
ಕೋಲ್ಕತ್ತಾ (ಆ.29): ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ಕೋಲ್ಕತ್ತಾದಲ್ಲಿ ಬೃಹತ್ ರ‍್ಯಾಲಿ ನಡೆಸಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ (TMC) ನಾಯಕಿ ಮಮತಾ ಬ್ಯಾನರ್ಜಿ(Mamata Banerjee) ವಿರುದ್ಧ ಕೋಲ್ಕತ್ತಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ನಿನ್ನೆ ನಡೆದ ರ‍್ಯಾಲಿಯಲ್ಲಿ ಹೈಕೋರ್ಟ್ ವಿಧಿಸಿದ್ದ ಷರತ್ತು ಮತ್ತು ನಿಯಂತ್ರಣಗಳನ್ನು ಉಲ್ಲಂಘಿಸಲಾಗಿತ್ತು.
ತೃಣಮೂಲ ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕವಾದ 'ತೃಣಮೂಲ ಛಾತ್ರ ಪರಿಷತ್'ನ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನಿನ್ನೆ ಕೋಲ್ಕತ್ತಾದಲ್ಲಿ ಈ ಸಾರ್ವಜನಿಕ ಸಭೆ ಮತ್ತು ರ‍್ಯಾಲಿಯನ್ನು ಆಯೋಜಿಸಲಾಗಿತ್ತು. ಈ ವೇಳೆ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಲಾಗಿದೆ.
ಸಾರ್ವಜನಿಕರಿಗೆ ತೊಂದರೆಯಾಗದಂತೆ, ಸಂಚಾರಕ್ಕೆ ಭಾಗಶಃ ಅವಕಾಶ ನೀಡಿ ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ ನೀಡಿತ್ತು. ಆದರೆ, ನಿಗದಿತ ಸ್ಥಳದ ಮಿತಿ ಮೀರಿ ರಸ್ತೆಯ ಎರಡೂ ಬದಿಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು. ಅಷ್ಟೇ ಅಲ್ಲದೆ, ನಿಗದಿಗಿಂತ ಹೆಚ್ಚು ಜನರನ್ನು ಸೇರಿಸಿ, ನಗರದಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಲು ಕಾರಣರಾದರು ಎಂದು ಆರೋಪಿಸಲಾಗಿದೆ.
ಹೈಕೋರ್ಟ್ ಆದೇಶ ಉಲ್ಲಂಘಿಸಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಕೋಲ್ಕತ್ತಾ ಪೊಲೀಸರು ಮಮತಾ ಬ್ಯಾನರ್ಜಿ ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ರ‍್ಯಾಲಿ ವೇಳೆ ಕೋರ್ಟ್ ನಿರ್ದೇಶನಗಳನ್ನು ಪಾಲಿಸಿಲ್ಲ ಎಂದು ವಿರೋಧ ಪಕ್ಷದ ನಾಯಕರು ನೀಡಿದ ದೂರುಗಳು ಹಾಗೂ ಟ್ರಾಫಿಕ್ ಪೊಲೀಸರ ವರದಿಯನ್ನು ಆಧರಿಸಿ ಈ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ