ಸಮಸ್ಯೆಗೆ ಪರಿಹಾರ ಸಿಗುತ್ತಾ? ಇಲ್ಲ, ಕಷ್ಟಗಳಿದ್ದರೆ ಆತ್ಮೀಯರಿಗೆ ಹೇಳಿಕೊಳ್ಳಿ, ಏನೇ ಕಷ್ಟಗಳಿದ್ದರೂ ಆ ಸಮಯ ಕಳೆದು ಹೋಗುತ್ತದೆ ಎಂಬುದು ನೆನಪಿರಲಿ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ 'ಆತ್ಮ8ತ್ಯೆ' ಯೋಚನೆಗಳನ್ನು ಹೊಂದಿದ್ದರೆ, ನಿಮಗಾಗಿ ನೆರವು ಲಭ್ಯವಿದೆ. ಜಗತ್ತಿನಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವವರು ನೀವು ಒಬ್ಬರು ಮಾತ್ರವಲ್ಲ ಎಂಬುದನ್ನು ದಯವಿಟ್ಟು ತಿಳಿದುಕೊಳ್ಳಿ. ಕೆಲವೊಮ್ಮೆ ಜೀವನ ಬಹಳ ಬೇಡವೆಂದೇ ಅನಿಸುತ್ತಿರಬಹುದು, ಆದರೆ ನೆರವು ಯಾವಾಗಲೂ ಲಭ್ಯವಿರುತ್ತದೆ. ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ತಮ್ಮವರ ಅಥ್ವಾ ಯಾರಾದರ ಜೊತೆ ಮಾತನಾಡುವುದರಿಂದ ನಿಮ್ಮ ಸಮಸ್ಯೆಗೆ ಪರಿಹಾರ ಖಂಡಿತಾ ಸಿಗುತ್ತೆ. ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಲು ಅಥವಾ ಸಹಾಯವಾಣಿಗೆ ಕರೆ ಮಾಡಿ:

Sahai Helpline - 080 2549 7777

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Video: ಮಧ್ಯರಾತ್ರಿ ಕಿರಿಕ್; ಮನೆಯವರೆಗೂ ತಂದು ಗ್ರಾಹಕನ ಆಹಾರ ತಿಂದ ಡೆಲಿವರಿ ಬಾಯ್
ಜೈಲೂಟ ತಿಂದರೂ ಬಿಡದ ಹಳೇ ಚಾಳಿ: 2 ತಿಂಗಳ ಹಿಂದಷ್ಟೇ ಬಿಡುಗಡೆಯಾಗಿ ಮತ್ತೆ ಡ್ರಗ್‌ ದಂಧೆಗಿಳಿದ ಯುವತಿಯ ಬಂಧನ