ವಯನಾಡಲ್ಲೀಗ ದುರಂತ ಪ್ರವಾಸೋದ್ಯಮದ ಹಾವಳಿ; ಇನ್ನೊಂದೆಡೆ ಕಳ್ಳರ ಕಾಟ!

By Kannadaprabha News  |  First Published Aug 5, 2024, 7:14 AM IST

ಭೂಕುಸಿತದಿಂದ ವಯನಾಡು ಜಿಲ್ಲೆಯ ಹಲವು ಗ್ರಾಮಗಳು ಸಂಪೂರ್ಣ ಭೂಸಮಾಧಿಯಾಗಿ ಜನರು ಸಂಕಷ್ಟ ಪಡುತ್ತಿದ್ದರೆ, ಅದೇ ಪ್ರದೇಶದಲ್ಲೀಗ ದುರಂತ ಪ್ರವಾಸೋದ್ಯಮ ಆರಂಭವಾಗಿದೆ. ಇದು ಘಟನಾ ಸ್ಥಳದಲ್ಲಿನ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ ಮಾಡಿದೆ.


ಮೆಪ್ಪಾಡಿ (ಆ.5): ಭೂಕುಸಿತದಿಂದ ವಯನಾಡು ಜಿಲ್ಲೆಯ ಹಲವು ಗ್ರಾಮಗಳು ಸಂಪೂರ್ಣ ಭೂಸಮಾಧಿಯಾಗಿ ಜನರು ಸಂಕಷ್ಟ ಪಡುತ್ತಿದ್ದರೆ, ಅದೇ ಪ್ರದೇಶದಲ್ಲೀಗ ದುರಂತ ಪ್ರವಾಸೋದ್ಯಮ ಆರಂಭವಾಗಿದೆ. ಇದು ಘಟನಾ ಸ್ಥಳದಲ್ಲಿನ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ ಮಾಡಿದೆ.

ಭೂಕುಸಿತ ಸಂಭವಿಸಿರುವ ಪ್ರದೇಶಕ್ಕೆ ಸ್ಥಳೀಯರು ಮತ್ತು ನೆರೆ ರಾಜ್ಯಗಳ ಪ್ರವಾಸಿಗರು ರಾತ್ರೋರಾತ್ರಿ ಆಗಮಿಸುತ್ತಿದ್ದಾರೆ. ಹೀಗೆ ಬರುವ ಪ್ರವಾಸಿಗರು, ಸಾಮಾಜಿಕ ಜಾಲತಾಣಗಳಲ್ಲಿ ವಯನಾಡಿನ ದುರಂತ ಪ್ರವಾಸೋದ್ಯಮದ ಬಗ್ಗೆ ಫೋಟೋ, ವಿಡಿಯೋಗಳನ್ನು ಅಪ್ಲೋಡ್‌ ಉದ್ದೇಶದಿಂದ ಚಿತ್ರೀಕರಣಗಳನ್ನು ನಡೆಸುತ್ತಿದ್ದಾರೆ. ಜೊತೆಗೆ ರೀಲ್ಸ್‌ ಮಾಡುತ್ತಾ ಸಾಮಾಜಿಕ ಪ್ರಜ್ಞೆಯನ್ನೇ ಕಳೆದುಕೊಂಡವರಂತೆ ವರ್ತಿಸುತ್ತಾ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ ಮಾಡುತ್ತಿದ್ದಾರೆ.

Tap to resize

Latest Videos

ಅಪ್ಪನ ಕೈಹಿಡಿದೇ ಬೆಳೆದಿದ್ದೇ ಮಗಳು 'ಕೈ'ಯನನ್ನಷ್ಟೇ ಬಿಟ್ಟು ಹೋದಳು! ವಯನಾಡಿನಲ್ಲಿ ಮನಕಲುಕುವ ಘಟನೆ

 ಕಳಕುಸಿದ ಮನೆ, ನಿರಾಶ್ರಿತ ಕೇಂದ್ರಗಳ ಮೇಲೆ ಕಳ್ಳರ ದಾಳಿ

ಮೆಪ್ಪಾಡಿ: ವಯನಾಡಿನಲ್ಲಿ ಭೂಕುಸಿತದಿಂದ ನಲುಗಿ ಹೋಗಿರುವ ಸಂತ್ರಸ್ತರಿಗೆ ಇದೀಗ ಕಳ್ಳರ ಕಾಟ ಶುರುವಾಗಿದೆ. ನಿರಾಶ್ರಿತ ಶಿಬಿರಗಳಲ್ಲಿ ಆಶ್ರಯ ಪಡೆಯುತ್ತಿರುವ ಸಂತ್ರಸ್ತರ ಮನೆಗಳಿಗೆ ನುಗ್ಗಿ ಕಳ್ಳರು ತಮ್ಮ ಕೈಚಳಕ ತೋರುತ್ತಿದ್ದಾರೆ.

ವಯನಾಡು ದುರಂತ ಕತೆ: ಮನೆಯ 17 ಜನರಲ್ಲಿ ಬದುಕಿದ್ದು ಮನ್ಸೂರ್ ಮಾತ್ರ!

ಹೌದು, ದುರಂತದಲ್ಲಿ ಮನೆ ಕಳೆದುಕೊಂಡು ಸಂತ್ರಸ್ತರಾಗಿರುವವರು ನಿರಾಶ್ರಿತ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಇದನ್ನು ಬಂಡವಾಳವಾಗಿಸಿಕೊಂಡಿರುವ ಖದೀಮರು, ಜನವಸತಿ ಇಲ್ಲದ ಕಾರಣ, ರಾತ್ರಿ ವೇಳೆ ಮನೆಗಳಿಗೆ ನುಗ್ಗಿ ಬೆಲೆಬಾಳುವ ವಸ್ತುಗಳನ್ನು ಕದ್ದಿದ್ದಾರೆ. ಸಂತ್ರಸ್ತರಿಂದ ದೂರು ಬಂದ ಹಿನ್ನೆಲೆಯಲ್ಲಿ ಪೊಲೀಸರು ಈ ಪ್ರದೇಶಗಳಲ್ಲಿ ಗಸ್ತು ಆರಂಭಿಸಿದ್ದು, ರಾತ್ರಿ ವೇಳೆ ಭೂಕುಸಿತ ಪೀಡಿತ ಪ್ರದೇಶದಲ್ಲಿ ಓಡಾಟ ನಡೆಸದಂತೆ ನಿರ್ಬಂಧ ವಿಧಿಸಿದೆ.

ಇನ್ನೊಂದೆಡೆ ಬೆಳಗ್ಗೆ ಹೊತ್ತಿನಲ್ಲಿ ಸಂತ್ರಸ್ತರು ತಮ್ಮ ವಾಸಸ್ಥಳಕ್ಕೆ ತೆರಳಿದ ವೇಳೆ ನಿರಾಶ್ರಿತ ಕೇಂದ್ರಗಳಲ್ಲಿನ ಅವರ ವಸ್ತುಗಳನ್ನು ಕದಿಯುತ್ತಿದ್ದಾರೆ. ಇಂಥ ಹಲವು ಪ್ರಕರಣಗಳು ಬೆಳಕಿಗೆ ಬಂದಿದೆ.

click me!