ಉಚ್ಛಾಟಿತ ಟಿಎಂಸಿ ಸಂಸದೆ ಮಹುವಾ ವಿರುದ್ಧ ರಾಜಮಾತೆ ಅಮೃತಾ ಸ್ಪರ್ಧೆ

By Kannadaprabha NewsFirst Published Mar 26, 2024, 9:49 AM IST
Highlights

ತಮ್ಮ ವಿರುದ್ಧ ಕಣಕ್ಕಿಳಿಸಲು ಬಿಜೆಪಿಗೆ ಅಭ್ಯರ್ಥಿಯೇ ಇಲ್ಲ ಎಂದು ಟೀಕಿಸುತ್ತಿದ್ದ ಕೃಷ್ಣಾನಗರದ ಉಚ್ಛಾಟಿತ ಸಂಸದೆ ಮಹುವಾ ಮೊಯಿತ್ರಾಗೆ ಬಿಜೆಪಿ ಬಲವಾದ ತಿರುಗೇಟು ನೀಡಿದ್ದು, ಸ್ಥಳೀಯ ನಾಡಿಯಾ ಮನೆತನದ ರಾಜಮಾತೆ ಅಮೃತಾ ರಾಯ್‌ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.

ನವದೆಹಲಿ: ತಮ್ಮ ವಿರುದ್ಧ ಕಣಕ್ಕಿಳಿಸಲು ಬಿಜೆಪಿಗೆ ಅಭ್ಯರ್ಥಿಯೇ ಇಲ್ಲ ಎಂದು ಟೀಕಿಸುತ್ತಿದ್ದ ಕೃಷ್ಣಾನಗರದ ಉಚ್ಛಾಟಿತ ಸಂಸದೆ ಮಹುವಾ ಮೊಯಿತ್ರಾಗೆ ಬಿಜೆಪಿ ಬಲವಾದ ತಿರುಗೇಟು ನೀಡಿದ್ದು, ಸ್ಥಳೀಯ ನಾಡಿಯಾ ಮನೆತನದ ರಾಜಮಾತೆ ಅಮೃತಾ ರಾಯ್‌ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.

ಕಳೆದ ಚುನಾವಣೆಯಲ್ಲಿ ಬಿಜೆಪಿಯ ಕಲ್ಯಾಣ್‌ ಚೌಬೆ ವಿರುದ್ಧ ಭರ್ಜರಿ ಜಯ ಸಾಧಿಸಿದ ಬಳಿಕ ಮಹುವಾ ಮೊಯಿತ್ರಾ ಸದನದ ಒಳಗೆ ಮತ್ತು ಹೊರಗೆ ಬಿಜೆಪಿಗೆ ಕಂಟಕವಾಗಿ ಪರಿಣಮಿಸಿದ್ದರು. ತಮ್ಮ ಹರಿತ ಪ್ರಶ್ನೆಗಳ ಮೂಲಕ ಬಿಜೆಪಿಯ ಮೇಲೆ ಆರೋಪಗಳನ್ನು ಹೊರಿಸುತ್ತಾ ಭಾರೀ ಮುಜುಗರ ಸೃಷ್ಟಿಸುತ್ತಿದ್ದರು. ಆದರೆ ಕಳೆದ ವರ್ಷ ಬಿಜೆಪಿಯ ನಿಶಿಕಾಂತ್‌ ದುಬೆ ಎಂಬ ಸಂಸದ ಮಹುವಾ ಅವರ ಮೇಲೆ ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಉದ್ಯಮಿಯಿಂದ ಲಂಚ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ ಬಳಿಕ ಅವರ ಚರಿಷ್ಮಾ ಕುಸಿದು ಸಂಸದೆಯಾಗಿ ಅನರ್ಹಗೊಂಡಿದ್ದರು. ಇದೀಗ ಟಿಎಂಸಿಯು ಮಹುವಾ ಅವರ ವಿಷಯದಲ್ಲಿ ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಗಿದೆ ಎನ್ನುತ್ತಾ ಪ್ರಚಾರ ಕೈಗೊಳ್ಳುತ್ತಿದ್ದರೆ ಬಿಜೆಪಿಯು ರಾಜಮಾತೆಯನ್ನು ಕಣಕ್ಕಿಳಿಸುವ ಮೂಲಕ ಚುನಾವಣಾ ಅಖಾಡವನ್ನು ಮತ್ತಷ್ಟು ರಂಗೇರಿಸಿದೆ.

ಟಿಎಂಸಿ ನಾಯಕಿ ಮಹುವಾಗೆ ಮತ್ತೊಂದು ಶಾಕ್, ದೆಹಲಿ ಹೈಕೋರ್ಟ್‌ನಿಂದ ಸಮನ್ಸ್!

18ನೇ ಲೋಕಸಭೆಗೆ ಏಪ್ರಿಲ್‌ 19 ರಿಂದ ಜೂನ್‌ 1 ರವರೆಗೆ ದೇಶಾದ್ಯಂತ ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಉತ್ತರ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.  ಮೊದಲ ಹಂತ ಏಪ್ರಿಲ್‌ 26 (ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ಸೆಂಟ್ರಲ್​), 2ನೇ ಹಂತದ ಚುನಾವಣೆ ಮೇ 7 (ಶಿವಮೊಗ್ಗ, ದಾವಣಗೆರೆ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ಧಾರವಾಡ, ಕೊಪ್ಪಳ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ರಾಯಚೂರು, ಬಿಜಾಪುರ ಕಲಬುರಗಿ ಮತ್ತು  ಬೀದರ್‌) ರಂದು ನಡೆಯಲಿದೆ. ಫಲಿತಾಂಶ ಜೂನ್‌ 4ಕ್ಕೆ ಪ್ರಕಟವಾಗಲಿದೆ.

ಇದು ಬಿಜೆಪಿಯ ಅಂತ್ಯದ ಆರಂಭ, ಲೋಕಸಭೆಯ ಹೊರಗೆ ಗುಡುಗಿದ ಮಹುವಾ ಮೊಯಿತ್ರಾ!

ಸಂಸದೆ ಮಹುವಾ ಮೊಯಿತ್ರಾ ಲೋಕಸಭೆ ಸದಸ್ಯತ್ವ ರದ್ದು, ಶಿಸ್ತು ಸಮಿತಿ ಶಿಫಾರಸು ಅಂಗೀಕಾರ!
 

click me!