ಖಲಿಸ್ತಾನಿ ಉಗ್ರ ಅಮೃತ್‌ಪಾಲ್ ಸಿಂಗ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಪಂಜಾಬ್‌ನ ಮೋಗಾ ಪೊಲೀಸರು ಬಂಧನಕ್ಕೊಳಗಾಗಿದ್ದಾನೆ. ಇತ್ತೀಚೆಗಷ್ಟೇ ಅಮೃತ್‌ಪಾಲ್ ಸಿಂಗ್ ಪತ್ನಿಯನ್ನು ವಶಕ್ಕೆ ಪಡೆಯಲಾಗಿತ್ತು.
ಅಮೃತಸರ (ಏಪ್ರಿಲ್ 23, 2023): ಕಳೆದ ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಪಂಜಾಬ್ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಖಲಿಸ್ತಾನಿ ಉಗ್ರ ಅಮೃತ್‌ಪಾಲ್ ಸಿಂಗ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಪಂಜಾಬ್‌ನ ಮೋಗಾ ಪೊಲೀಸರು ಬಂಧನಕ್ಕೊಳಗಾಗಿದ್ದಾನೆ. ಇತ್ತೀಚೆಗಷ್ಟೇ ಅಮೃತ್‌ಪಾಲ್ ಸಿಂಗ್ ಪತ್ನಿಯನ್ನು ವಶಕ್ಕೆ ಪಡೆಯಲಾಗಿತ್ತು.
ವಾರಿಸ್ ಪಂಜಾಬ್ ದೇ ಸಂಘಟನೆಯ ಮುಖ್ಯಸ್ಥ ಅಮೃತ್‌ಪಾಲ್ ಸಿಂಗ್ ಪೊಲೀಸರ ಎದುರು ಶರಣಾಗಿದ್ದಾರೆ ಎಂದು ಹೇಳಲಾಗಿದ್ದು, ನಂತರ ಅವರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮಾರ್ಚ್ 18 ರಿಂದ ಖಲಿಸ್ತಾನಿ ಉಗ್ರ ಅಮೃತ್‌ಪಾಲ್ ಸಿಂಗ್‌ಗಾಗಿ ದೇಶದಲ್ಲಿ ಹುಡುಕಾಟ ನಡೆಯುತ್ತಲೇ ಇತ್ತು. ಅವರು ನೇಪಾಳಕ್ಕೆ ಪರಾರಿಯಾಗಿದ್ದಾರೆ ಎಂದೂ ಹೇಳಲಾಗಿತ್ತು. ಪಂಜಾಬ್, ಹರ್ಯಾಣ, ದೆಹಲಿ ಸೇರಿ ಹಲವೆಡೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದರೂ ಖಲಿಸ್ತಾನಿ ಉಗ್ರ ಮಾತ್ರ ಸಿಕ್ಕಿಬಿದ್ದಿರಲಿಲ್ಲ.
'Waris Punjab De' chief Amritpal Singh arrested by Punjab Police from Moga district of Punjab: Sources
Amritpal Singh was on the run since March 18. pic.twitter.com/ks9IOJIWIc
ಇದನ್ನು ಓದಿ: ದಿಲ್ಲಿಯಲ್ಲಿ ಮಾರುವೇಷದಲ್ಲಿ ಉಗ್ರ ಅಮೃತ್‌ಪಾಲ್ ಪ್ರತ್ಯಕ್ಷ: ಮಾಸ್ಕ್, ಸನ್‌ಗ್ಲಾಸ್ ಧರಿಸಿ ಸುತ್ತಾಟ
ನಿನ್ನೆಯಷ್ಟೇ ಅಮೃತ್‌ಪಾಲ್ ಸಿಂಗ್ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದ ಕೆಂದ್ರ ಗೃಹ ಸಚಿವ ಅಮಿತ್ ಶಾ ಪಂಜಾಬ್ ಸರ್ಕಾರವನ್ನು ಮೆಚ್ಚಿಕೊಂಡಿದ್ದರು. "(ಖಲಿಸ್ತಾನದ ಯಾವುದೇ ಅಲೆ) ಇಲ್ಲ, ಅನೇಕ ಬಾರಿ, ಕೆಲವರು ಪ್ರಯತ್ನಿಸುತ್ತಾರೆ, ಆದರೆ ಸರ್ಕಾರಗಳು ತಮ್ಮ ಕೆಲಸವನ್ನು ಮಾಡಿವೆ. ಪಂಜಾಬ್ ಸರ್ಕಾರ ಉತ್ತಮ ಕೆಲಸ ಮಾಡಿದೆ, ಕೇಂದ್ರವು ಬೆಂಬಲ ನೀಡಿದೆ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ" ಎಂದು ಬೆಂಗಳೂರಿನಲ್ಲಿ ಹೇಳಿದ್ದರು.
ಮಾರ್ಚ್ 18 ರಂದು ಅವರ ಬೆಂಬಲಿಗರು ಅಜ್ನಾಲಾ ಪೊಲೀಸ್ ಠಾಣೆಗೆ ದಾಳಿ ಮಾಡಿದ ನಂತರ ಪೊಲೀಸರು ಪರಾರಿಯಾದ ಅಮೃತಪಾಲ್ ಸಿಂಗ್ ಮತ್ತು ಅವರ ಸಂಘಟನೆಯ 'ವಾರಿಸ್ ಪಂಜಾಬ್ ದೇ' ಸದಸ್ಯರಿಗಾಗಿ ಹುಡುಕಾಟ ನಡೆಸಿ ಒಬ್ಬೊಬ್ಬರನ್ನೇ ವಶಕ್ಕೆ ಪಡೆಯುತ್ತಿದ್ದರು. ಈ ಮಧ್ಯೆ, ತನ್ನ ಪತ್ನಿ ಕಿರಣ್‌ದೀಪ್ ಕೌರ್ ಲಂಡನ್‌ಗೆ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದಾಗ ಅಮೃತಸರ ವಿಮಾನ ನಿಲ್ದಾಣದಲ್ಲಿ ವಿಚಾರಣೆಗೆ ಒಳಗಾದ ಮೂರು ದಿನಗಳ ನಂತರ ಅಮೃತಪಾಲ್ ಸಿಂಗ್ ಶರಣಾಗಿದ್ದಾರೆ. ಕಸ್ಟಮ್ಸ್ ಇಲಾಖೆಯಿಂದ ವಿಚಾರಣೆಗೆ ಒಳಗಾದ ಕಿರಣ್‌ದೀಪ್ ಕೌರ್ ಅವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಅದೇ ಕಾನೂನು ಪ್ರಕ್ರಿಯೆಯಡಿಯಲ್ಲಿ ವಶಕ್ಕೆ ಪಡೆಯಲಾಗಿತ್ತು. ಅಲ್ಲದೆ, ತಲೆಮರೆಸಿಕೊಂಡಿರುವ ಆರೋಪಿಯ ಕುಟುಂಬ ಮತ್ತು ಪರಿಚಯಸ್ಥರನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಇದನ್ನೂ ಓದಿ: ಖಲಿಸ್ತಾನಿ ಉಗ್ರ ಅಮೃತ್‌ಪಾಲ್ ಸಿಂಗ್ ನೇಪಾಳಕ್ಕೆ ಎಸ್ಕೇಪ್: ಹೈ ಅಲರ್ಟ್ ಘೋಷಣೆ
ಅಮೃತಪಾಲ್ ಸಿಂಗ್ ಮತ್ತು ಅವರ ಬೆಂಬಲಿಗರು ಕತ್ತಿ ಮತ್ತು ಬಂದೂಕುಗಳನ್ನು ಝಳಪಿಸುತ್ತಾ, ಬ್ಯಾರಿಕೇಡ್‌ಗಳನ್ನು ಭೇದಿಸಿ ಫೆಬ್ರವರಿ 24 ರಂದು ಅಮೃತಸರ ನಗರದ ಹೊರವಲಯದಲ್ಲಿರುವ ಅಜ್ನಾಲಾದಲ್ಲಿ ಪೊಲೀಸ್ ಠಾಣೆಗೆ ನುಗ್ಗಿ ಅವರ ಸಹಾಯಕ ಮತ್ತು ಅಪಹರಣ ಪ್ರಕರಣದ ಆರೋಪಿ ಲವ್‌ಪ್ರೀತ್ ಸಿಂಗ್ ಬಿಡುಗಡೆಗೆ ಒತ್ತಾಯಿಸಿದರು. ಈ ವೇಳೆ ನಡೆದಿದ್ದ ಘರ್ಷಣೆಯಲ್ಲಿ 6 ಪೊಲೀಸರು ಗಾಯಗೊಂಡಿದ್ದರು.
ದೆಹಲಿಯಿಂದ ಹರಿಯಾಣದವರೆಗೆ, ಪೊಲೀಸರು ಒಂದು ತಿಂಗಳಲ್ಲಿ ಅಮೃತಪಾಲ್ ಸಿಂಗ್‌ನ ಹಲವಾರು ದೃಶ್ಯಗಳನ್ನು ಕಂಡಿದ್ದಾರೆ. ಪಂಜಾಬ್ ಪೊಲೀಸರು ಬಿಡುಗಡೆ ಮಾಡಿದ ಹಲವಾರು ಸಿಸಿಟಿವಿ ದೃಶ್ಯಗಳಲ್ಲಿ ಆತ ವಿಭಿನ್ನ ಉಡುಗೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಾರು, ಬೈಕ್, ಬಸ್ ಮುಂತಾದ ವಾಹನಗಳ ಮೂಲಕ ಅಮೃತ್‌ಪಾಲ್ ಸಿಂಗ್ ತನ್ನ ಸ್ಥಳಗಳನ್ನು ಬದಲಾಯಿಸಿದ್ದಾನೆ.
ಇದನ್ನೂ ಓದಿ: ಇವಳೇ ನೋಡಿ ಖಲಿಸ್ತಾನಿ ಉಗ್ರನ ಎನ್‌ಆರ್‌ಐ ಪತ್ನಿ: ವಿದೇಶಿ ಹಣದ ಮೂಲದ ಬಗ್ಗೆಯೂ ಪಂಜಾಬ್ ಪೊಲೀಸರ ವಿಚಾರಣೆ
ಮಾರ್ಚ್ 18 ರಂದು ಪೊಲೀಸರ ಬಲೆಯಿಂದ ತಪ್ಪಿಸಿಕೊಂಡ ನಂತರ, ಅಮೃತಪಾಲ್ ಸಿಂಗ್, ಮಾರ್ಚ್ 29 ರಂದು ವಿಡಿಯೋ ಬಿಡುಗಡೆ ಮಾಡಿದ್ದು, ಮತ್ತು ತಾನು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇನೆ ಮತ್ತು ಸುರಕ್ಷಿತವಾಗಿದ್ದೇನೆ ಎಂದು ಹೇಳಿಕೊಂಡಿದ್ದರು. ಖಲಿಸ್ತಾನಿ ಉಗ್ರ ಅಮೃತ್‌ಪಾಳ್ ಸಿಂಗ್ ಮತ್ತು ಆತನ ಸಹಚರರ ಮೇಲೆ ವರ್ಗಗಳ ನಡುವೆ ವೈಮನಸ್ಸು ಹರಡುವುದು, ಕೊಲೆ ಯತ್ನ, ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮತ್ತು ಸಾರ್ವಜನಿಕ ಸೇವಕರಿಂದ ಕಾನೂನುಬದ್ಧ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸುವುದು ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ.
ಇದನ್ನೂ ಓದಿ: ಅಫೇರ್, ಬ್ಲ್ಯಾಕ್‌ಮೇಲ್: ಹನಿಮೂನ್‌ಗೆ ಹೋಗೋಣ ಎಂದು ಚಾಟ್ ಮಾಡಿದ್ದ ವಿವಾಹಿತ ಅಮೃತ್‌ಪಾಲ್ ಸಿಂಗ್..!