
ತಿರುವನಂತಪುರ: ಸಾರ್ವಜನಿಕ ಮಹಿಳೆಯ ವಾಶ್ ರೂಮ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಆರೋಪದಡಿಯಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡನನ್ನು ಬಂಧಿಸಲಾಗಿದೆ. 30 ವರ್ಷದ ಆಶಿಕ್ ಬದರುದ್ದೀನ್ ಬಂಧಿತ ಆರೋಪಿ. ತಿರುವನಂತಪುರದ ಬಾಲಕಿಯರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿ ಆಶಿಕ್ ಬದರುದ್ದೀನ್ ಯೂತ್ ಕಾಂಗ್ರೆಸ್ ಪುನಲೂರ ಬ್ಲಾಕ್‌ನ ಪ್ರಧಾನ ಕಾರ್ಯದರ್ಶಿ ಎಂದು ವರದಿಯಾಗಿದೆ. ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಎಂಬ ಆರೋಪ ಆಶಿಕ್ ಬದರುದ್ದಿನ್ ವಿರುದ್ಧ ಕೇಳಿ ಬಂದಿದೆ.
Rave party: ರೇವ್ ಪಾರ್ಟಿಗೂ ಕಾಮನ್ ಪಾರ್ಟಿಗೂ ಇರುವ ವ್ಯತ್ಯಾಸವೇನು? ನಟಿ ಹೇಮಾ ವಿಡಿಯೋದಲ್ಲಿ ಹೇಳಿದ್ದೇನು..?
ಆರೋಪಿಯನ್ನು ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ. ಪೊಲೀಸರು ಆರೋಪಿಯ ಮೊಬೈಲ್ ವಶಕ್ಕೆ ಪಡೆದು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ