
ಕೊಚ್ಚಿ(ಸೆ.30): ಕೊರೋನಾದಿಂದ ಉದ್ಭವಿಸಿರುವ ಬಿಕ್ಕಟ್ಟಿನಿಂದಾಗಿ ಜನರು ನಿತ್ಯದ ಜೀವನಕ್ಕೆ ಪರದಾಡುತ್ತಿದ್ದರೆ, ಅತ್ತ ಕೇರಳದ ಎಲಾಮಕ್ಕರದ ಮಹಿಳೆಯೊಬ್ಬರು 90 ದಿನದಲ್ಲಿ 350 ಆನ್‌ಲೈನ್ ಕೋರ್ಸ್ ಮಾಡಿ ವಿಶ್ವ ದಾಖಲೆ ಬರೆದಿದ್ದಾರೆ.
ಆರತಿ ರಘುನಾಥ್ ಅವರೇ ಈ ಸಾಧನೆ ಮಾಡಿದ ಗಟ್ಟಿಗಿತ್ತಿ. ಎರಡನೇ ವರ್ಷದ ಎಂಎಸ್‌ಸಿ ವ್ಯಾಸಂಗ ಮಾಡುತ್ತಿರುವ ಆರತಿ ಕಳೆದ ಮೂರು ತಿಂಗಳಿನಲ್ಲಿ ‘ಕೋರ್ಸೆರಾ’ ಎಂಬ ಆನ್‌ಲೈನ್ ವೇದಿಕೆ ಮೂಲಕ 350 ಆನ್‌ಲೈನ್ ಕೋರ್ಸ್ ಪೂರ್ಣಗೊಳಿಸಿದ್ದಾರೆ.
ವಿಶ್ವಪ್ರಸಿದ್ಧ ವಿಶ್ವವಿದ್ಯಾಲಯಗಳಾದ ಜಾನ್ ಹಾಕಿನ್ಸ್ ಯುನಿವರ್ಸಿಟಿ, ಟೆಕ್ನಿಕಲ್ ಯುನಿವರ್ಸಿಟಿ ಆಫ್ ಡೆನ್ಮಾರ್ಕ್, ಯುನಿವರ್ಸಿಟಿ ಆಫ್ ವರ್ಜಿನಿಯಾ ಮುಂತಾದ ವಿವಿಗಳಿಂದ ಕೋರ್ಸ್ ಪಡೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ