ಮಥುರಾ ಕೃಷ್ಣಜನ್ಮಭೂಮಿ ವಿವಾದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಜ್ಞಾನವಾಪಿ ರೀತಿಯಲ್ಲಿ ಇದೀಗ ಕೃಷ್ಣಜನ್ಮಭೂಮಿ ಸಮೀಕ್ಷೆಗೆ ಅಲಹಬಾದ್ ಹೈಕೋರ್ಟ್ ಅನುಮತಿ ನೀಡಿದೆ.
ಅಲಹಾಬಾದ್(ಡಿ.14) ಆಯೋಧ್ಯೆ ರಾಮ ಮಂದಿರ ವಿವಾದ ಬಗೆ ಹರಿದು ಉದ್ಘಾಟನೆಗೆ ಸಜ್ಜಾಗಿದೆ. ಕಾಶೀ ವಿಶ್ವನಾಥ ಮಂದಿರ ಆವರಣದ ಜ್ಞಾನವಾಪಿ ಮಸೀದಿ ಸರ್ವೆ ವರದಿ ಸಲ್ಲಿಕೆಗೆ ಕೌಂಟ್‌ಡೌನ್ ಆರಂಭಗೊಂಡಿದೆ. ಇದರ ಬೆನ್ನಲ್ಲೇ ಕೃಷ್ಣಜನ್ಮಭೂಮಿ ವಿವಾದ ಪ್ರಕರಣದಲ್ಲಿ ಮಹತ್ವದ ಬೆಳವಣಿಯಾಗಿದೆ. ಜ್ಞಾನವಾಪಿ ರೀತಿಯಲ್ಲೇ ಇದೀಗ ಮಥುರಾ ಜನ್ಮಭೂಮಿ ಸರ್ವೇಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದೆ. ಮಥುರಾದ ಕೃಷ್ಣಜನ್ಮಭೂಮಿ ಮಂದಿರದ ಆವರಣದಲ್ಲಿರುವ ಶಾಹಿ ಈದ್ಗಾ ಮಸೀದಿ ಸಮೀಕ್ಷೆಗೆ ಅನುಮತಿ ನೀಡಲಾಗಿದೆ.
ಜಸ್ಟೀಸ್ ಮಯಾಂಕ್ ಕುಮಾರ್ ಜೈನ್ ಮಹತ್ವದ ಆದೇಶ ನೀಡಿದ್ದಾರೆ. ಸಮೀಕ್ಷೆ ನಡೆಸಲು ಕಮಿಷನರ್ ತಂಡ ರಚನೆ ಮಾಡಲು ಕೋರ್ಟ್ ಸೂಚಿಸಿದೆ. ಮೂವರು ಅಧಿಕಾರಿಗಳ ಸಮಿತಿ ರಚಿಸಿ ಸರ್ವೆ ನಡೆಸುವಂತೆ ಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ. ಭಗವಾನ್ ಶ್ರೀಕೃಷ್ಣ ವಿರಾಜಮಾನ ಸಮಿತಿ ಹಾಗೂ ಇತರ 7 ಮಂದಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್, ಈ ಆದೇಶ ನೀಡಿದೆ. ಹಿಂದೂ ದೇವಸ್ಥಾನವನ್ನು ಬೀಳಿಸಿ ಮಥುರಾದ ಶಾಹಿ ಈದ್ಗಾ ಮಸೀದಿ ಕಟ್ಟಲಾಗಿದೆ. ಶಾಹಿ ಈದ್ಗಾ ಮಸೀದಿಯಲ್ಲಿ ಹಿಂದೂ ದೇವಸ್ಥಾನದ ಕುರುಹುಗಳಿವೆ. ಕಮಲದಳದ ಆಕಾರದಲ್ಲಿ ಕಂಬಗಳು ಹಿಂದೂ ದೇವಸ್ಥಾನ ಶೈಲಿಯಾಗಿದೆ. ಇದೇ ಕಂಬದಲ್ಲಿ ಹಿಂದೂ ದೇವಸ್ಥಾನ ಚಿಹ್ನೆಗಳು ಕಾಣುತ್ತಿದೆ. ಹೀಗಾಗಿ ಈದ್ಗಾ ಮಸೀದಿಯನ್ನು ಸಮೀಕ್ಷೆಗೆ ಒಳಪಡಿಸಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಪೀಠ, ಇದೀಗ ಜ್ಞಾನವಾಪಿ ಮಸೀದಿ ರೀತಿಯಲ್ಲೇ ಸರ್ವೇಗೆ ಅನುಮತಿ ನೀಡಲಾಗಿದೆ.
ಕೃಷ್ಣ ಜನ್ಮಭೂಮಿ ಮಥುರಾಗೆ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದ ಪ್ರಧಾನಿ
ಇತ್ತೀಚೆಗೆ ಸುಪ್ರೀಂ ಕೋರ್ಟ್ ಈ ಕುರಿತ ಅರ್ಜಿಯನ್ನು ವಜಾಗೊಳಿಸಿತ್ತು. ದೇವಸ್ಥಾನದ ಮೇಲೆ ಮಸೀದಿ ಕಟ್ಟಲಾಗಿದೆಯೇ ಅನ್ನೋದು ಪತ್ತೆ ಹಚ್ಚಲು ಸರ್ವೆಗೆ ಅವಕಾಶ ನೀಡುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಕೃಷ್ಣ ಜನ್ಮಭೂಮಿ ಟ್ರಸ್ಟ್ ಸುಪ್ರೀಂ ಕೋರ್ಚ್ ಮೊರೆ ಹೋಗಿತ್ತು. ‘ಮಥುರಾದಲ್ಲಿ ಶಾಹಿ ಈದ್ಗಾ ಮಸೀದಿಯವರು ಕೃಷ್ಣ ಜನ್ಮ ಸ್ಥಳವನ್ನು ಆಕ್ರಮಿಸಿಕೊಂಡು ಮಸೀದಿ ನಿರ್ಮಿಸಿದ್ದಾರೆ. ಅಲ್ಲೇ ಶೌಚಾಲಯವನ್ನು ನಿರ್ಮಿಸಿ ಹಿಂದುಗಳ ಧಾರ್ಮಿಕತೆಗೆ ಧಕ್ಕೆ ತಂದಿದ್ದಾರೆ. ಹೀಗಾಗಿ ಮಸೀದಿಯನ್ನು ವೈಜ್ಞಾನಿಕ ಸಮೀಕ್ಷೆಗೆ ಒಳಪಡಿಸಿ ಅದರಲ್ಲಿ ದೇಗುಲ ಇದ್ದ ಕುರುಹುಗಳನ್ನು ಹುಡುಕಬೇಕು’ ಎಂದು ಟ್ರಸ್ಟ್ ಕೋರಿತ್ತು. ಆದರೆ ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು.
ಕೃಷ್ಣಜನ್ಮಭೂಮಿ ದೇಗುಲ ಪಕ್ಕದ ಮಸೀದಿ ತೆರವು ಕೋರಿ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್‌ಗೆ ವರ್ಗ
ಗ್ಯಾನವಾಪಿ ಮಸೀದಿಯ ಸಮೀಕ್ಷೆಗೆ ಅನುಮತಿ ದೊರೆತ ಬೆನ್ನಲ್ಲೇ ಕೃಷ್ಣ ಜನ್ಮಭೂಮಿಯಲ್ಲೂ ಸಹ ದೇವಸ್ಥಾನದ ಮೇಲೆ ಮಸೀದಿಯಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಸ್ಥಳೀಯ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿದೆ.