
ತಿರುವನಂತಪುರಂ(ಡಿ.25): ಕೊಚ್ಚಿ- ಮಂಗಳೂರು ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜ.5ರಂದು ವರ್ಚುವಲ್ ಕಾರ್ಯಕ್ರಮದ ಮೂಲಕ ಉದ್ಘಾಟನೆ ಮಾಡಲಿದ್ದಾರೆ.
ಸುದ್ದಿಗೋಷ್ಠಿಯ ವೇಳೆ ಈ ವಿಷಯ ತಿಳಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಗ್ಯಾಸ್ ಪೈಪ್‌ಲೈನ್ ಅನ್ನು ಮೋದಿ ಅವರು ಉದ್ಘಾಟಿಸುತ್ತಿರುವುದು ಸಂತಸದ ಸಂಗತಿ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ದೂರವಾಣಿ ಕರೆ ಮಾಡಿ ಈ ಸಂಗತಿಯನ್ನು ತಮಗೆ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.
ಮೋದಿ ಸಂವಾದ ಆಲಿಸಲಿದ್ದಾರೆ 5 ಕೋಟಿ ರೈತರು, 19000 ಸ್ಥಳಗಳಲ್ಲಿ ಕಾರ್ಯಕ್ರಮ ನೇರಪ್ರಸಾರ
ಕೊಚ್ಚಿ ಹಾಗೂ ಮಂಗಳೂರು ನಡುವಿನ 444 ಕಿ.ಮೀ. ಉದ್ದದ ಗ್ಯಾಸ್ ಪೈಪ್‌ಲೈನ್ ನಿರ್ಮಾಣ ಕಾರ್ಯಕ್ಕೆ 2009ರಲ್ಲಿ ಚಾಲನೆ ನೀಡಲಾಗಿತ್ತು. 2,915 ಕೋಟಿ ರು. ವೆಚ್ಚದ ಈ ಯೋಜನೆ 2014ರಲ್ಲೇ ಆರಂಭವಾಗಬೇಕಿತ್ತು. ಆದರೆ, ಸುರಕ್ಷೆಯ ಕುರಿತು ಉಂಟಾದ ವಿರೋಧ ಹಾಗೂ ಯೋಜನೆಗೆ ಬೇಕಾದ ಭೂ ಸ್ವಾಧೀನ ಪ್ರಕ್ರಿಯೆ, ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರ ವಿರೋಧದಿಂದಾಗಿ ಈ ಯೋಜನೆ ನೆನಗುದಿಗೆ ಬಿದ್ದಿತ್ತು. ಹಲವಾರು ಅಡ್ಡಿ ಆತಂಕದ ಬಳಿಕ ಗೇಲ್ ಇಂಡಿಯಾ ಲಿಮಿಟೆಡ್ ಈ ಯೋಜನೆಯ ಕಾಮಗಾರಿಯನ್ನು ಪೂರ್ಣಗೊಳಿಸಿದ್ದು, ಯೋಜನೆಯ ವೆಚ್ಚ ದುಪ್ಪಟ್ಟಾಗಿದೆ. ಈ ಯೋಜನೆಗೆ ಈಗ 5,750 ಕೋಟಿ ರು. ವೆಚ್ಚಾಗಿದೆ.
ಈ ಪೈಪ್‌ಲೈನ್ ಮೂಲಕ ಕೊಚ್ಚಿಗೆ ಪ್ರತಿನಿತ್ಯ 38 ಲಕ್ಷ ಕ್ಯುಬಿಕ್ ಮೀಟರ್ ನೈಸರ್ಗಿಕ ಅನಿಲ ಪೂರೈಕೆ ಆಗುತ್ತಿದೆ. ಅದೇ ರೀತಿ ಮಂಗಳೂರಿಗೆ ಪ್ರತಿನಿತ್ಯ 25 ಲಕ್ಷ ಕ್ಯುಬಿಕ್ ಮೀಟರ್ ಅನಿಲ ಪೈಪ್‌ಲೈನ್ ಮೂಲಕ ಪೂರೈಕೆ ಆಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ