ಬಹು ನಿರೀಕ್ಷಿತ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ ಚುನಾವಣಾ ಆಯೋಗ

Published : Mar 15, 2026, 04:40 PM ISTUpdated : Mar 15, 2026, 05:40 PM IST
chief Election commissioner

ಸಾರಾಂಶ

ರಾಷ್ಟ್ರಿಯ ಚುನಾವಣಾ ಆಯೋಗವೂ ಬಹು ನಿರೀಕ್ಷಿತ 5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ದಿನಾಂಕವನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.

ನವದೆಹಲಿ: ರಾಷ್ಟ್ರಿಯ ಚುನಾವಣಾ ಆಯೋಗವೂ ಬಹು ನಿರೀಕ್ಷಿತ 5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ದಿನಾಂಕವನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಅಸ್ಸಾಂ ಮತ್ತು ಕೇರಳದಲ್ಲಿ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 4 ರಂದು ಎಣಿಕೆ ನಡೆಯಲಿದೆ. ಅದೇ ರೀತಿ, ತಮಿಳುನಾಡಿನಲ್ಲಿ ಏಪ್ರಿಲ್ 23 ರಂದು ಮತದಾನ ನಡೆಯಲಿದೆ. ಬಂಗಾಳದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 23 ಮತ್ತು 29 ರಂದು ಮತದಾನ ನಡೆಯಲಿದೆ.

ಚುನಾವಣಾ ದಿನಾಂಕ ಘೋಷಣೆಯೊಂದಿಗೆ ಈ ರಾಜ್ಯಗಳಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದ್ದು, ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಕೂಡ ಅವರೊಂದಿಗೆ ಹಾಜರಿದ್ದರು.

ಕರ್ನಾಟಕದ 2 ವಿಧಾನಸಭಾ ಕ್ಷೇತ್ರಗಳಿಗೂ ಉಪ ಚುನಾವಣೆ:

ಇದೇ ವೇಳೆ ಕರ್ನಾಟಕದ 2 ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆ ನಡೆಯಲಿದೆ. ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಇದೇ ಸಮಯದಲ್ಲಿ ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರ ನಿಧನದಿಂದಾಗಿ ಈ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಹಾಗೂ ಬಾಗಲಕೋಟೆಯಲ್ಲಿ ಎಚ್‌ ವೈ ಮೇಟಿ ನಿಧನದಿಂದ ಈ ಎರಡು ಕ್ಷೇತ್ರಗಳು ತೆರವಾಗಿದ್ದವು.  ಈ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪ ಚುನಾವಣೆ ನಡೆಯಲಿದೆ.

ರಾಜ್ಯದ ಈ ಎರಡು ಕ್ಷೇತ್ರಗಳು ಸೇರಿದಂತೆ ಗೋವಾ, ಗುಜರಾತ್, ಮಹಾರಾಷ್ಟ್ರ, ತ್ರಿಪುರಾದಲ್ಲೂ ಕೆಲವು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿವೆ. ಇದರಲ್ಲಿ ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲಿರುವ ಕ್ಷೇತ್ರಗಳಿಗೆ ಏಪ್ರಿಲ್ 23ರಂದು ಚುನಾವಣೆ ನಡೆದರೆ ಕರ್ನಾಟಕ, ಗೋವಾ ಹಾಗೂ ತ್ರಿಪುರಾದಲ್ಲಿ ಏಪ್ರಿಲ್ 9 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗವೂ ತಿಳಿಸಿದೆ. ಮೇ 4 ರಂದು ಈ ಉಪಚುನಾವಣೆಗಳ ಫಲಿತಾಂಶ ಹೊರ ಬರಲಿದೆ. 

ಇದನ್ನೂ ಓದಿ: ಸತ್ಯ ಬಯಲಾಗುವ ಮೊದಲೇ ಸಂಭ್ರಮಿಸಿ ಪೇಚಿಗೆ ಸಿಲುಕಿದ ಊರ ಜನ: ಆಗಿದ್ದೇನು? 

ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸೇರಿದಂತೆ ನಾಲ್ಕು ರಾಜ್ಯಗಳಾದ ಕೇರಳ, ತಮಿಳುನಾಡು, ಅಸ್ಸಾಂ, ಪಶ್ಚಿಮ ಬಂಗಾಳದಾದ್ಯಂತ 824 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಮೇ 4 ರಂದು ಮತ ಎಣಿಕೆ ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸತ್ಯ ಬಯಲಾಗುವ ಮೊದಲೇ ಸಂಭ್ರಮಿಸಿ ಪೇಚಿಗೆ ಸಿಲುಕಿದ ಊರ ಜನ: ಆಗಿದ್ದೇನು?
ಡಿಕೆಶಿ ಭದ್ರಕೋಟೆಗೆ ನುಗ್ಗಿದ ಆಪರೇಷನ್ ಕಮಲ; ಬಿಡದಿ ರೆಸಾರ್ಟ್‌ನಿಂದ ಖರ್ಗೆ ಕಣ್ಗಾವಲಿನಲ್ಲಿಡಲು ಬೆಂಗಳೂರಿಗೆ ಶಿಫ್ಟ್!