
ಕಣ್ಣೂರು : ಕರ್ನಾಟಕದ ಮಂಡ್ಯದಲ್ಲಿ ಒಬ್ಬ ವೈದ್ಯರು ಈ ಹಿಂದೆ 5 ರು. ವೈದ್ಯ ಎಂದು ಪ್ರಸಿದ್ಧರಾಗಿದ್ದರು. ಅದೇ ರೀತಿ ಕೇರಲದಲ್ಲಿ 2 ರು. ಡಾಕ್ಟರ್ ಎಂದೇ ಖ್ಯಾತರಾಗಿದ್ದ ಜನಸ್ನೇಹಿ ವೈದ್ಯ ಎ.ಕೆ. ರೈರು ಗೋಪಾಲ್ (80) ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದರು. ಇವರ ಅಗಲಿಕೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
ಕಣ್ಣೂರಿನಲ್ಲಿರುವ ಡಾ। ಗೋಪಾಲ್‌ರ ನಿವಾಸಕ್ಕೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದ ಸಿಎಂ, ‘ಜನಸ್ನೇಹಿ ವೈದ್ಯರಾಗಿರುವ ಇವರು, ಅರ್ಧ ಶತಮಾನ ಕೇವಲ 2 ರು.ಗೆ ಚಿಕಿತ್ಸೆ ನೀಡುವ ಮೂಲಕ, ಆರೋಗ್ಯ ಸೇವೆಯು ಎಲ್ಲರಿಗೂ ಲಭಿಸುವಂತೆ ಮಾಡಿದ್ದರು. ಅವರ ಸೇವಾ ಮನೋಭಾವ ಅಸಂಖ್ಯಾತ ರೋಗಿಗಳಿಗೆ ಸಾಂತ್ವನ ನೀಡಿದೆ’ ಎಂದು ಸ್ಮರಿಸಿದ್ದಾರೆ.
ಡಾ. ಗೋಪಾಲ್ ಅವರನ್ನು ಕೇರಳದ ಅತ್ಯುತ್ತಮ ಕುಟುಂಬ ವೈದ್ಯ ಎಂದು ಗುರುತಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.
ಜನಸ್ನೇಹಿ ವೈದ್ಯ:
50 ವರ್ಷಗಳ ಹಿಂದೆ ಕಣ್ಣೂರಿನ ತಮ್ಮ ಮನೆಯಲ್ಲೇ ಪುಟ್ಟ ಕ್ಲಿನಿಕ್ ಪ್ರಾರಂಭಿಸಿದ್ದ ಡಾ। ಗೋಪಾಲ್, ಕೇವಲ 2 ರು.ಗೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ಈಮೂಲಕ, ಆರ್ಥಿಕವಾಗಿ ಹಿಂದುಳಿದವರ ಪಾಲಿಗೆ ಆಶಾಕಿರಣವಾಗಿದ್ದರು. ಕ್ರಮೇಣ ‘2 ರು. ಡಾಕ್ಟರ್’ ಎಂಬ ಹೆಸರು ಪಡೆದಿದ್ದರು.
ವಿದ್ಯಾರ್ಥಿಗಳು, ಕೆಲಸಕ್ಕೆ ಹೋಗುವವರಿಗೆ ಅನುಕೂಲವಾಗಲೆಂದು ಬೆಳಗ್ಗೆ 3 ಗಂಟೆಗೆ ಕ್ಲಿನಿಕ್ ತೆರೆಯುತ್ತಿದ್ದ ಗೋಪಾಲ್, ಕೆಲವೊಮ್ಮೆ ದಿನಕ್ಕೆ 300 ರೋಗಿಗಳ ಆರೋಗ್ಯ ಪರೀಕ್ಷಿಸಿದ್ದೂ ಉಂಟು. ಕ್ರಮೇಣ ಅವರು ತಮ್ಮ ಶುಲ್ಕವನ್ನು 40-50 ರು.ಗೆ ಏರಿಸಿದರೂ, ಬೇರೆ ಆಸ್ಪತ್ರೆಗಳಿಗೆ ಹೋಲಿಸಿದರೆ ಅದು ತುಂಬಾ ಕಡಿಮೆ ಆಗಿತ್ತು. ಆರೋಗ್ಯ ಹದಗೆಡತೊಡಗಿದ ಕಾರಣ, 2024ರ ಮೇ ತಿಂಗಳಲ್ಲಿ ಡಾ। ಗೋಪಾಲ್ ತಮ್ಮ ಕ್ಲಿನಿಕ್ ಮುಚ್ಚಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ