
ನವದೆಹಲಿ(ಸೆ.30) ತಿರುಪತಿ ಲಡ್ಡು ಪ್ರಕರಣ ದೇಶಾದ್ಯಂತ ಹಿಂದೂ ದೇವಸ್ಥಾನಗಳ ಪಾವಿತ್ರ್ಯತೆ ಕುರಿತು ಬಹು ದೊಡ್ಡ ಪ್ರಶ್ನೆ ಎಬ್ಬಿಸಿತ್ತು. ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನನ ಎಣ್ಣೆ ಬಳಸಲಾಗಿದೆ ಅನ್ನೋ ಆರೋಪವನ್ನು ಮುಖ್ಯಮಂತ್ರಿ ಚಂದ್ರಬಾಬು ನಾಯ್ದು ಮಾಡಿದ್ದರು. ಈ ಆರೋಪದ ಕಿಡಿ ಜ್ವಾಲೆಯಲ್ಲಿ ಹೊತ್ತಿ ಉರಿದಿತ್ತು. ಇದೀಗ ಈ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್, ಸಿಎಂ ಚಂದ್ರಬಾಬು ನಾಯ್ಡುಗೆ ಛೀಮಾರಿ ಹಾಕಿದೆ. ಲ್ಯಾಬ್ ವರದಿ ಸ್ಪಷ್ಟವಾಗಿಲ್ಲ, ಜುಲೈನಲ್ಲಿ ನಡೆದಿದೆ ಎನ್ನಲಾದ ಈ ಘಟನೆ ಕುರಿತು ಸೆಪ್ಟೆಂಬರ್‌ನಲ್ಲಿ ಪ್ರಶ್ನಿಸಲಾಗಿದೆ. ದೂರು ನೀಡುವ ಮೊದಲೇ ಮಾಧ್ಯಮದ ಎದುರು ಪ್ರಶ್ನಿಸಿದ್ದು ಯಾಕೆ ಎಂಬ ಕೆಲ ಮಹತ್ವದ ವಿಚಾರಗಳನ್ನು ನಾಯ್ಡು ಅವರನ್ನು ಕೋರ್ಟ್ ಪ್ರಶ್ನಿಸಿದೆ.
ದೇವರನ್ನು ನಿಮ್ಮ ಕೆಟ್ಟ ರಾಜಕೀಯದಿಂದ ದೂರವಿಡಿ ಎಂದು ಸುಪ್ರೀಂ ಕೋರ್ಟ್ ಖಡಕ್ ಸಂದೇಶ ನೀಡಿದೆ. ಲಡ್ಡು ಕುರಿತು ಜುಲೈ ತಿಂಗಳಲ್ಲಿ ಲ್ಯಾಬ್ ವರದಿ ಬಂದಿದೆ. ಈ ವರದಿಯಲ್ಲಿ ಸ್ಪಷ್ಟತೆ ಇಲ್ಲ. ದೇವಸ್ಥಾನದ ಲಡ್ಡುಪ್ರಸಾದದಲ್ಲಿ ದನದ ಕೊಬ್ಬು, ಮೀನನ ಎಣ್ಣೆ ಬಳಕೆಯಾಗಿದೆ ಅನ್ನೋದಕ್ಕೆ ಸ್ಪಷ್ಟ ಸಾಕ್ಷ್ಯಗಳು ಲಭ್ಯವಿಲ್ಲ. ಜುಲೈ ವರದಿಯನ್ನು ಇದೀಗ ತೋರಿಸಿ ಹೇಳಿಕೆ ನೀಡುತ್ತಿದ್ದೀರಿ, ಇಷ್ಟು ದಿನ ಸುಮ್ಮನಿದ್ದಿದ್ದು ಯಾಕೆ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಸಾಂವಿದಾನಿಕ ಹುದ್ದೆಯಲ್ಲಿದ್ದು ದೇವರನ್ನು ರಾಜಕೀಯದಿಂದ ದೂರವಿಡಿ ಎಂದು ಕಿವಿ ಮಾತು ಹೇಳಿದೆ.
ತಿರುಪತಿ ಲಡ್ಡು ಅಪವಿತ್ರ: ಪುತ್ತೂರಿನಲ್ಲಿ ಖಾಸಗಿ ದೂರು ದಾಖಲು!
ತಿರುಪತಿ ಲಡ್ಡು ಪ್ರಸಾದಲ್ಲಿ ಹಿಂದಿನ ಜಗನ್ ಮೋಹನ್ ರೆಡ್ಡಿ ಸರ್ಕಾರ ಪಾವಿತ್ರ್ಯತೆ ಕಾಪಾಡಿಕೊಳ್ಳುವಲ್ಲಿ ವಿಫಲವಾಗಿದೆ. ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಹಾಗೂ ಮೀನಿನ ಎಣ್ಣೆ ಬಳಸಲಾಗಿದೆ ಅನ್ನೋ ಗಂಭೀರ ಆರೋಪವನ್ನು ಸಿಎಂ ಚಂದ್ರಬಾಬು ನಾಯ್ದು ಮಾಡಿದ್ದರು. ಇದು ಕೋಲಾಹಲಕ್ಕೆ ಕಾರಣವಾಗಿತ್ತು. ಮಾಧ್ಯಮಗಳ ಮುಂದೆ ಚಂದ್ರಬಾಬು ನಾಯ್ಡು ಲ್ಯಾಬ್ ವರದಿಯನ್ನು ಬಹಿರಂಗಪಡಿಸಿದ್ದರು.
ಈ ಲ್ಯಾಬ್ ವರದಿಯಿಂದ ದೇಶಾದ್ಯಂತ ಆತಂಕ ಸೃಷ್ಟಿಯಾಗಿತ್ತು. ಈ ಆರೋದ ಬಳಿಕ ತಿರುಪತಿ ದೇವಸ್ಥಾನ ಅಪವಿತ್ರಗೊಂಡಿದೆ ಎಂದು ಶುದ್ಧೀಕರಣ ಮಾಡುವ ಪ್ರಯತ್ನವನ್ನು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮಾಡಿದ್ದರು. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಭಾರಿ ಪರ ವಿರೋಧಗಳು ವ್ಯಕ್ತವಾಗಿತ್ತು. ಆರೋಪವನ್ನು ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನಿರಾಕರಿಸಿದ್ದರು. ಇದು ನಾಯ್ಡು ರಾಜಕೀಯ ಪ್ರೇರಿತ ಹೇಳಿಕೆ ಎಂದು ತಿರುಗೇಟು ನೀಡಿದ್ದರು. ಇತ್ತ ಪವನ್ ಕಲ್ಯಾಣ್ ಇದೇ ವಿಚಾರದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಹಲವರ ಜೊತೆ ಟಾಕ್ ವಾರ್ ನಡೆಸಿದ್ದರು.
‘ನಾಯ್ಡು ಪಾಪ ಪರಿಹಾರ’ಕ್ಕೆ ಜಗನ್ ಪಕ್ಷದಿಂದ ‘ಪ್ರಾಯಶ್ಚಿತ್ತ ಪೂಜೆ’
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ