ನಟ ವಿಜಯ್‌ಗೆ ಸೋಲು ಅನ್ನೋ ಸುಳ್ಳು ಸುದ್ದಿ ಕೇಳಿ ಕತ್ತು ಕುಯ್ದುಕೊಂಡ ಅಭಿಮಾನಿ!

Published : May 04, 2026, 12:50 PM IST
TVK Vijay

ಸಾರಾಂಶ

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ಸೋಲುತ್ತಾರೆ ಎಂಬ ವದಂತಿ ಕೇಳಿ ಮನನೊಂದ ಅವರ ಕಟ್ಟಾ ಅಭಿಮಾನಿಯೊಬ್ಬರು ಕೃಷ್ಣಗಿರಿಯಲ್ಲಿ ಆ*ತ್ಮಹ*ತ್ಯೆಗೆ ಯತ್ನಿಸಿದ್ದಾರೆ. ಕೆ. ಮಹೇಂದ್ರನ್ ಎಂಬ ಯುವಕ ಚೂಪಾದ ವಸ್ತುವಿನಿಂದ ಕುತ್ತಿಗೆ ಕುಯ್ದುಕೊಂಡಿದ್ದಾನೆ.

ಕೃಷ್ಣಗಿರಿ (ಮೇ.4): ತಮಿಳುನಾಡು ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗುವ ಮುನ್ನವೇ, ನಟ ಹಾಗೂ ಟಿವಿಕೆ (TVK) ಪಕ್ಷದ ಅಧ್ಯಕ್ಷ ವಿಜಯ್ ಅವರ ಕಟ್ಟಾ ಅಭಿಮಾನಿಯೊಬ್ಬರು ಆ*ತ್ಮಹ*ತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ವರದಿಯಾಗಿದೆ. ನಟ ವಿಜಯ್ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ ಎಂಬ ವದಂತಿ ಕೇಳಿ ಮನನೊಂದ ಯುವಕ ಈ ನಿರ್ಧಾರಕ್ಕೆ ಮುಂದಾಗಿದ್ದಾನೆ.

ಕೃಷ್ಣಗಿರಿಯ ನಿವಾಸಿ ಕೆ. ಮಹೇಂದ್ರನ್ (28) ಆ*ತ್ಮಹ*ತ್ಯೆಗೆ ಯತ್ನಿಸಿದ ವ್ಯಕ್ತಿ. ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಮಹೇಂದ್ರನ್ ಅವರು ನಟ ವಿಜಯ್ ಮತ್ತು ಅವರ ಟಿವಿಕೆ ಪಕ್ಷದ ಪರಮ ಅಭಿಮಾನಿಯಾಗಿದ್ದರು. ಮತ ಎಣಿಕೆ ಪ್ರಕ್ರಿಯೆ ಆರಂಭವಾಗುವ ಮುನ್ನವೇ "ವಿಜಯ್ ಚುನಾವಣೆಯಲ್ಲಿ ಸೋಲಲಿದ್ದಾರೆ" ಎಂಬ ವದಂತಿಗಳು ಹರಡಿದ್ದವು. ಇದನ್ನು ಕೇಳಿ ತೀವ್ರವಾಗಿ ಆತಂಕಗೊಂಡ ಮಹೇಂದ್ರನ್, ತನ್ನ ಮನೆಯ ಸಮೀಪವೇ ಬ್ಲೇಡ್ ಅಥವಾ ಚೂಪಾದ ವಸ್ತುವಿನಿಂದ ಕುತ್ತಿಗೆ ಕುಯ್ದುಕೊಂಡಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ

ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹೇಂದ್ರನ್ ಅವರನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ರಕ್ಷಿಸಿ, ಕೃಷ್ಣಗಿರಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿದ್ದಾರೆ. "ಯುವಕನ ಕುತ್ತಿಗೆಗೆ ತೀವ್ರ ಗಾಯವಾಗಿದ್ದು, ಪ್ರಸ್ತುತ ಅವರಿಗೆ ತುರ್ತು ನಿಗಾ ಘಟಕದಲ್ಲಿ (ICU) ತೀವ್ರ ನಿಗಾ ವಹಿಸಿ ಚಿಕಿತ್ಸೆ ನೀಡಲಾಗುತ್ತಿದೆ," ಎಂದು ಕೃಷ್ಣಗಿರಿ ಟೌನ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Thalapathy Vijay: ಕ್ರಿಶ್ಚಿಯನ್‌ ಆದ್ರೂ ತಾಯಿಗಾಗಿ ಸಾಯಿ ಬಾಬಾ ಮಂದಿರ ಕಟ್ಟಿದ್ರು, ಹಿಂದೂ ದೇವರ ಆರಾಧಿಸೋ ವಿಜಯ್‌!
'ನಾನು ಹೇಳಿದ ವಿಡಿಯೋ ಇಟ್ಕೊಂಡಿರಿ..' ವಿಜಯ್‌ ಬಗ್ಗೆ ರಾಜಕೀಯ ಚಾಣಾಕ್ಷ ಪ್ರಶಾಂತ್‌ ಕಿಶೋರ್‌ ಹೇಳಿದ್ದ ಭವಿಷ್ಯ ವೈರಲ್‌