
ನವದೆಹಲಿ: ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷದಿಂದಾಗಿ ದೇಶದಲ್ಲಿ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ನಡುವೆಯೇ ಮಾ.15ರಿಂದ ಎಲ್‌ಪಿಜಿ ಸಿಲಿಂಡರ್ ಬಳಕೆದಾರರಿಗೆ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಅಥವಾ ಕೈವೈಸಿ ಕಡ್ಡಾಯ ಮಾಡಿ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ.
ಕೆವೈಸಿ ಪೂರ್ಣಗೊಳಿಸಿದ ಗ್ರಾಹಕರಿಗಷ್ಟೇ ಆ ಬಳಿಕ ಎಲ್‌ಪಿಜಿ ಸೇವೆಗಳು ಮತ್ತು ಸಬ್ಸಿಡಿ ದೊರೆಯಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಿಳಿಸಿದೆ. ಈ ಕೆವೈಸಿ ಪ್ರಕ್ರಿಯೆಯನ್ನು ಸಂಬಂಧಪಟ್ಟ ಗ್ಯಾಸ್ ವಿತರಣಾ ಕಂಪನಿಗಳ ಆ್ಯಪ್ ಮೂಲಕ ಮನೆಯಲ್ಲಿ ಕುಳಿತೇ ಆಧಾರ್ ಕಾರ್ಡ್ ಹಾಗೂ ಫೇಸ್‌ಆರ್‌ಡಿ ಆ್ಯಪ್ ಬಳಸಿ ಸುಲಭವಾಗಿ ಪೂರ್ಣಗೊಳಿಸಬಹುದು ಎಂದು ಸಚಿವಾಲಯ ಗ್ರಾಹಕರಿಗೆ ಮಾಹಿತಿ ನೀಡಿದೆ.
ಇದನ್ನೂ ಓದಿ: RSS ಸಂಘಟನೆಗೆ ನಿರ್ಬಂಧ ಹೇರಿ, ಆಸ್ತಿ ಜಪ್ತಿ ಮಾಡಿ: ಅಮೆರಿಕ ಧಾರ್ಮಿಕ ಸ್ವಾತಂತ್ರ್ಯ ಆಯೋಗದಿಂದ ಸರ್ಕಾರಕ್ಕೆ ಶಿಫಾರಸು
ಪ್ರಮುಖ ಸರ್ಕಾರಿ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಕಾರ್ಪೊ ರೇಷನ್ ಲಿ. ಮತ್ತು ಹಿಂದೂಸ್ತಾನ ಪೆಟ್ರೋಲಿಯಂ ಕಾರ್ಪೊರೇಷನ್ ಲಿ. ಕಂಪನಿಗಳ ಗ್ರಾಹಕರಿಗೆ ಕೇಂದ್ರದ ಈ ಹೊಸ ನಿಯಮ ಅನ್ವಯವಾಗಲಿದೆ.
ಹೀಗೆ ಕೆವೈಸಿ ಪ್ರಕ್ರಿಯೆ ಮಾಡಿ
ಇದನ್ನೂ ಓದಿ: ಬಾರಾಮತಿ ಕ್ಷೇತ್ರದ ಉಪ ಚುನಾವಣೆ: ಅತ್ತಿಗೆ ಸುನೇತ್ರಾ ಪವಾರ್ ವಿರುದ್ಧ NCP ಅಭ್ಯರ್ಥಿ ಕಣಕ್ಕಿಳಿಸಲ್ಲ ಎಂದ ಸುಪ್ರಿಯಾ ಸುಳೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ